Advertisement

ಗೋವಾದಲ್ಲಿ ಜೂನ್ 7 ರವರೆಗೆ ಲಾಕ್ ಡೌನ್ ವಿಸ್ತರಣೆ

04:26 PM May 29, 2021 | Team Udayavani |

ಪಣಜಿ: ಗೋವಾ ರಾಜ್ಯಾದ್ಯಂತ ಜೂನ್ 7 ರವರೆಗೆ ಕರ್ಫ್ಯೂ ವಿಸ್ತರಣೆ ಮಾಡುವ ಕುರಿತಂತೆ ರಾಜ್ಯ ಸರ್ಕಾರ ನಿರ್ಣಯ ತೆಗೆದುಕೊಂಡಿದೆ ಎಂದು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಮಾಹಿತಿ ನೀಡಿದ್ದಾರೆ.

Advertisement

ಪಣಜಿಯಲ್ಲಿ ಸುದ್ಧಿಗಾರರಿಗೆ ಮಾಹಿತಿ ನೀಡಿದ ಸಿಎಂ ಸಾವಂತ್- ಈಗಿರುವ ನಿಯಮಗಳಂತೆಯೇ ರಾಜ್ಯದಲ್ಲಿ ಜೂನ್ 7 ರ ಬೆಳಿಗ್ಗೆ 7 ಗಂಟೆಯವರೆಗೆ ಕರ್ಫ್ಯೂ ವಿಸ್ತರಣೆ ಮಾಡಲಾಗಿದೆ. ಜಿಲ್ಲಾಧಿಕಾರಿಗಳು ಈ ಆದೇಶ ಜಾರಿಗೊಳಿಸಲಿದ್ದಾರೆ ಎಂಬ ಮಾಹಿತಿ ನೀಡಿದರು.

ಇದನ್ನೂ ಓದಿ : ‘ನಾನು ಬರ್ತೇನೆ ನಿಮ್ಮನೆಗೆ…’ ಹಸುಗಳೊಂದಿಗೆ ಮನೆಗೆ ಬಂದ ಜಿಂಕೆ ಮರಿ

ಗೋವಾದಲ್ಲಿ ಸದ್ಯ ಕಫ್ರ್ಯೂ ಜಾರಿಯಲ್ಲಿದ್ದು, ಈ ಕಫ್ರ್ಯೂವನ್ನು ಇನ್ನೂ ಒಂದುವಾರ ವಿಸ್ತರಿಸಲು ಸರ್ಕಾರ ನಿರ್ಣಯ ತೆಗೆದುಕೊಂಡಿದೆ. ಸದ್ಯ ಪ್ರತಿದಿನ ಬೆಳಿಗ್ಗೆ 7 ಗಂಟೆಯಿಂದ ಮಧ್ಯಾನ್ನ 1 ಗಂಟೆಯವರೆಗೆ ಜೀವನಾವಶ್ಯಕ ವಸ್ತುಗಳ ಮಾರಾಟದ ಅಂಗಡಿ ತೆರೆಯಲು ಅವಕಾಶ ನೀಡಲಾಗಿದೆ. ವಿವಿಧ ಉದ್ಯೋಗಗಳನ್ನು ನಡೆಸಲು ಅವಕಾಶ ನೀಡಲಾಗಿದೆ. ವಾರದ ಸಂತೆ ಮತ್ತು ಮೀನು ಮಾರುಕಟ್ಟೆ ಬಂದ್ ಮಾಡಲಾಗಿದೆ. ಸಿನೆಮಾ ಥಿಯೇಟರ್, ಈಜುಕೊಳ, ಕ್ಯಾಸಿನೊ, ಸಾಂಸ್ಕೃಂತಿಕ ಕಾರ್ಯಕ್ರಮ, ಧಾರ್ಮಿಕ ಕಾರ್ಯಕ್ರಮಗಳನ್ನು ಬಂದ್ ಮಾಡಲಾಗಿದೆ. ಇದೇ ನಿಯಮಾವಳಿಗಳು ಇನ್ನೂ ಏಳು ದಿನಗಳ ಕಾಲ ಮುಂದುವರೆಯಲಿದೆ.

Advertisement

Udayavani is now on Telegram. Click here to join our channel and stay updated with the latest news.

Next