ಪ್ರತೀದಿನ ರಾತ್ರಿ 9ರಿಂದ ಬೆಳಗ್ಗೆ 5 ಗಂಟೆಯವರೆಗೆ ಜಿಲ್ಲೆಯಲ್ಲಿ ಕರ್ಫ್ಯೂ ಹಾಗೂ ರವಿವಾರ ಪೂರ್ಣ ದಿನದ ಲಾಕ್‌ಡೌನ್ ಜಾರಿಯಲ್ಲಿರಲಿದೆ.
Advertisement
ಗುರುವಾರದಿಂದ ಜಿಲ್ಲೆಯಾದ್ಯಂತ ಶೇ.50ರಷ್ಟು ಖಾಸಗಿ ಹಾಗೂ ಸರಕಾರಿ ಬಸ್‌ಗಳು ಸಂಚಾರ ಆರಂಭಿಸಲಿವೆ. ಈ ಮೂಲಕ ಜನಸಂಚಾರ ಆರಂಭವಾಗಲಿದೆ. ಜಿಲ್ಲಾಧಿಕಾರಿ ಕಚೇರಿ, ಮಂಗಳೂರು ಪಾಲಿಕೆ ಸೇರಿದಂತೆ ಎಲ್ಲ ಸರಕಾರಿ ಕಚೇರಿಗಳು ಕೂಡ ಕನಿಷ್ಠ ಸಿಬಂದಿ ಮೂಲಕ ತೆರೆಯಲಿವೆ. ಮದ್ಯಮಾರಾಟಕ್ಕೂ ಅವಕಾಶ ಕಲ್ಪಿಸಲಾಗಿದೆ. ಗುರುವಾರದಿಂದ ದೇವಸ್ಥಾನಗಳಲ್ಲಿ ದೇವರ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಆದರೆ, ಜು.25ರ ನಾಗರ ಪಂಚಮಿ ದಿನದಂದು ನಾಗ ದೇವರ ಸನ್ನಿಧಿಗೆ ಭಕ್ತಾದಿಗಳ ಪ್ರವೇಶಕ್ಕೆ ನಿರ್ಬಂಧವಿರಲಿದೆ ಎಂದು ಅಪರ ಜಿಲ್ಲಾಧಿಕಾರಿ ಎಂ.ಜೆ.ರೂಪಾ ತಿಳಿಸಿದ್ದಾರೆ.