Advertisement

ಹಾವೇರಿ:  25ರವರೆಗೆ ಸಂಪೂರ್ಣ ಲಾಕ್‌ಡೌನ್‌

07:02 PM May 20, 2021 | Team Udayavani |

ಹಾವೇರಿ: ಕೊರೊನಾ ಸೋಂಕು ನಿಯಂತ್ರಣಕ್ಕಾಗಿ ಜಿಲ್ಲೆಯಲ್ಲಿ ಮೇ 21ರ ಬೆಳಗ್ಗೆ 6 ಗಂಟೆಯಿಂದ ಮೇ 25ರವರೆಗೆ ಸಂಪೂರ್ಣ ಲಾಕ್‌ಡೌನ್‌ ಮಾಡಿ ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಆದೇಶ ಹೊರಡಿಸಿದ್ದಾರೆ.

Advertisement

ಜಿಲ್ಲೆಯಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವುದನ್ನು ತಡೆಯಲು ಕಟ್ಟುನಿಟ್ಟಿನ ಲಾಕ್‌ಡೌನ್‌ಗೆ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ. ಮೇ 21ರ ಬೆಳಗ್ಗೆ 6 ಗಂಟೆಯಿಂದ ಮೇ 25ರವರೆಗೆ ದಿನಸಿ, ತರಕಾರಿ ಸೇರಿದಂತೆ ಅಗತ್ಯ ವಸ್ತು ಖರೀದಿಗೂ ನಿರ್ಬಂಧ ವಿಧಿಸಿ ಆದೇಶ ಹೊರಡಿಸಿದ್ದಾರೆ. ಮೇ 21ರಂದು ಬೆಳಗ್ಗೆ 6 ಗಂಟೆಯಿಂದ ಮೇ 23ರ ಬೆಳಗ್ಗೆ 6 ಗಂಟೆವರೆಗೆ ದಿನಸಿ, ತರಕಾರಿ ಖರೀದಿಗೂ ಅವಕಾಶವಿಲ್ಲ. ಅಗತ್ಯ ವಸ್ತುಗಳಾದ ಹಾಲು, ಆಸ್ಪತ್ರೆ, ಔಷ  ಧ ಅಂಗಡಿ, ಪೆಂಟ್ರೋಲ್‌ ಬಂಕ್‌, ಆಕ್ಸಿಜನ್‌ ಉತ್ಪಾದನಾ ಘಟಕ, ಆಂಬ್ಯುಲೆನ್ಸ್‌, ಎಟಿಎಂ ಸೇವೆ ಹೊರತುಪಡಿಸಿ ಉಳಿದೆಲ್ಲ ಚಟುವಟಿಕೆಗಳನ್ನು ಜಿಲ್ಲಾದ್ಯಂತ ನಿಷೇಧಿಸಿ ಆದೇಶ ಹೊರಡಿಸಿದ್ದಾರೆ.

ಮೇ 23ರಂದು ಬೆಳಗ್ಗೆ 6ರಿಂದ 10 ಗಂಟೆವರೆಗೆ ಒಂದು ದಿನ ಮಾತ್ರ 4 ಗಂಟೆ ಅವಕಾಶ ನೀಡಿದ್ದು, ಅದೂ ಸಹ ಸಾಮಾಜಿಕ ಅಂತರ ಕಾಯ್ದುಕೊಂಡು, ಮಾಸ್ಕ್ ಧರಿಸಿ ದಿನಸಿ, ತರಕಾರಿ ಖರೀದಿಗೆ ಅವಕಾಶ ನೀಡಲಾಗಿದೆ. ಮೇ 23ರ 10 ಗಂಟೆಯಿಂದ ಮೇ 25ರ ಬೆಳಗ್ಗೆ 6 ಗಂಟೆವರೆಗೂ ಮತ್ತೆ ಅಗತ್ಯ ಸೇವೆ ಹೊರತುಪಡಿಸಿ ಎಲ್ಲ ಚಟುವಟಿಕೆ ನಿಷೇಧಿಸಿ ಆದೇಶ ಹೊರಡಿಸಿದ್ದಾರೆ. ಈ ಅವಧಿಯಲ್ಲಿ ಕೋವಿಡ್‌ ಮಾರ್ಗಸೂಚಿಯನ್ವಯ ಅಂತ್ಯಸಂಸ್ಕಾರ ನಡೆಸಲು ಅನುಮತಿ ನೀಡಲಾಗಿದೆ. ಎಲ್ಲದಕ್ಕೂ ಸರ್ಕಾರವನ್ನೇ ಅವಲಂಬಿಸದೇ ಜನರು ಸ್ವಯಂ ಪ್ರೇರಣೆಯಿಂದ ಸರ್ಕಾರದ ಮಾರ್ಗಸೂಚಿ ಪಾಲಿಸುವ ಅವಶ್ಯಕತೆ ಇದ್ದು, ಈ ಮೂಲಕ ಸೋಂಕು ಹೊಡೆದೋಡಿಸಲು ಎಲ್ಲರೂ ಮುಂದಾಗಬೇಕಿದೆ. ಮುಂದಿನ ಬದುಕು ಸುಗಮವಾಗಬೇಕಾದಲ್ಲಿ ಲಾಕ್‌ಡೌನ್‌ಗೆ ಸಹಕಾರ ನೀಡುವಂತೆ ಅವರು ಮನವಿ ಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next