ಕಲಬುರಗಿ: ಮಹಾನಗರ ಪಾಲಿಕೆ ಆಯುಕ್ತ ಸ್ನೇಹಲ್ ಸುಧಾಕರ್ ಲೋಖಂಡೆ ನೇತೃತ್ವದಲ್ಲಿ ಕದ್ದುಮುಚ್ಚಿ ರಾತ್ರೋರಾತ್ರಿ ಪ್ಲಾಸ್ಟಿಕ್ ಉತ್ಪಾದಿಸುತ್ತಿದ್ದ ಕಾರ್ಖಾನೆಯೊಂದಕ್ಕೆ ಅಧಿಕಾರಿಗಳು ದಾಳಿ ನಡೆಸಿ ಕಾರ್ಖಾನೆಗೆ ಬೀಗ ಜಡಿದಿದ್ದಾರೆ.
ಇಲ್ಲಿನ ಕಪನೂರ ಕೈಗಾರಿಕಾ ವಸಾಹತು ಪ್ರದೇಶದಲ್ಲಿ ಕಾರ್ಖಾನೆಯನ್ನು ರಾತ್ರಿ ವೇಳೆಆರಂಭಿಸಿ, ಪ್ಲಾಸ್ಟಿಕ್ ಉತ್ಪಾದಿಸಲಾಗುತ್ತಿತ್ತು. ಅಲ್ಲದೇ, ರಾತ್ರೋರಾತ್ರಿ ಪ್ಲಾಸ್ಟಿಕ್ ವಸ್ತುಗಳನ್ನು ಸಾಗಿಸಲಾಗುತ್ತಿತ್ತು. ಈ ಬಗ್ಗೆ ಖಚಿತ ಮಾಹಿತಿದೊರೆತ ಮೇರೆಗೆ ಪಾಲಿಕೆ ಆಯುಕ್ತ ಸ್ನೇಹಲ್‌ಸುಧಾಕರ್ ಲೋಖಂಡೆ ನೇತೃತ್ವದಲ್ಲಿ ಅಧಿಕಾರಿಗಳು ಸೋಮವಾರ ದಾಳಿ ಮಾಡಿದ್ದರು. ಕಾರ್ಖಾನೆಯಲ್ಲಿ ಸಂಗ್ರಹಿಸಿದ್ದ ಒಂದು ಟನ್‌ಗೂ ಅಧಿಕ ಪ್ಲಾಸ್ಟಿಕ್ ಜಪ್ತಿ ಮಾಡಲಾಗಿದೆ.
ಜತೆಗೆ 10 ಟನ್‌ನಷ್ಟು ಕಚ್ಚಾ ಪ್ಲಾಸ್ಟಿಕ್‌ನ್ನು ವಶಕ್ಕೆ ಪಡೆಯಲಾಗಿದೆ. ಹೊರಗಡೆಯಿಂದ ಬಾಗಿಲು ಹಾಕಿ ಒಳಗಡೆ ಪ್ಲಾಸ್ಟಿಕ್ ಉತ್ಪಾದಿಸಲಾಗಿತ್ತು. ಪಾಲಿಕೆ ಅಧಿಕಾರಿಗಳೊಂದಿಗೆ ಪರಿಸರ ಮಾಲಿನ್ಯ ನಿಯಂತ್ರಣ ಅಧಿಕಾರಿಗಳು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.
