ಬೆಂಗಳೂರು: ಬಿಎಂಟಿಸಿ, ಕೆಎಸ್ಆರ್ ಟಿಸಿ, ವಾಯುವ್ಯ ಹಾಗೂ ಈಶಾನ್ಯ ಸಾರಿಗೆ ಬಸ್ ಸಂಚಾರ ನಾಳೆಯಿಂದಲೇ ಆರಂಭವಾಗಲಿದೆ. ಆದರೆ ರಾತ್ರಿ 7ರಿಂದ ಬೆಳಗ್ಗೆ 7ರವರೆಗೆ ಜನ, ಬಸ್ ಸಂಚಾರ ನಿಷೇಧವಿರಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.
ರಾಜ್ಯದಲ್ಲಿ ಖಾಸಗಿ ಬಸ್ ಸಂಚಾರಕ್ಕೂ ಅವಕಾಶ ನೀಡಲಾಗುವುದು. ಬಸ್ ನಲ್ಲಿ 30 ಜನರಿಗಷ್ಟೇ ಪ್ರಯಾಣಕ್ಕೆ ಅವಕಾಶ ನೀಡಲಾಗುವುದು. ಖಾಸಗಿ ಬಸ್ ಸಂಚಾರಕ್ಕೂ ಅವಕಾಶ ನೀಡಲಾಗುವುದು. ಕೆಂಪು ವಲಯ ಹಾಗೂ ಕಂಟೇನ್ಮೆಂಟ್ ಹೊರತುಪಡಿಸಿ ಉಳಿದೆಡೆ ಸಂಚಾರ ಆರಂಭವಾಗಲಿದೆ ಎಂದು ಹೇಳಿದರು.
ಆಟೋ, ಕ್ಯಾಬ್ ಗಳಲ್ಲಿ ಚಾಲಕರ ಬಿಟ್ಟು ಇಬ್ಬರ ಪ್ರಯಾಣಕ್ಕೆ ಅವಕಾಶ ನೀಡಲಾಗಿದ್ದು, ಖಾಸಗಿ ಟ್ಯಾಕ್ಸಿಗೂ ಅವಕಾಶ ನೀಡಲಾಗುವುದು. ರಾಜ್ಯದೊಳಗೆ ಮಾತ್ರ ರೈಲು ಸಂಚಾರಕ್ಕೆ ಅವಕಾಶ ನೀಡಲಾಗುವುದು ಎಂದರು.
ರಾಜ್ಯದಲ್ಲಿ ಸಲೂನ್, ಬ್ಯೂಟಿ ಪಾರ್ಲರ್ ಗಳನ್ನು ತೆರೆಯಲು ಅವಕಾಶ ನೀಡಲಾಗುವುದು ಎಂದು ಬಿಎಸ್ ವೈ ಹೇಳಿದರು.ಬೀದಿ ಬದಿ ವ್ಯಾಪಾರಿಗಳು, ಅಂಗಡಿ ಮುಂಗಟ್ಟುಗಳನ್ನು ತೆರೆಯಬಹುದು.
ಕಬ್ಬನ್ ಪಾರ್ಕ್ ಲಾಲ್ ಬಾಗ್ ಸೇರಿ ಎಲ್ಲ ಪಾರ್ಕ್ ಗಳನ್ನು ಬೆಳಗ್ಗೆ 7ರಿಂದ 9 ಹಾಗೂ ಸಂಜೆ 5ರಿಂದ 7ರವರೆಗೆ ತೆರೆಯಲು ಅವಕಾಶ ನೀಡಲಾಗಿದೆ ಎಂದರು.
ಭಾನುವಾರ
ಸಂಪೂರ್ಣ ಲಾಕ್ ಡೌನ್ ಇರಲಿದೆ. ಭಾನುವಾರ ಎಲ್ಲ ಮಳಿಗೆ , ವಾಹನ ಸಂಚಾರ ನಿಷೇಧ ಇರಲಿದೆ ಎಂದು ತಿಳಿಸಿದರು
ಏನಿರಲ್ಲ: ಹೊಟೇಲ್ ಗಳು, ಜಿಮ್ ಗಳು, ಮಾಲ್ ಗಳು, ಚಿತ್ರಮಂದಿರಗಳನ್ನು ತೆರಯಲು ಇನ್ನೂ ಅವಕಾಶ ನೀಡಲಾಗಿಲ್ಲ.