ಕೋಲ್ಕತಾ: ಕೋವಿಡ್ ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಕೋವಿಡ್ 19 ಲಾಕ್ ಡೌನ್ ಅನ್ನು ರಾಜ್ಯದಲ್ಲಿ ಜೂನ್ 15ರವರೆಗೆ ವಿಸ್ತರಿಸಲು ಪಶ್ಚಿಮಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರ ಗುರುವಾರ (ಮೇ 27) ನಿರ್ಧರಿಸಿದೆ.
ಇದನ್ನೂ ಓದಿ:ಮೇಕೆದಾಟು ಯೋಜನೆ ವಿವಾದದ ಬಗ್ಗೆ ರಾಜ್ಯ ಸರ್ಕಾರದಿಂದ ಕಾನೂನು ಹೋರಾಟ: ಬೊಮ್ಮಾಯಿ
ರಾಜ್ಯದಲ್ಲಿ ಜಾರಿಯಲ್ಲಿರುವ ಲಾಕ್ ಡೌನ್ ಮೇ 30ರಂದು ಅಂತ್ಯಗೊಳ್ಳಲಿದೆ. ಏಪ್ರಿಲ್ 30ರಂದು ಲಾಕ್ ಡೌನ್ ಜಾರಿಗೊಳಿಸಿದ ಸಂದರ್ಭದಲ್ಲಿ ಶಾಪಿಂಗ್ ಮಾಲ್, ಮಾರುಕಟ್ಟೆಗಳು, ರೆಸ್ಟೋರೆಂಟ್, ಬಾರ್, ಜಿಮ್ಸ್, ಈಜುಕೊಳವನ್ನು ತಕ್ಷಣವೇ ನಿರ್ಬಂಧಿಸಿ ಆದೇಶ ಹೊರಡಿಸಲಾಗಿತ್ತು.
ಕಳೆದ 24ಗಂಟೆಗಳಲ್ಲಿ ಪಶ್ಚಿಮಬಂಗಾಳದಲ್ಲಿ 16,225 ಕೋವಿಡ್ ಪ್ರಕರಣಗಳು ಪತ್ತೆಯಾಗಿದೆ. ಬುಧವಾರ ರಾಜ್ಯದಲ್ಲಿ 17 ಸಾವಿರ ನೂತನ ಕೋವಿಡ್ ಸೋಂಕು ಪ್ರಕರಣ ವರದಿಯಾಗಿತ್ತು.
ಕೋವಿಡ್ ಬಿಕ್ಕಟ್ಟು ನಡುವೆ ಯಾಸ್ ಚಂಡಮಾರುತದಿಂದಾಗಿ ಪಶ್ಚಿಮಬಂಗಾಳದ ಕರಾವಳಿ ಪ್ರದೇಶದಲ್ಲಿನ ಸುಮಾರು 3 ಲಕ್ಷ ಮನೆಗಳು ಹಾನಿಗೊಂಡಿದೆ. ಈ ಹಿನ್ನೆಲೆಯಲ್ಲಿ ವೈಮಾನಿಕ ಸಮೀಕ್ಷೆ ಮೂಲಕ ಪರಿಶೀಲನೆ ನಡೆಸುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.