ಮನೆಯಲ್ಲಿ ಸಂಗ್ರಹ: ಪ್ಲಾಸ್ಟಿಕ್ ನಿಯಂತ್ರಣಕ್ಕೆನಿರಂತರವಾಗಿ ಕಾರ್ಯಾಚರಣೆ ನಡೆಸುತ್ತಿದ್ದರೂ,ಕಡಿವಾಣ ಹಾಕಲು ಸಾಧ್ಯವಾಗುತ್ತಿಲ್ಲ. ಇದಕ್ಕೆ ಮುಖ್ಯ ಕಾರಣ ಹೈದ್ರಾಬಾದ್‌ನಿಂದ ಪ್ಲಾಸ್ಟಿಕ್ ತರಿಸಿಕೊಂಡು ಮನೆಯಲ್ಲಿ ಸಂಗ್ರಹಮಾಡುತ್ತಿರುವುದು. ಶೇ.75ಕ್ಕಿಂತ ಪ್ಲಾಸ್ಟಿಕ್‌ಹೈದ್ರಾಬಾದ್‌ನಿಂದಲೇ ಸರಬರಾಜು ಆಗುತ್ತಿದೆ ಎನ್ನುತ್ತಾರೆ ಪಾಲಿಕೆ ಅಧಿಕಾರಿಗಳು. ಸಗಟು ವ್ಯಾಪಾರಿಗಳು ಮತ್ತು ವರ್ತಕರು ಹೈದ್ರಾಬಾದ್‌ನಿಂದ ಪ್ಲಾಸ್ಟಿಕ್ ಕ್ಯಾರಿಬ್ಯಾಗ್‌ಗಳು, ಟೀ, ನೀರಿನ ಲೋಟಾಗಳನ್ನು ತಂದು ಮನೆಯಲ್ಲಿ ಸಂಗ್ರಹಿಸುತ್ತಿದ್ದಾರೆ. ಇದರಿಂದ ಅಂಗಡಿಗಳ ಮೇಲೆ ದಾಳಿ ಮಾಡಿದರೂ, ಸ್ಪಲ್ವ ಪ್ರಮಾಣದ ಪ್ಲಾಸ್ಟಿಕ್ ಪತ್ತೆಯಾಗುತ್ತಿದೆ. ಮರು ದಿನ ಮತ್ತೆ ಅಂಗಡಿಗಳಲ್ಲಿ ಪ್ಲಾಸ್ಟಿಕ್ ಬಳಕೆ ಮಾಡುವ ಪರಿಪಾಠವನ್ನು ವ್ಯಾಪಾರಿಗಳು ಬೆಳೆಸಿಕೊಂಡಿದ್ದಾರೆ ಎಂದು ಉಪ ಆಯುಕ್ತ ಆರ್.ಪಿ. ಜಾಧವ್ ಬೇಸರ ವ್ಯಕ್ತಪಡಿಸಿದರು.
ಕಳೆದ ಒಂದು ತಿಂಗಳ ಅವಧಿಯಲ್ಲೇ ಸುಮಾರು 40 ಟನ್ ಪ್ಲಾಸ್ಟಿಕ್ ಜಪ್ತಿ ಮಾಡಲಾಗಿದೆ. ಬೀದಿ ವ್ಯಾಪಾರಿಗಳು ವ್ಯಾಪಕವಾಗಿ ಪ್ಲಾಸ್ಟಿಕ್ ಬಳಕೆ ಮಾಡುತ್ತಿದ್ದಾರೆ. ದಂಡ ಹಾಕಿದರೂ ವ್ಯಾಪಾರಿಗಳು ಮಣಿಯುತ್ತಿಲ್ಲ. ಹೀಗಾಗಿ ಮತ್ತಷ್ಟು ಕಠಿಣ ಕ್ರಮ ಕೈಗೊಳ್ಳಲು ಯೋಜಿಸಲಾಗಿದೆ. ಮೇಲಾಗಿ ಸಾರ್ವಜನಿಕರು ಪ್ಲಾಸ್ಟಿಕ್ ದುಷ್ಪರಿಣಾಮಅರಿತು ಬಳಕೆ ಮಾಡುವುದನ್ನು ನಿಲ್ಲಿಸಬೇಕು. ಪ್ರತಿಯೊಬ್ಬರೂ ಬಟ್ಟೆ ಅಥವಾ ಪರಿಸರ ಸ್ನೇಹಿ ಚೀಲಗಳನ್ನು ಉಪಯೋಗಿಸುವ ಮೂಲಕ ಪ್ಲಾಸ್ಟಿಕ್ ನಿರ್ಮೂಲನೆಗೆ ಸಹಕಾರ ನೀಡಬೇಕು ಎನ್ನುತ್ತಾರೆ ಅವರು.