Advertisement
ಕೊಪ್ಪಳದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಸೋಂಕು ಹೆಚ್ಚುತ್ತಿದ್ದು, ಸಚಿವರ ಅಧ್ಯಕ್ಷತೆಯಲ್ಲಿ ಗಂಗಾವತಿ, ಶ್ರೀರಾಮನಗರ ಲಾಕ್‌ಡೌನ್ ಮಾಡಲು ನಿರ್ಧರಿಸಲಾಗಿತ್ತು. ಅದರೊಟ್ಟಿಗೆ ಮರ್ಲಾನಹಳ್ಳಿ, ಭಾಗ್ಯನಗರ, ಮುನಿರಾಬಾದ್, ಹಣವಾಳ, ಹುಲಿಗಿ, ಹಿರೇ ಸಿಂದೋಗಿ, ಮಂಗಳೂರು, ಹೇರೂರು, ನವಲಹಳ್ಳಿಗಳನ್ನು ಜು.21 ರಾತ್ರಿ 8ರಿಂದ 10 ದಿನದ ವರೆಗೂ ಲಾಕ್ ಡೌನ್ ಜಾರಿ ಮಾಡಲಾಗುವುದು. ಈ ಸ್ಥಳದಲ್ಲಿ ಅಗತ್ಯ ವಸ್ತುಗಳು ಹೊರತುಪಡಿಸಿ ಉಳಿದ ಅಂಗಡಿ-ಮುಂಗಟ್ಟುಗಳನ್ನು ಕಡ್ಡಾಯವಾಗಿ ಬಂದ್ ಮಾಡಲಾಗುವುದು. ಈ ಬಗ್ಗೆ ಪೊಲೀಸ್ ಇಲಾಖೆ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದರು.
Advertisement
11 ಸ್ಥಳಗಳಲ್ಲಿ ಲಾಕ್‌ಡೌನ್ ಜಾರಿ: ಡಿಸಿ
09:35 AM Jul 21, 2020 | Suhan S |
Advertisement
Udayavani is now on Telegram. Click here to join our channel and stay updated with the latest news.