Advertisement

ಶಿವಮೊಗ್ಗ ನಗರದಲ್ಲಿ ಮಧ್ಯಾಹ್ನ 3ಗಂಟೆಯಿಂದ ಲಾಕ್‍ಡೌನ್ ಜಾರಿ

12:02 AM Jul 15, 2020 | Hari Prasad |

ಶಿವಮೊಗ್ಗ: ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಜುಲೈ 14ರಿಂದ ಅನ್ವಯವಾಗುವಂತೆ ಮುಂದಿನ ಆದೇಶದವರೆಗೆ ಪ್ರತಿದಿನ ಮಧ್ಯಾಹ್ನ 3ಗಂಟೆಯಿಂದ ಮರುದಿನ ಮುಂಜಾನೆ 5 ಗಂಟೆಯವರೆಗೆ ಎಲ್ಲಾ ಅಂಗಡಿ ಮುಂಗಟ್ಟುಗಳ ವ್ಯವಹಾರಗಳನ್ನು ನಿಷೇಧಿಸಿ ಲಾಕ್‍ಡೌನ್ ಜಾರಿಗೊಳಿಸಲಾಗಿದೆ ಎಂದು ಶಿವಮೊಗ್ಗ ಮಹಾನಗರ ಪಾಲಿಕೆ ಆಯುಕ್ತ ಚಿದಾನಂದ ವಟಾರೆ ಅವರು ತಿಳಿಸಿದ್ದಾರೆ.

Advertisement

ಆದರೆ ಈ ಅವಧಿಯಲ್ಲಿ ಆಸ್ಪತ್ರೆಗಳು, ಔಷಧ ಅಂಗಡಿಗಳು, ಹಾಲು ಮಾರಾಟ ಕೇಂದ್ರಗಳು, ಕೈಗಾರಿಕಾ ವಸಾಹತು ಪ್ರದೇಶದಲ್ಲಿರುವ ಕೈಗಾರಿಕೆಗಳಿಗೆ ಈ ಲಾಕ್‍ಡೌನ್‍ನಿಂದ ವಿನಾಯಿತಿ ನೀಡಲಾಗಿದೆ ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next