Advertisement

ರಾಷ್ಟ್ರೀಯ ಲೋಕ್‌ ಅದಾಲತ್‌ : ದ.ಕ 30,729, ಉಡುಪಿಯಲ್ಲಿ 20,444 ಪ್ರಕರಣ ಇತ್ಯರ್ಥ

08:37 AM Aug 14, 2022 | Team Udayavani |

ಮಂಗಳೂರು : ರಾಷ್ಟ್ರೀಯ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ “ರಾಷ್ಟ್ರೀಯ ಲೋಕ್‌ ಅದಾಲತ್‌’ ಶನಿವಾರ ದ.ಕ. ಜಿಲ್ಲಾ ಹಾಗೂ ತಾಲೂಕು ಗಳ ನ್ಯಾಯಾಲಯಗಳ ಆವರಣದಲ್ಲಿ ಜರಗಿತು.

Advertisement

ಲೋಕ್‌ ಅದಾಲತ್‌ನಲ್ಲಿ ಒಟ್ಟು 47 ಬೈಠಕ್‌‍ಗಳು ನಡೆದವು. ಒಟ್ಟು 35,649 ಪ್ರಕರಣಗಳನ್ನು ಪರಿ ಗಣಿಸಲಾಗಿತ್ತು. ಅದರಲ್ಲಿ 30,729 ಪ್ರಕರಣಗಳು ರಾಜಿಯಾಗಿದ್ದು ರಾಜಿ ಮೊತ್ತ ಒಟ್ಟು 18,92,57,121 ರೂ. ಪರಿಹಾರ ಹಣವನ್ನು ವಸೂಲಿ ಮಾಡಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ, ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶ ರವೀಂದ್ರ ಎಂ. ಜೋಷಿ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್‌ ನ್ಯಾಯಾಧೀಶೆ ಶೋಭಾ ಬಿ.ಜಿ. ತಿಳಿಸಿದ್ದಾರೆ.

ಈ ಅದಾಲತ್‌‍ನಲ್ಲಿ ಸಾರ್ವಜನಿಕರ ವ್ಯಾಜ್ಯಪೂರ್ವ, ರಾಜಿಯಾಗಬಹುದಾದ ಅಪರಾಧಿತ ಪ್ರಕರಣಗಳು, ಚೆಕ್‌, ಬ್ಯಾಂಕ್‌ ಪ್ರಕರಣಗಳು, ಮೋಟಾರು ವಾಹನ ಅಪಘಾತ ಪರಿಹಾರ ನ್ಯಾಯಾಧಿಕರಣದ ಪ್ರಕರಣಗಳು, ಸಿವಿಲ್‌ ಪ್ರಕರಣಗಳು, ಆಸ್ತಿ ವಿಭಾಗದ ಪ್ರಕರಣಗಳು ಹಾಗೂ ಇತರ ರಾಜಿಯಾಗಬಹುದಾದ ಪ್ರಕರಣ ಗಳನ್ನು ಇತ್ಯರ್ಥಪಡಿಸಲಾಯಿತು.

ಉಡುಪಿ: 20,444 ಪ್ರಕರಣ ಇತ್ಯರ್ಥ
ಉಡುಪಿ: ಉಡುಪಿ, ಕುಂದಾಪುರ ಹಾಗೂ ಕಾರ್ಕಳದ ವಿವಿಧ ನ್ಯಾಯಾಲಯಗಳಲ್ಲಿ ಶನಿವಾರ ನಡೆದ ಅದಾಲತ್‌ನಲ್ಲಿ 20,444 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ.
ರಾಜಿಯಾಗಬಲ್ಲ ಅಪರಾಧಿಕ ಪ್ರಕರಣ -34, ಚೆಕ್ಕು ಅಮಾನ್ಯ ಪ್ರಕರಣ-226, ಬ್ಯಾಂಕ್‌/ಹಣ ವಸೂಲಾತಿ ಪ್ರಕರಣ-24, ಎಂವಿಸಿ ಪ್ರಕರಣ-90, ಕಾರ್ಮಿಕ ನಷ್ಟ ಪರಿಹಾರ ಪ್ರಕರಣ-1, ಎಂಎಂಆರ್‌ಡಿ ಆಕ್ಟ್ ಪ್ರಕರಣ-12, ವೈವಾಹಿಕ ಪ್ರಕರಣ-2, ಭೂಸ್ವಾಧೀನ ಪ್ರಕರಣ-1 ಸಿವಿಲ್‌ ಪ್ರಕರಣ-115, ಇತರ ಕ್ರಿಮಿನಲ್‌ ಪ್ರಕರಣ- 1,501 ಹಾಗೂ ವ್ಯಾಜ್ಯ ಪೂರ್ವ ದಾವೆ- 18,438 ಪ್ರಕರಣವನ್ನು ರಾಜೀ ಮುಖಾಂತರ ಇತ್ಯರ್ಥ ಪಡಿಸಿ 11,11,51,425 ರೂ. ಪರಿಹಾರದ ಮೊತ್ತ ಘೋಷಿಸಲಾಯಿತು.

ಒಂದಾದ ದಂಪತಿ
ಸುಮಾರು 13 ವರ್ಷಗಳಿಂದ ಬೇರೆಯಾಗಿದ್ದ ದಂಪತಿ ಅದಾಲತ್‌ನಲ್ಲಿ ಭಾಗವಹಿಸಿ ನ್ಯಾಯಾಧೀಶರು ಹಾಗೂ ವಕೀಲರ ಮಧ್ಯಸ್ಥಿಕೆಯಿಂದ ತಮ್ಮ ಮಗಳ ಭವಿಷ್ಯದ ದೃಷ್ಟಿಯಿಂದ ಹಿಂದೆ ಇದ್ದ ಮನಸ್ತಾಪವನ್ನು ದೂರ ಮಾಡಿ ಒಟ್ಟಾಗಿ ಜೀವನ ನಡೆಸಲು ನಿರ್ಧರಿಸಿದರು.

Advertisement

ಸುಮಾರು 16 ವರ್ಷ ಹಳೆಯ ಪ್ರಕರಣ ರಾಜಿ ಸಂಧಾನದಲ್ಲಿ ಅಂತ್ಯವಾಯಿತು. ಇನ್ನೊಂದು ದಾವೆಯಲ್ಲಿ 25 ಜನ ಪಕ್ಷಗಾರರಿದ್ದು ನ್ಯಾಯಾಧೀಶರು, ವಕೀಲರು, ಹಾಗೂ ಹಿರಿಯರ ಸಲಹೆಯಿಂದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಸಮಕ್ಷಮ ರಾಜಿ ಸಂಧಾನದ ಮೂಲಕ ಪಾಲು ವಿಭಾಗ ಮಾಡಿಕೊಂಡು ತಮ್ಮ ಭಾಗಕ್ಕೆ ಬಂದ ಪಾಲಿನಲ್ಲಿ ದಾರಿಗೆ ಸಮನಾದ ಜಾಗವನ್ನು ಬಿಟ್ಟುಕೊಡಲು ಒಪ್ಪಿಕೊಂಡು ಸೌಹಾರ್ದಯುತವಾಗಿ ಸಂಧಾನ ಮಾಡಿಕೊಂಡರು.

ಇದನ್ನೂ ಓದಿ : ಪ್ರವೀಣ್‌ ಹತ್ಯೆ ಪ್ರಕರಣ : ಕೃತ್ಯಕ್ಕೆ ಬಳಸಿದ ಆಯುಧ ಎಲ್ಲಿ? ಹೊಳೆ, ಕಾಡಿಗೆ ಮಚ್ಚು ಎಸೆದರೇ?

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next