Advertisement

ಬೀದರ-ಯಾದಗಿರಿಯಲ್ಲಿ ಲಾಕ್‌ಡೌನ್‌ ತೆರವು

09:36 AM Jul 22, 2020 | Suhan S |

ಬೀದರ: ಕೋವಿಡ್ ಸೋಂಕು ನಿಯಂತ್ರಣಕ್ಕಾಗಿ ಗಡಿನಾಡು ಬೀದರ ಮತ್ತು ಯಾದಗಿರಿ ಜಿಲ್ಲೆಯಲ್ಲಿ ಜಾರಿಗೊಳಿಸಿದ್ದ ಲಾಕ್‌ಡೌನ್‌ ಜು. 22ರ ಬೆಳಗ್ಗೆ 5 ಗಂಟೆಗೆ ತೆರವಾಗಲಿದೆ.

Advertisement

ಎರಡೂ ಜಿಲ್ಲೆಗಳಲ್ಲಿ ಜು. 15ರಿಂದ 22ರವರೆಗೆ ಲಾಕ್‌ಡೌನ್‌ ಜಾರಿಗೊಳಿಸಲಾಗಿತ್ತು. ಇನ್ನೂ ಒಂದು ವಾರ ಲಾಕ್‌ಡೌನ್‌ ವಿಸ್ತರಿಸಬೇಕೆಂಬ ಅಭಿಪ್ರಾಯ ಸಾರ್ವಜನಿಕ ವಲಯದಿಂದ ವ್ಯಕ್ತವಾಗಿತ್ತು. ಆದರೆ, ಕೋವಿಡ್‌ ನಿಯಂತ್ರಣಕ್ಕೆ ಲಾಕ್‌ಡೌನ್‌ ಪರಿಹಾರವಲ್ಲವಾದ್ದರಿಂದ ಅದನ್ನು ವಿಸ್ತರಿಸಲಾಗಿಲ್ಲ ಎಂದು ಉಸ್ತುವಾರಿ ಸಚಿವ ಪ್ರಭು ಚವ್ಹಾಣ ತಿಳಿಸಿದ್ದಾರೆ. ಮುಂದೆಯೂ ಸಹ ಯಾರೂ ಅನಾವಶ್ಯಕವಾಗಿ ಹೊರಗಡೆ ತಿರುಗಾಡಬಾರದು. ಸಾರ್ವಜನಿಕ ಸ್ಥಳಗಳಲ್ಲಿ ತಪ್ಪದೇ ಮಾಸ್ಕ್ ಧರಿಸಬೇಕು. ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ವಯಸ್ಸಾದವರು ಹಾಗೂ ಮಕ್ಕಳು ಸಾಧ್ಯವಾದಷ್ಟು ಮನೆಯಲ್ಲಿಯೇ ಇರುವುದು ಸುರಕ್ಷಿತ ಎಂದಿರುವ ಸಚಿವರು, ಕೊರೊನಾ ನಿಯಂತ್ರಿಸಲು ಸರ್ಕಾರವು ಶಕ್ತಿ ಮೀರಿ ಪ್ರಯತ್ನಿಸುತ್ತಿದೆ. ಇದರಲ್ಲಿ ಸಾರ್ವಜನಿಕರ ಪಾತ್ರ ಮಹತ್ವದ್ದಾಗಿದೆ. ಶ್ರಾವಣ ಸೇರಿದಂತೆ ವಿವಿಧ ಹಬ್ಬಗಳನ್ನು ಜನ ತಮ್ಮ ತಮ್ಮ ಮನೆಗಳಲ್ಲಿಯೇ ಆಚರಿಸಬೇಕು ಎಂದು ಮನವಿ ಮಾಡಿದ್ದಾರೆ.

ಬೀದರ ಜಿಲ್ಲೆಯಿಂದ ಸಾರಿಗೆ ಸಂಚಾರವೂ ಎಂದಿನಂತೆ ಇರಲಿದ್ದು, ಸದ್ಯ ಕಲಬುರಗಿಗೆ ಮಾತ್ರ ಅಂತರ ಜಿಲ್ಲಾ ಬಸ್‌ಗಳು ಕಾರ್ಯಾಚರಣೆ ನಡೆಸಲಿವೆ. ತೆಲಂಗಾಣಾ ಮತ್ತು ಮಹಾರಾಷ್ಟ್ರಕ್ಕೆ ಬಸ್‌ ಸಂಚಾರ ನಿಷೇಧ ಮುಂದುವರಿದಿದೆ.

Advertisement

Udayavani is now on Telegram. Click here to join our channel and stay updated with the latest news.

Next