Advertisement

ಮಹಾರಾಷ್ಟ್ರದಲ್ಲಿ ಮತ್ತೆ ಲಾಕ್‌ಡೌನ್‌ ಆತಂಕ!

12:27 AM Feb 22, 2021 | Team Udayavani |

ಮುಂಬಯಿ: ಮಹಾರಾಷ್ಟ್ರ ಮತ್ತು ಕೇರಳಗಳಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ಭಾರೀ ಹೆಚ್ಚಳವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಲ್ಲಿ ಮತ್ತೆ ಲಾಕ್‌ಡೌನ್‌ ಜಾರಿ ಮಾಡುವ ಬಗ್ಗೆ ಎಚ್ಚರಿಕೆ ನೀಡಲಾಗಿದೆ.

Advertisement

ಅಮರಾವತಿ ಜಿಲ್ಲೆಯಲ್ಲಿ ಒಂದು ವಾರ ಸಂಪೂರ್ಣ ಲಾಕ್‌ಡೌನ್‌ ಘೋಷಿಸಲಾಗಿದೆ. ಸೋಮವಾರ ಬೆಳಗ್ಗಿನಿಂದಲೇ ಇದು ಜಾರಿಯಾಗಲಿದೆ.

ನಾಗ್ಪುರ, ಯಾವತ್ಮಾಳ್‌, ನಾಸಿಕ್‌ ಮತ್ತು ಪುಣೆಗಳಲ್ಲಿ ಪ್ರಕರಣಗಳ ಸಂಖ್ಯೆಯಲ್ಲಿ ಗಣನೀಯ ಪ್ರಮಾಣದಲ್ಲಿ ಹೆಚ್ಚಳವಾಗುತ್ತಿದೆ. ಹೀಗಾಗಿ ಈ ಜಿಲ್ಲೆಗಳಲ್ಲಿ ರಾತ್ರಿ ಕರ್ಫ್ಯೂ ಹೇರಲಾಗಿದೆ.

ಪುಣೆಯಲ್ಲಿ ಫೆ. 28ರ ವರೆಗೆ ರಾತ್ರಿ ಕರ್ಫ್ಯೂ ಇರಲಿದೆ. ಹೊಟೇಲ್‌, ಬಾರ್‌, ರೆಸ್ಟೋರೆಂಟ್‌ ಗಳನ್ನು ರಾತ್ರಿ 11ರ ವರೆಗೆ ತೆರೆಯಲು ಅವಕಾಶ ನೀಡಲಾಗಿದೆ. ರಾತ್ರಿ 11ರಿಂದ ಬೆಳಗ್ಗೆ 6ರ ವರೆಗೆ ಜನರ ಓಡಾಟಕ್ಕೆ ಆಸ್ಪದ ಇಲ್ಲ. ಶಾಲೆ, ಕಾಲೇಜು ಮತ್ತು ಖಾಸಗಿ ಕೋಚಿಂಗ್‌ ಕ್ಲಾಸ್‌ಗಳನ್ನು ಫೆ. 28ರ ವರೆಗೆ ತೆರೆಯದಿರಲು ಸೂಚಿಸಲಾಗಿ. ನಾಸಿಕ್‌ ನಗರದಲ್ಲಿ ರಾತ್ರಿ 11ರಿಂದ ಬೆಳಗ್ಗೆ 5ರ ವರೆಗೆ ರಾತ್ರಿ ಕರ್ಫ್ಯೂ ಜಾರಿಯಲ್ಲಿ ಇರಲಿದೆ.

ಮುಂಬಯಿಯಲ್ಲಿ ಹೊಸ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಕಟ್ಟಡವೊಂದರಲ್ಲಿ 5 ಪ್ರಕರಣ ಕಂಡುಬಂದರೆ ಸಂಪೂರ್ಣವಾಗಿ ಸೀಲ್‌ ಮಾಡಲು ಸೂಚಿಸಲಾಗಿದೆ. ಮಾಸ್ಕ್ ಧರಿಸದಿದ್ದರೆ ದಂಡ ವಿಧಿಸಲಾಗುತ್ತದೆ.

Advertisement

ಎಚ್ಚರ ತಪ್ಪಿದರೆ ಲಾಕ್‌ಡೌನ್‌
“ಮಾಸ್ಕ್ ಧರಿಸಿರಿ, ಕೊರೊನಾ ತಡೆಯಿರಿ’ ಎಂದು ಕೊರೊನಾ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಮಹಾ ಸಿಎಂ ಉದ್ಧವ್‌ ಠಾಕ್ರೆ ಹೇಳಿದ್ದಾರೆ. ಮಾಸ್ಕ್ ಧರಿಸದೇ ಓಡಾಡಿ ಪ್ರಕರಣಗಳ ಸಂಖ್ಯೆ ಹೆಚ್ಚಿದರೆ 8ರಿಂದ 15 ದಿನಗಳಲ್ಲಿ ಲಾಕ್‌ಡೌನ್‌ ಹೇರಲಾಗುವುದು ಎಂದು ಎಚ್ಚರಿಕೆಯನ್ನೂ ನೀಡಿದ್ದಾರೆ. ಹಾಗೆಯೇ ಸೋಮವಾರದಿಂದ ಜಾರಿಗೆ ಬರುವಂತೆ ಮಹಾರಾಷ್ಟ್ರದಲ್ಲಿ ಎಲ್ಲ ರಾಜಕೀಯ ಮತ್ತು ಧಾರ್ಮಿಕ ಕಾರ್ಯಕ್ರಮಗಳಿಗೆ ನಿಷೇಧ ಹೇರಲಾಗಿದೆ. ಸಾರ್ವಜನಿಕರು ಗುಂಪುಗೂಡುವಂತಿಲ್ಲ.

ಕೇರಳದಲ್ಲಿ 4,040 ಪ್ರಕರಣ
ಕೇರಳದಲ್ಲಿ ರವಿವಾರ 4040 ಪ್ರಕರಣಗಳು ಕಂಡುಬಂದಿವೆ. ಈ ಹಿನ್ನೆಲೆಯಲ್ಲಿ ಹೆಚ್ಚು ಕೊರೊನಾ ಲಸಿಕೆಗಳನ್ನು ಕಳುಹಿಸುವಂತೆ ಕೇಂದ್ರ ಸರಕಾರಕ್ಕೆ ಮನವಿ ಮಾಡಲಾಗಿದೆ. ದೇಶಾದ್ಯಂತ ರವಿವಾರ ಒಟ್ಟು 14,264 ಪ್ರಕರಣಗಳು ಪತ್ತೆಯಾಗಿವೆ.

Advertisement

Udayavani is now on Telegram. Click here to join our channel and stay updated with the latest news.

Next