ಮೂಡುಬಿದಿರೆ : ಮೂಡುಬಿದಿರೆ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಿರ್ಮಾಣಗೊಳ್ಳಲಿರುವ ಆಕ್ಷಿಜನ್ ಘಟಕದ ಸ್ಥಳ ಪರಿಶೀಲನೆಯನ್ನು ಶಾಸಕ ಉಮಾನಾಥ್ ಕೋಟ್ಯಾನ್ ನಡೆಸಿದರು.
ಶನಿವಾರ ಇಲಾಖೆಯ ಅಧಿಕಾರಿಗಳು ಹಾಗೂ ಎಂಜಿನಿಯರ್ ಗಳೊಂದಿಗೆ ಭೇಟಿ ನೀಡಿ ಸ್ಥಳ ಪರಿಶೀಲಿಸಿದರು.
ಕೋವಿಡ್ ಸೋಂಕಿತರಿಗೆ ಉತ್ತಮ ಆರೋಗ್ಯ ವ್ಯವಸ್ಥೆಯನ್ನು ಕಲ್ಪಿಸುವ ದೃಷ್ಟಿಯಿಂದ ಮೂಡುಬಿದಿರೆ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಆಮ್ಲಜನಕ ಕೊರತೆಯಾಗದಂತೆ ಸಂಸದರಾದ ನಳಿನ್ ಕುಮಾರ್ ಕಟೀಲ್ ಮತ್ತು ಶಾಸಕರಾದ ಉಮಾನಾಥ್ ಕೋಟ್ಯಾನ್ ಅವರ ಶಿಫಾರಸ್ಸಿನ ಮೇರೆಗೆ ಕೆ.ಐ.ಓ.ಸಿ.ಎಲ್. ಲಿಮಿಟೆಡ್ ಮಂಗಳೂರು ಇದರ ಸಿ.ಎಸ್. ಆರ್ ಅನುದಾನದಲ್ಲಿ ನಿರ್ಮಿಸಲು ಉದ್ದೇಶಿಸಲಾಗಿದೆ.
ನಲ್ವತ್ತು ಲಕ್ಷ ರೂ. ವೆಚ್ಚದಲ್ಲಿ ಆಕ್ಸಿಜನ್ ಘಟಕವೂ ಆರು ಲಕ್ಷ ರೂ. ವೆಚ್ಚದಲ್ಲಿ ಐವತ್ತು ಬೆಡ್, ಕಾಟ್ ಗಳೂ ಕೆಐಓಸಿಎಲ್ ನಿಂದ ಒದಗಿಬರಲಿವೆ.
ಈ ಸಂದರ್ಭದಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ. ಸುಜಯ್, ಕೆ.ಐ.ಒ.ಸಿ.ಎಲ್. ಕಂಪೆನಿಯ ಅಧಿಕಾರಿಗಳು, ಸ್ಥಳೀಯ ಪುರಸಭಾ ಸದಸ್ಯರಾದ ರಾಜೇಶ್ ನಾಯ್ಕ್, ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಶಶಿಕಲಾ ಉಪಸ್ಥಿತರಿದ್ದರು