ಲಕ್ನೋ: ರಾಜ್ಯದಲ್ಲಿ ಹೆಚ್ಚುತ್ತಿರುವ ಕೋವಿಡ್ 19 ಸೋಂಕಿತರ ಸಂಖ್ಯೆಯ ಕಾರಣದಿಂದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಲಾಕ್ ಡೌನ್ ಘೋಷಣೆ ಮಾಡಿದ್ದಾರೆ.
ಮೇ 15ರವರೆಗೆ ಬಿಹಾರ ರಾಜ್ಯದಲ್ಲಿ ಲಾಕ್ ಡೌನ್ ಘೋಷಿಸಲಾಗಿದೆ. ಈ ಬಗ್ಗೆ ಸ್ವತಃ ಸಿಎಂ ನಿತೀಶ್ ಕುಮಾರ್ ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ:ದೇಶದಲ್ಲಿ ಎರಡು ಕೋಟಿ ಗಡಿ ದಾಟಿದ ಕೋವಿಡ್ ಸೋಂಕಿತರ ಸಂಖ್ಯೆ
ಬಿಹಾರದಲ್ಲಿ ಸೋಮವಾರ 11,407 ಹೊಸ ಸೋಂಕು ಪ್ರಕರಣಗಳು ವರದಿಯಾಗಿದ್ದವು. 82 ಮಂದಿ ಸೋಂಕಿತರು ಪ್ರಾಣ ಕಳೆದುಕೊಂಡಿದ್ದಾರೆ, ಬಿಹಾರ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ ಐದು ಲಕ್ಷ ದಾಟಿದ್ದು, ಸದ್ಯ ಒಂದು ಲಕ್ಷ ಸಕ್ರಿಯ ಪ್ರಕರಣಗಳಿವೆ.
ದೇಶದಲ್ಲಿ ಕಳೆದ 24 ಗಂಟೆಯಲ್ಲಿ 3.57 ಲಕ್ಷ ಹೊಸ ಕೋವಿಡ್ 19 ಸೋಂಕಿತರು ಪತ್ತೆಯಾಗಿದೆ. ಇದರೊಂದಿಗೆ ದೇಶದ ಕೋವಿಡ್ 19 ಸೋಂಕಿತರ ಸಂಖ್ಯೆ ಎರಡು ಕೋಟಿ ಗಡಿ ದಾಟಿದೆ. ಸೋಮವಾರ ಬೆಳಗ್ಗೆ ಬಂದ ವರದಿಯಲ್ಲಿ 3.68 ಲಕ್ಷ ಹೊಸ ಸೋಂಕಿತರು ಪತ್ತೆಯಾಗಿದ್ದರು. ಆದರೆ ಮಂಗಳವಾರ ವರದಿಯಲ್ಲಿ ಈ ಸಂಖ್ಯೆ ಅಲ್ಪ ಇಳಿಮುಖವಾಗಿದ್ದು, 3.57 ಲಕ್ಷ ಜನರಿಗೆ ಸೋಂಕು ಪತ್ತೆಯಾಗಿದೆ.