Advertisement
ಲೋಕ್ ಅದಾಲತ್‌ನಲ್ಲಿ ಒಟ್ಟು 47 ಬೈಠಕ್‌ಗಳು ನಡೆದವು. ಒಟ್ಟು 35,649 ಪ್ರಕರಣಗಳನ್ನು ಪರಿ ಗಣಿಸಲಾಗಿತ್ತು. ಅದರಲ್ಲಿ 30,729 ಪ್ರಕರಣಗಳು ರಾಜಿಯಾಗಿದ್ದು ರಾಜಿ ಮೊತ್ತ ಒಟ್ಟು 18,92,57,121 ರೂ. ಪರಿಹಾರ ಹಣವನ್ನು ವಸೂಲಿ ಮಾಡಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ, ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶ ರವೀಂದ್ರ ಎಂ. ಜೋಷಿ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶೆ ಶೋಭಾ ಬಿ.ಜಿ. ತಿಳಿಸಿದ್ದಾರೆ.
ಉಡುಪಿ: ಉಡುಪಿ, ಕುಂದಾಪುರ ಹಾಗೂ ಕಾರ್ಕಳದ ವಿವಿಧ ನ್ಯಾಯಾಲಯಗಳಲ್ಲಿ ಶನಿವಾರ ನಡೆದ ಅದಾಲತ್‌ನಲ್ಲಿ 20,444 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ.
ರಾಜಿಯಾಗಬಲ್ಲ ಅಪರಾಧಿಕ ಪ್ರಕರಣ -34, ಚೆಕ್ಕು ಅಮಾನ್ಯ ಪ್ರಕರಣ-226, ಬ್ಯಾಂಕ್/ಹಣ ವಸೂಲಾತಿ ಪ್ರಕರಣ-24, ಎಂವಿಸಿ ಪ್ರಕರಣ-90, ಕಾರ್ಮಿಕ ನಷ್ಟ ಪರಿಹಾರ ಪ್ರಕರಣ-1, ಎಂಎಂಆರ್‌ಡಿ ಆಕ್ಟ್ ಪ್ರಕರಣ-12, ವೈವಾಹಿಕ ಪ್ರಕರಣ-2, ಭೂಸ್ವಾಧೀನ ಪ್ರಕರಣ-1 ಸಿವಿಲ್ ಪ್ರಕರಣ-115, ಇತರ ಕ್ರಿಮಿನಲ್ ಪ್ರಕರಣ- 1,501 ಹಾಗೂ ವ್ಯಾಜ್ಯ ಪೂರ್ವ ದಾವೆ- 18,438 ಪ್ರಕರಣವನ್ನು ರಾಜೀ ಮುಖಾಂತರ ಇತ್ಯರ್ಥ ಪಡಿಸಿ 11,11,51,425 ರೂ. ಪರಿಹಾರದ ಮೊತ್ತ ಘೋಷಿಸಲಾಯಿತು.
Related Articles
ಸುಮಾರು 13 ವರ್ಷಗಳಿಂದ ಬೇರೆಯಾಗಿದ್ದ ದಂಪತಿ ಅದಾಲತ್‌ನಲ್ಲಿ ಭಾಗವಹಿಸಿ ನ್ಯಾಯಾಧೀಶರು ಹಾಗೂ ವಕೀಲರ ಮಧ್ಯಸ್ಥಿಕೆಯಿಂದ ತಮ್ಮ ಮಗಳ ಭವಿಷ್ಯದ ದೃಷ್ಟಿಯಿಂದ ಹಿಂದೆ ಇದ್ದ ಮನಸ್ತಾಪವನ್ನು ದೂರ ಮಾಡಿ ಒಟ್ಟಾಗಿ ಜೀವನ ನಡೆಸಲು ನಿರ್ಧರಿಸಿದರು.
Advertisement
ಸುಮಾರು 16 ವರ್ಷ ಹಳೆಯ ಪ್ರಕರಣ ರಾಜಿ ಸಂಧಾನದಲ್ಲಿ ಅಂತ್ಯವಾಯಿತು. ಇನ್ನೊಂದು ದಾವೆಯಲ್ಲಿ 25 ಜನ ಪಕ್ಷಗಾರರಿದ್ದು ನ್ಯಾಯಾಧೀಶರು, ವಕೀಲರು, ಹಾಗೂ ಹಿರಿಯರ ಸಲಹೆಯಿಂದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಸಮಕ್ಷಮ ರಾಜಿ ಸಂಧಾನದ ಮೂಲಕ ಪಾಲು ವಿಭಾಗ ಮಾಡಿಕೊಂಡು ತಮ್ಮ ಭಾಗಕ್ಕೆ ಬಂದ ಪಾಲಿನಲ್ಲಿ ದಾರಿಗೆ ಸಮನಾದ ಜಾಗವನ್ನು ಬಿಟ್ಟುಕೊಡಲು ಒಪ್ಪಿಕೊಂಡು ಸೌಹಾರ್ದಯುತವಾಗಿ ಸಂಧಾನ ಮಾಡಿಕೊಂಡರು.
ಇದನ್ನೂ ಓದಿ : ಪ್ರವೀಣ್ ಹತ್ಯೆ ಪ್ರಕರಣ : ಕೃತ್ಯಕ್ಕೆ ಬಳಸಿದ ಆಯುಧ ಎಲ್ಲಿ? ಹೊಳೆ, ಕಾಡಿಗೆ ಮಚ್ಚು ಎಸೆದರೇ?