Advertisement

ಸ್ವಾತಂತ್ರ್ಯ ದಿನಾಚರಣೆಗೆ ಸ್ಥಳ ಪರಿಶೀಲನೆ

02:56 PM Aug 12, 2020 | Suhan S |

ವಿಜಯಪುರ: ಜಿಲ್ಲಾಡಳಿತದಿಂದ ಆ. 15ರಂದು ಸ್ವಾತಂತ್ರ್ಯೊತ್ಸವ ಆಚರಣೆಗಾಗಿ ಅಪರ ಜಿಲ್ಲಾಧಿಕಾರಿ ಡಾ| ಔದ್ರಾಮ್‌ ಅವರು ತೊರವಿ ಬಳಿ ಇರುವ ಕರ್ನಾಟಕ ರಾಜ್ಯ ಅಕ್ಕ ಮಹಾದೇವಿ ಮಹಿಳಾ ವಿವಿ ಕ್ರೀಡಾಂಗಣದಲ್ಲಿ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲಿಸಿದರು.

Advertisement

ಸ್ವಾತಂತ್ರ್ಯ ದಿನಾಚರಣೆಗಾಗಿ ಯಾವುದೇ ಲೋಪ ಇಲ್ಲದಂತೆ ಪೂರ್ವ ಸಿದ್ಧತೆ ಮಾಡಿಕೊಳ್ಳಬೇಕು. ಶಿಷ್ಟಾಚಾರದಂತೆ ಗಣ್ಯರನ್ನು ಆಹ್ವಾನಿಸಬೇಕು. ಕಾರ್ಯಕ್ರಮ ಆರಂಭಕ್ಕೆ ಮುನ್ನ ಗಣ್ಯರಿಗೆ  ಕ್ರೀಡಾಂಗಣದಲ್ಲಿರುವ ದೈಹಿಕ ಶಿಕ್ಷಣ ಅದ್ಯಯನ ಕೇಂದ್ರದಲ್ಲಿ ಆಸನದ ವ್ಯವಸ್ಥೆ ಮಾಡಿಕೊಳ್ಳಬೇಕು. ಧ್ವಜಾರೋಹಣ ಸಂದರ್ಭದಲ್ಲಿ ಪತ್ರಕರ್ತರಿಗೆ ಆಸನದ ವ್ಯವಸ್ಥೆ ಮಾಡಿಕೊಳ್ಳಬೇಕು. ಪರೇಡ್‌ ಕೈಗೊಳ್ಳುವಾಗ ಯಾವುದೇ ರೀತಿಯಲ್ಲಿ ಲೋಪಗಳಾಗದಂತೆ ಪರೇಡ್‌ ಸ್ಥಳ ಸಿದ್ಧಪಡಿಸಿಕೊಳ್ಳಬೇಕು ಎಂದು ಸೂಚಿಸಿದರು.

ಕೋವಿಡ್‌-19 ಸಾಂಕ್ರಾಮಿಕ ರೋಗ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಕ್ರೀಡಾಂಗಣದ ಪ್ರವೇಶ ದ್ವಾರದಲ್ಲಿ ಮಾಸ್ಕ್ ಹಾಗೂ ಸ್ಯಾನಿಟೈಸರ್‌ ವ್ಯವಸ್ಥೆ, ಸಾಮಾಜಿಕ ಅಂತರ ಕಾಪಾಡಿಕೊಳ್ಳುವಂತೆ ನೋಡಿಕೊಳ್ಳಬೇಕು. ಕಾರ್ಯಕ್ರಮದ ಪೂರ್ವ ಸಿದ್ಧತೆಯಾಗಿ ಪರೇಡ್‌ ಮಾಡಲು ಹಾಗೂ ಧ್ವಜಾರೋಹಣಕ್ಕೆ ಮೊದಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ವಿಜಯಪುರ ಉಪ ವಿಭಾಗಾಧಿಕಾರಿ ಸೋಮಲಿಂಗ ಗೆಣ್ಣೂರ, ತಹಶೀಲ್ದಾರ್‌ ಮೋಹನಕುಮಾರಿ, ನಿಂಗಪ್ಪ ಗೋಠೆ, ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಎಸ್‌.ಜಿ. ಲೋಣಿ ಸೇರಿದಂತೆ ಇತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next