ಮಂಡ್ಯ: ಬೆಂಗಳೂರು ಪಾದರಾಯನಪುರದಲ್ಲಿ ಗಲಭೆ ನಡೆದ ಬಳಿಕ ನಗರದ ಗುತ್ತಲು ಬಡಾವಣೆಯಲ್ಲಿ ಲಾಕ್ ಡೌನ್ ಮತ್ತಷ್ಟು ಬಿಗಿಗೊಳಿಸಲಾಗಿದೆ.
ಇಲ್ಲಿನ ಅರಕೇಶ್ವರ ನಗರ ಪ್ರವೇಶ ದ್ವಾರದಲ್ಲಿ ಚೆಕ್ ಪೋಸ್ಟ್ ತೆರೆದು ವಾಹನಗಳನ್ನು ಪರಿಶೀಲಿಸಿ ಒಳಬಿಡಲಾಗುತ್ತಿದೆ. ಗುತ್ತಲು ಬಡಾವಣೆ ಬಫರ್ ಝೋನ್ ವ್ಯಾಪ್ತಿಯಲ್ಲಿ ಬರುವುದರಿಂದ ಗುತ್ತಲು ರಸ್ತೆಯಲ್ಲಿ ಅಂಗಡಿ ಮುಂಗಟ್ಟುಗಳನ್ನು ಸಂಪೂರ್ಣವಾಗಿ ಬಂದ್ ಮಾಡಲಾಗಿದೆ.
ಬೆಳಗ್ಗೆ 7 ಗಂಟೆಯಿಂದ 10 ಗಂಟೆಯವರೆಗೆ ಅಗತ್ಯ ಸಾಮಾನುಗಳ ಖರೀದಿಸಲು ಜನರಿಗೆ ಅವಕಾಶವನ್ನು ಮಾಡಿಕೊಡಲಾಗಿದೆ. ಗುತ್ತಲು ಬಡಾವಣೆಯಲ್ಲಿ ತೀವ್ರ ಕಟ್ಟೆಚ್ವರ ವಹಿಸಲಾಗಿದೆ.
ಜಿಲ್ಲಾ ಪೊಲೀಸ್ ಅಧೀಕ್ಷಕ ಕೆ.ಪರಶುರಾಮ ಗುತ್ತಲು ರಸ್ತೆಗಳಲ್ಲಿ ಸಂಚರಿಸಿ ವಸ್ತುಸ್ಥಿತಿ ಪರಿಶೀಲನೆ ನಡೆಸಿದರು.
ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸ್ ಭದ್ರತೆಯನ್ನು ಹೆಚ್ಚಿಸಲಾಗಿದೆ. ಜನರ ಸಂಚಾರವನ್ನು ಸಂಪೂರ್ಣವಾಗಿ ನಿಯಂತ್ರಣದಲ್ಲಿ ಇಡಲಾಗಿದೆ. ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಮುನ್ನೆಚ್ವರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ.