ಚಿಕ್ಕಮಗಳೂರು: ಕಡೂರು ತಾಲೂಕಿನ ಲಿಂಗ್ಲಾಪುರ ಟೋಲ್ ಬಳಿ ಸ್ಥಳೀಯರು ದಿಢೀರ್ ಪ್ರತಿಭಟನೆ ನಡೆಸಿದ ಘಟನೆ ಸೋಮವಾರ (ಆ.12) ನಡೆಯಿತು.
ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನಲ್ಲಿ ರಸ್ತೆ ಪೂರ್ಣವಾಗದೇ ಟೋಲ್ ಸಂಗ್ರಹ ಮಾಡುತ್ತಿದ್ದು, ಸ್ಥಳೀಯರಿಂದಲೂ ಟೋಲ್ ಸಂಗ್ರಹ ಮಾಡುತ್ತಿದ್ದಾರೆ ಎಂದು ಆರೋಪಿಸಿ ಸ್ಥಳಿಯರು ಪ್ರತಿಭಟನೆ ನಡೆಸಿದ್ದಾರೆ.
ರಾಷ್ಟ್ರೀಯ ಹೆದ್ದಾರಿ 206ರಲ್ಲಿರುವ ಟೋಲ್ ಬಳಿ ಈ ಹಿಂದೆ ಟೋಲ್ ಸಂಬಂಧಿ ಹಲವು ಭಾರಿ ಗಲಾಟೆಗಳು ನಡೆದಿದ್ದು, ನಿತ್ಯ ಹೊಲ-ಗದ್ದೆ-ತೋಟಗಳಿಗೆ ಹೋಗುವಾಗೆಲ್ಲಾ ಟೋಲ್ ಕೊಡೋಕೆ ಆಗುತ್ತಾ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಮ್ಮದೇ ಊರಲ್ಲಿ ಜಮೀನು-ಮಣ್ಣು ಕೊಟ್ಟು ಈ ಪ್ರದೇಶದಲ್ಲಿ ಓಡಾಡೋಕೆ ದುಡ್ಡೂ ಕೊಡ್ಬೇಕು, ಇನ್ನು ಮುಂದೆ ಸ್ಥಳೀಯರಿಂದ ಟೋಲ್ ಸಂಗ್ರಹಕ್ಕೆ ಮುಂದಾದ್ರೆ ರಸ್ತೆ ಬಂದ್ ಮಾಡುವುದಾಗಿ ಸ್ಥಳೀಯರು ಎಚ್ಚರಿಕೆ ನೀಡಿದ್ದು ಸರ್ವಿಸ್ ರಸ್ತೆ ನಿರ್ಮಿಸುವಂತೆ ಒತ್ತಾಯಿಸಲಾಗಿದೆ.
ಈ ಸಂದರ್ಭ ಸ್ಥಳಕ್ಕೆ ಆಗಮಿಸಿದ ಕಡೂರು ಪೊಲೀಸರು ಪ್ರತಿಭಟನಾಕಾರರ ಮನವೊಲಿಸಲು ಹರಸಾಹಸ ಪಡುವಂತಾಯಿತು.