Advertisement

ಲೋಕ ಅದಾಲತ್‌: 16,157 ಪ್ರಕರಣಗಳು ಇತ್ಯರ್ಥ

12:04 PM Mar 15, 2022 | Team Udayavani |

ಕಲಬುರಗಿ: ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಕೆ.ಸುಬ್ರಮಣ್ಯ ಅವರ ಮಾರ್ಗದರ್ಶನದಲ್ಲಿ ಕಲಬುರಗಿ ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ಈಚೆಗೆ ರಾಷ್ಟ್ರೀಯ ಲೋಕ ಅದಾಲತ್‌ ಜರುಗಿತು.

Advertisement

ಜಿಲ್ಲೆಯ ಎಲ್ಲಾ ನ್ಯಾಯಾಧೀಶರು, ನ್ಯಾಯವಾದಿಗಳು ಹಾಗೂ ಕಕ್ಷಿದಾರರ ಸಹಕಾರದಿಂದ ರಾಷ್ಟ್ರೀಯ ಲೋಕ್‌ ಅದಾಲತ್‌ ಮೂಲಕ ಸಿವಿಲ್‌ ದಾವೆಗಳು, ಮೋಟಾರು ವಾಹನ, ಅಪಘಾತ ಪರಿಹಾರ ಪ್ರಕರಣಗಳು, ರಾಜಿಯಾಗಬಹುದಾದ ಕ್ರಿಮಿನಲ್‌ ಪ್ರಕರಣಗಳು, ಭೂಸ್ವಾಧೀನ ಪರಿಹಾರ ವಸೂಲಾತಿ ಪ್ರಕರಣಗಳು, ಬ್ಯಾಂಕ್‌ಗಳಿಗೆ ಸಂಬಂಧಿಸಿದ ವ್ಯಾಜ್ಯ ಪೂರ್ವ ಪ್ರಕರಣಗಳು ಸೇರಿದಂತೆ ಒಟ್ಟು 16,157 ಪ್ರಕರಣಗಳು ಇತ್ಯರ್ಥಗೊಳಿಸಿ 176,291,229 ರೂ. ಗಳ ಪರಿಹಾರ ಮೊತ್ತ ಪಾವತಿಗೆ ನ್ಯಾಯಾಲಯವು ಆದೇಶಿಸಲಾಯಿತು.

ಕಕ್ಷಿದಾರರು, ನ್ಯಾಯಾಧಿಧೀಶರು, ಸಂಧಾನಕಾರರು ಹಾಗೂ ಸಂಬಂಧಪಟ್ಟ ನ್ಯಾಯವಾದಿಗಳು ರಾಜಿ ಸಂಧಾನ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದರು. ಕಲಬುರಗಿ ಜಿಲ್ಲೆಯಲ್ಲಿ ಮೆಗಾ ಲೋಕ್‌ ಅದಾಲತ್‌ ಅದ್ಭುತ ಯಶಸ್ವಿ ಕಂಡಿದೆ ಎಂದು ಕಲಬುರಗಿ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಕೆ.ಸುಬ್ರಮಣ್ಯ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next