Advertisement

ಎಚ್ಚರ! “ಲಾಕ್‌ಡೌನ್‌’ಉಲ್ಲಂಘಿಸಿದರೆ ಜೈಲುವಾಸದ ಜೊತೆ ದಂಡ

10:00 AM Mar 28, 2020 | sudhir |

ನವದೆಹಲಿ: ಕೋವಿಡ್ 19 ಹರಡುವಿಕೆಯನ್ನು ತಡೆಗಟ್ಟಲು ಬೆಂಗಳೂರು ಸೇರಿದಂತೆ ದೇಶದ 80 ನಗರಗಳನ್ನು ಲಾಕ್‌ಡೌನ್‌ ಮಾಡುವಂತೆ ಆದೇಶ ಜಾರಿಗೊಳಿಸಲಾಗಿದ್ದರೂ, ಅದನ್ನು ಉಲ್ಲಂಘಿಸುವ ಜನರ ವಿರುದ್ಧ ಕಠಿಣ ಕಾನೂನು ಕ್ರಮಗಳನ್ನು ಜರುಗಿಸುವಂತೆ ಕೇಂದ್ರ ಸರ್ಕಾರ, ಎಲ್ಲಾ ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿದೆ.

Advertisement

ನಿಯಮ ಉಲ್ಲಂಘಿಸುವವರ ವಿರುದ್ಧ 1897ರ ಸಾಂಕ್ರಾಮಿಕ ರೋಗ ಹರಡುವಿಕೆ ತಡೆಗಟ್ಟುವ ಕಾಯ್ದೆಯ ಅನ್ವಯ ಪ್ರಕರಣ ದಾಖಲಿಸಬೇಕು. ಈ ಕಾಯ್ದೆಯನ್ನು ಉಲ್ಲಂಘಿಸುವವರಿಗೆ ಭಾರತೀಯ ದಂಡ ಸಂಹಿತೆ (ಐಪಿಸಿ) 187ರ ಪ್ರಕಾರ, ಆರು ತಿಂಗಳ ಜೈಲುವಾಸ ಅಥವಾ 1,000 ರೂ. ದಂಡ ಅಥವಾ ಇವೆರಡನ್ನೂ ವಿಧಿಸಬಹುದಾಗಿದೆ.

ಬೆಂಗಳೂರು, ದೆಹಲಿ, ಮುಂಬೈ, ಚೆನ್ನೈ, ಕೋಲ್ಕತಾ ಸೇರಿದಂತೆ ದೇಶದ 80 ನಗರಗಳಲ್ಲಿ ಲಾಕ್‌ಡೌನ್‌ ಜಾರಿಗೊಳಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next