Advertisement

ಲಾಕ್‌ಡೌನ್‌ ಪ್ರಸ್ತಾಪ ಸರ್ಕಾರದ ಮುಂದಿಲ್ಲ: ನಿರಾಣಿ

08:59 PM Nov 30, 2021 | Team Udayavani |

ತುಮಕೂರು: ರಾಜ್ಯದಲ್ಲಿ ಮೂರನೇ ಅಲೆ ಭೀತಿ ಇದೆ. ಆದರೆ, ಮುಖ್ಯಮಂತ್ರಿಗಳು ಲಾಕ್‌ಡೌನ್‌ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Advertisement

ಈಗಾಗಲೇ ದೇಶದಲ್ಲಿ 100 ಕೋಟಿಗೂ ಹೆಚ್ಚು ಜನರಿಗೆ ಲಸಿಕೆ ನೀಡಲಾಗಿದೆ. ಲಾಕ್‌ಡೌನ್‌ ಪ್ರಸ್ತಾಪ ಸರ್ಕಾರದ ಮುಂದೆ ಈಗ ಇಲ್ಲ ಎಂದು ಸಚಿವ ಮುರುಗೇಶ್‌ ನಿರಾಣಿ ಅಭಿಪ್ರಾಯಪಟ್ಟರು.

ನಗರದ ಅರಳೇಪೇಟೆಯಲ್ಲಿ ವೀರಶೈವ ಸಮಾಜದ ವತಿಯಿಂದ ಜೀರ್ಣೋದ್ಧಾರಗೊಂಡಿರುವ ಶ್ರೀ ಬಸವೇಶ್ವರ ದೇವಾಲಯಕ್ಕೆ ಮಂಗಳವಾರ ಭೇಟಿ ನೀಡಿ, ದೇವರ ದರ್ಶನ ಪಡೆದ ನಂತರ ಮಾತನಾಡಿದರು.

ಲಸಿಕೆ ಪಡೆಯದವರಿಗೂ ತ್ವರಿತಗತಿಯಲ್ಲಿ ಲಸಿಕೆ ನೀಡಲು ಸರ್ಕಾರದಿಂದ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ನುಡಿದರು.
ಪ್ರಮುಖವಾಗಿ ಕೈಗಾರಿಕೆಗಳಲ್ಲಿ ಕೆಲಸ ಮಾಡುತ್ತಿರುವ ವಲಸೆ ಕಾರ್ಮಿಕರಿಗೆ ಆರ್‌ಎನ್‌ಡಿ ಮಾಡುವ ಮೂಲಕ ಲಸಿಕೆ ಪಡೆದುಕೊಳ್ಳುವಂತೆ ಕ್ರಮ ವಹಿಸಲಾಗುವುದು. ಅಕ್ಕಪಕ್ಕದ ರಾಜ್ಯಗಳಲ್ಲಿ ಏನೇನು ಕ್ರಮಗಳಾಗುತ್ತಿವೆ, ಬೆಳವಣಿಗೆಗಳೇನು ಎಂದು ಅಧ್ಯಯನ ನಡೆಸಿ, ರಾಜ್ಯದಲ್ಲಿಯೂ ಅಗತ್ಯ ಕ್ರಮಗಳನ್ನು ಮುಖ್ಯಮಂತ್ರಿಗಳು ಕೈಗೊಳ್ಳಲಿದ್ದಾರೆ ಎಂದು ನುಡಿದರು.

ಇದನ್ನೂ ಓದಿ:ಕುಣಿಗಲ್ : ನೀರಿನಲ್ಲಿ ಕೊಚ್ಚಿಹೋದ ನಾಲ್ವರ ಮೃತದೇಹ ಪತ್ತೆ, ಮೂರು ದಿನದ ಕಾರ್ಯಚರಣೆ ಮುಕ್ತಾಯ

Advertisement

2023ರ ವಿಧಾನಸಭಾ ಚುನಾವಣೆಯಲ್ಲಿ 125ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆದು ಪಕ್ಷವನ್ನು ಅಧಿಕಾರಕ್ಕೆ ತರುವುದರ ಕಡೆಗೆ ಗಮನಹರಿದ್ದೇವೆ. 2028ರ ಚುನಾವಣೆಯಲ್ಲಿಯೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ. 2023, 2028 ಅಥವಾ ಮುಂದಿನ ದಿನಗಳಲ್ಲಿ ಸಿಎಂ ಆಗುವ ಅವಕಾಶ ಸಿಗಬಹುದು. ಆತುರ ಇಲ್ಲ.
– ಮುರುಗೇಶ್‌ ನಿರಾಣಿ, ಸಚಿವ

Advertisement

Udayavani is now on Telegram. Click here to join our channel and stay updated with the latest news.

Next