Advertisement
ಹೊಸ ವ್ಯವಸ್ಥೆ ಪರಿಚಯ: ನೆರೆಯ ಆಂಧ್ರಪ್ರದೇಶದಲ್ಲಿ ಕಳ್ಳತನದ ಪ್ರಕರಣಗಳನ್ನು ನಿಯಂತ್ರಿಸಲು ಜಾರಿಗೊಳಿಸಿರುವ ಈ ಮಾದರಿಯ ಯೋಜನೆ ಯಶಸ್ವಿಯಾಗಿದ್ದು, ಜಿಲ್ಲೆಯಲ್ಲಿ ಪರಿಚಯಿಸಲು ಎಸ್ಪಿ ಮಿಥುನ್‌ಕುಮಾರ್ ಮುಂದಾಗಿದ್ದಾರೆ. ಸಾಮಾನ್ಯವಾಗಿ ಶುಭ ಸಮಾರಂಭಗಳಲ್ಲಿ ಭಾಗವಹಿಸಲು ಅಥವಾ ಇನ್ನಿತರೆ ಕಾರಣಗಳಿಂದ ಮನೆಯಿಂದ ಹೊರ ಹೋದರೆ ಕಳ್ಳರು ತಮ್ಮ ಕೈಚಳಕ ತೋರಿ ಚಿನ್ನಾಭರಣ-ನಗದು ದೋಚಿ ಪರಾರಿಯಾಗುವ ಘಟನೆಗಳು ಸಂಭವಿಸುತ್ತಿರುವುದು ಸಾಮಾನ್ಯ. ಹೀಗಾಗಿ ಸಾರ್ವಜನಿಕರ ಆಸ್ತಿಪಾಸ್ತಿಗಳನ್ನು ಸಂರಕ್ಷಣೆ ಮಾಡಲು ಈಗಾಗಲೇ ಸಕ್ರಿಯವಾಗಿರುವ ಪೊಲೀಸ್ ಇಲಾಖೆಯಲ್ಲಿ ಇದೀಗ ಹೊಸ ವ್ಯವಸ್ಥೆ ಪರಿಚಯವಾಗಿದೆ.
Related Articles
Advertisement
50 ಮೋಷನ್ ಸೆನ್ಸರ್ ಕ್ಯಾಮೆರಾ ಖರೀದಿ : ಜಿಲ್ಲೆಯ ಎಲ್ಲಾ ತಾಲೂಕಿನಲ್ಲಿ ಎಲ್.ಹೆಚ್.ಎಂ.ಎಸ್ ವ್ಯವಸ್ಥೆ ಜಾರಿಗೊಳಿಸಲು ಸಕಲ ಸಿದ್ಧತೆ ಮಾಡಿಕೊಂಡು ಈಗಾಗಲೇ 50 ಮೋಷನ್ ಸೆನ್ಸೆರ್ ಕ್ಯಾಮೆರಾಗಳನ್ನು ಖರೀದಿಸಲಾಗಿದೆ. ನಾಗರಿಕರು ಪೊಲೀಸ್ ಇಲಾಖೆಯಿಂದ ಜಾರಿಗೊಳಿಸಿರುವ ಆ್ಯಪ್ ಡೌನ್‌ಲೋಡ್ ಮಾಡಿಕೊಂಡು ಈ ಸೌಲಭ್ಯವನ್ನು ಸದುಪಯೋಗ ಮಾಡಿಕೊಳ್ಳಬಹುದಾಗಿದೆ. ಜಿಲ್ಲೆಯಲ್ಲಿ ಈಗಾಗಲೇ ಅಪರಾಧ ಪ್ರಕರಣ ತಡೆಗಟ್ಟಲು ಮತ್ತು ಪೊಲೀಸ್ ಇಲಾಖೆಯನ್ನು ಜನಸ್ನೇಹಿ ಮಾಡಲು ಕ್ರಮ ಕೈಗೊಂಡಿರುವ ಎಸ್ಪಿ, ಆಂಧ್ರಪ್ರದೇಶದ ಮಾದರಿಯನ್ನು ಜಿಲ್ಲೆಯಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಳಿಸಲು ಕ್ರಮ ಕೈಗೊಂಡಿದ್ದಾರೆ.
ಗ್ರಾಮೀಣ ಪ್ರದೇಶಕ್ಕೂ ವಿಸ್ತರಣೆ : ಜಿಲ್ಲಾ ಪೊಲೀಸ್ ಇಲಾಖೆಯಲ್ಲಿ ಹೈಟೆಕ್ ಸ್ಪರ್ಶ ನೀಡುವ ಜೊತೆಗೆ ಕಳ್ಳತನದ ಪ್ರಕರಣಗಳನ್ನು ತಡೆಗಟ್ಟಲು ಆರಂಭಿಸಲು ಉದ್ದೇಶಿಸಿರುವ ಎಲ್.ಹೆಚ್.ಎಂ.ಎಸ್ ಜಾರಿಗೊಳಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಚಿಕ್ಕಬಳ್ಳಾಪುರ ಜಿಲ್ಲಾಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ಅವರಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ನೂತನ ವ್ಯವಸ್ಥೆಗೆ ವಿದ್ಯುಕ್ತವಾಗಿ ಚಾಲನೆ ದೊರೆಯಲಿದೆ. ಪ್ರಾಯೋಗಿಕವಾಗಿ ಜಿಲ್ಲೆಯ 6 ತಾಲೂಕು ಕೇಂದ್ರದಲ್ಲಿ ಈ ವ್ಯವಸ್ಥೆ ಜಾರಿಗೊಳಿಸಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಈ ಯೋಜನೆ ಗ್ರಾಮೀಣ ಪ್ರದೇಶಕ್ಕೂ ವಿಸ್ತರಣೆಯಾಗಲಿದೆ.
ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ ತಡೆಗಟ್ಟುವ ಸಲುವಾಗಿ ಎಲ್.ಹೆಚ್.ಎಂ.ಎಸ್ ವ್ಯವಸ್ಥೆ ಜಾರಿಗೆ ಸಿದ್ಧತೆ ಮಾಡಿಕೊಂಡಿ ದ್ದೇವೆ. ನೆರೆಯ ಆಂಧ್ರ ಮತ್ತು ರಾಜ್ಯದ ಕೆಲವೊಂದುಜಿಲ್ಲೆಯಲ್ಲಿ ಈ ಮಾದರಿ ಅನುಷ್ಠಾನ ಬಗ್ಗೆ ಮಾಹಿತಿಯಿದೆ. ಜಿಲ್ಲೆಯ 6 ತಾಲೂಕು ಕೇಂದ್ರದಲ್ಲಿ ಈ ವ್ಯವಸ್ಥೆ ಪ್ರಾಯೋಗಿಕವಾಗಿ ಜಾರಿಗೊಳಿಸಲಾಗು ತ್ತಿದ್ದು, ಜಿಲ್ಲಾ ಉಸ್ತುವಾರಿ ಸಚಿವರು ಚಾಲನೆ ನೀಡಲಿದ್ದಾರೆ. – ಮಿಥುನ್ ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ
– ಎಂ.ಎ.ತಮೀಮ್ ಪಾಷ