Advertisement
ಫೇಸ್‌ಬುಕ್ ಲೈವ್‌ನಲ್ಲಿ ಮಾತನಾಡಿದ ಅವರು,ಇದೂವರೆಗೆ ಪ್ರತಿನಿತ್ಯ ಬೆಳಗ್ಗೆ 6 ರಿಂದ 10 ರವರೆಗೆಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿತ್ತು.ಇನ್ನು ಮುಂದೆ ಪ್ರತಿ ಸೋಮವಾರ ಮತ್ತು ಗುರುವಾರ ಮಾತ್ರ ಬೆಳಗ್ಗೆ 6 ರಿಂದ ಮಧ್ಯಾಹ್ನ 12ರವರೆಗೆಅವಕಾಶ ನೀಡಲಾಗುವುದು. ಉಳಿದ ದಿನಗಳಲ್ಲಿಹಾಲಿನ ಬೂತ್‌ಗಳು, ವೈದ್ಯಕೀಯ ಸೇವೆಗಳು,ಹಾಪ್‌ಕಾಮ್ಸ್ ನಡಿ ಬರುವ ತರಕಾರಿ ಮತ್ತು ಹಣ್ಣಿನಅಂಗಡಿಗಳು, ನ್ಯಾಯ ಬೆಲೆ ಅಂಗಡಿಗಳನ್ನುಹೊರತು ಪಡಿಸಿ ಉಳಿದ ಎಲ್ಲ ರೀತಿಯ ಚಟುವಟಿಕೆಗಳನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ.
Related Articles
Advertisement
ಫೇಸ್‌ಬುಕ್ ಲೈವ್‌ನಲ್ಲಿ ಮಾತನಾಡಿದ ಅವರು, ಕೊರೊನಾದಿಂದಉಂಟಾಗುತ್ತಿರುವ ಮರಣ ಪ್ರಮಾಣ ಮತ್ತು ಬ್ಲ್ಯಾಕ್ ಫಂಗಸ್‌ಕಡಿಮೆಗೊಳಿಸುವ ಉದ್ದೇಶದಿಂದ ಈಗಾಗಲೇ ಮನೆ ಮನೆ ಸರ್ವೆಕಾರ್ಯ ನಡೆಯುತ್ತಿದೆ ಎಂದರು.ಜಿಲ್ಲೆಯಲ್ಲಿ 16,611 ಸಕ್ರಿಯ ಸೋಂಕಿತರಿದ್ದು, ರಾಜ್ಯದ ಪಾಸಿಟಿವಿಟಿಗೆ ಹೋಲಿಕೆ ಮಾಡಿದರೆ ಜಿಲ್ಲೆಯಲ್ಲಿ ಶೇ. 40 ರಿಂದ 41ರಷ್ಟಿದೆ.ಇದನ್ನು ಕಡಿಮೆಗೊಳಿಸಬೇಕು. ರಾಜ್ಯದಲ್ಲಿಯೇ ಅತಿ ಹೆಚ್ಚು ಮಂದಿಗೆನಮ್ಮಲ್ಲಿ ಲಸಿಕೆ ನೀಡಿರುವುದರಿಂದ ಸಾವಿನ ಪ್ರಮಾಣ ಕಡಿಮೆ ಇದೆ.ಜಿಲ್ಲೆಯಲ್ಲಿ ಶೇ.0.63 ಸಾವಿನ ಪ್ರಮಾಣ ದಾಖಲಾಗಿದೆ. ನಗರ ಮತ್ತುಗ್ರಾಮಾಂತರ ಪ್ರದೇಶದಲ್ಲಿ ರಾಜ್ಯದಲ್ಲಿಯೇ ಅತಿ ಹೆಚ್ಚು ಮಂದಿಗೆಲಸಿಕೆ ಹಾಕಿದ ಹೆಗ್ಗಳಿಕೆಗೆ ಮೈಸೂರು ಜಿಲ್ಲೆಗಿದೆ ಎಂದು ಹೇಳಿದರು.ನಿತ್ಯ ಅಧಿಕಾರಿಗಳ ಸಭೆ ನಡೆಸುತ್ತಿದ್ದು, ಪ್ರತಿ ಸಾವಿನ ನಿಖರ ಕಾರಣದ ಕುರಿತು ವಿಶ್ಲೇಷಣೆ ನಡೆಸಲಾಗುತ್ತಿದೆ. ಈ ಸಂದರ್ಭದಲ್ಲಿನಮಗೆ ಕಂಡುಬಂದ ಪ್ರಮುಖ ಅಂಶವೆಂದರೆ ರೋಗಿಗಳು ಲಕ್ಷಣಕಾಣಿಸಿ ಕೊಂಡ ಹಲವು ದಿನಗಳ ಬಳಿಕ ಆಸ್ಪತ್ರೆಗೆ ದಾಖಲಾಗುತ್ತಿರುವುದು. ಕೋವಿಡ್ ಮಿತ್ರ ಮೂಲಕ 24 ಸಾವಿರ ಮಂದಿ ಸೌಲಭ್ಯಪಡೆದಿದ್ದಾರೆ ಎಂದು ಜಿಲ್ಲಾಧಿಕಾರಿ ಸಿಂಧೂರಿ ತಿಳಿಸಿದರು.