Advertisement

14ರ ವರೆಗೆ ಲಾಕ್‌ಡೌನ್‌ ವಿಸ್ತರಣೆ: ಜಿಲ್ಲಾಧಿಕಾರಿ

04:41 PM Jun 07, 2021 | Team Udayavani |

ಕಲಬುರಗಿ: ಕೋವಿಡ್‌ ಎರಡನೇ ಅಲೆ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ಲಾಕ್‌ಡೌನ್‌ ಅವ ಧಿ ವಿಸ್ತರಿಸಿರುವ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಜೂನ್‌ 7ರ ಬೆಳಗ್ಗೆ 6 ಗಂಟೆಯಿಂದ ಜೂನ್‌ 14ರ ಬೆಳಗ್ಗೆ 6 ಗಂಟೆ ವರೆಗೆ ಲಾಕ್‌ ಡೌನ್‌ ವಿಸ್ತರಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

Advertisement

ಲಾಕ್‌ಡೌನ್‌ದಲ್ಲಿ ವಿಧಿಸಿರುವ ಷರತ್ತಿಗೊಳಪಟ್ಟು ಸಿಆರ್‌ಪಿಸಿ ಕಾಯ್ದೆ 1973ರ ಕಲಂ 144ರ ಅನ್ವಯ ಜಿಲ್ಲಾಧಿಕಾರಿ ವಾಸಿರೆಡ್ಡಿ ವಿಜಯಾ ಜ್ಯೋತ್ಸ್ನಾ  ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ರವಿವಾರ ಆದೇಶ ಹೊರಡಿಸಿದ್ದಾರೆ.

ಕೃಷಿ ಚಟುವಟಿಕೆಗೆ ಅವಕಾಶ: ಲಾಕ್‌ಡೌನ್‌ ಅವಧಿಯಲ್ಲಿ ಅಂದರೆ ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 12 ಗಂಟೆ ವರೆಗೆ ಕೃಷಿ ಚಟುವಟಿಕೆಗಳಿಗೆ ಅವಕಾಶ ನೀಡಲಾಗಿದೆ ಎಂದು ಜಿಲ್ಲಾ ಧಿಕಾರಿ ತಿಳಿಸಿದ್ದಾರೆ. ಈ ಅವ ಧಿಯಲ್ಲಿ ಕೃಷಿ ಚಟುವಟಿಕೆಗಳಿಗೆ ಸಂಬಂಧಿ ಸಿದಂತೆ ಪರಿಕರಗಳು, ಯಂತ್ರೋಪಕರಣಗಳು, ಬೀಜ ಹಾಗೂ ರಸಗೊಬ್ಬರ ಮಾರಾಟಕ್ಕೆ ಅನುಮತಿ ನೀಡಲಾಗಿದೆ. ಈ ಅಂಗಡಿಗಳು ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next