Advertisement
ವಿಪತ್ತುಗಳಿಗೆ ಒಳಗಾದ ಸಂತ್ರಸ್ತರಿಗೆ ಕಾನೂನು ಸೇವೆಗಳು, ಪೊಲೀಸ್ ದೂರು ಪ್ರಾಧಿಕಾರ, ಮೂಲಭೂತ ಕಾನೂನು ಹಾಗೂ ಸಂತ್ರಸ್ತ ಪರಿಹಾರ ಯೋಜನೆ ಕುರಿತು ನಗರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಕಾನೂನು ಸಾಕ್ಷರತಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
Related Articles
Advertisement
ಕಾರ್ಯಕ್ರಮದಲ್ಲಿ ವಿಪತ್ತುಗಳಿಗೆ ಒಳಗಾದ ಸಂತ್ರಸ್ತರಿಗೆ ಕಾನೂನು ಸೇವೆಗಳು ಹಾಗೂ ಪರಿಹಾರ ಯೋಜನೆ ಕುರಿತು ವಕೀಲರಾದ ಕೆ.ವಿ. ನಡುವಿನಮಠ, ಮೂಲಭೂತ ಕಾನೂನುಗಳ ಅರಿವು ಕುರಿತು ವಕೀಲರಾದ ಪ್ರಶಾಂತ ಯಲಿಗಾರ ಹಾಗೂ ಪೊಲೀಸ್ ದೂರು ಪ್ರಾಧಿಕಾರದ ರಚನೆ ಮಹತ್ವ ಹಾಗೂ ಕಾರ್ಯ ವೈಖರಿ ಕುರಿತು ಶಹರ ಪೊಲೀಸ್ ಠಾಣೆಯ ಉದಯ ಕುಲಕರ್ಣಿ ಉಪನ್ಯಾಸ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕೆ.ಲೀಲಾವತಿ, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ.ಶ್ರೀವಿದ್ಯಾ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಕೆ.ಸಿ.ಪಾವಲಿ, ಜಿಲ್ಲಾ ನ್ಯಾಯವಾದಿಗಳ ಸಂಘ ಕಾರ್ಯದರ್ಶಿ ಪಿ.ಎಂ. ಬೆನ್ನೂರು, ಸರ್ಕಾರಿ ಅಭಿಯೋಜಕ ಎಸ್.ಎಂ. ಗೆಜ್ಜಿಹಳ್ಳಿ, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಾದ ಅನ್ನಪೂರ್ಣ ಮುದಕಮ್ಮನವರ, ಕ್ಷೇತ್ರ ಶಿಕ್ಷಣಾಧಿಕಾರಿ ಶಿವಣ್ಣ, ತಹಶೀಲ್ದಾರ್ ಶಿವಕುಮಾರ, ಆರೋಗ್ಯ ಇಲಾಖೆಯ ಜಗದೀಶ ಪಾಟೀಲ್ ಹಾಗೂ ಇತರರು ಇದ್ದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯವಾದಿಗಳ ಸಂಘ ಅಭಿಯೋಜನೆ ಇಲಾಖೆ, ಜಿಲ್ಲಾ ಆಡಳಿತ, ಜಿಪಂ, ಪೊಲೀಸ್ ಇಲಾಖೆ, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಕಾರ್ಯಕ್ರಮ ಸಂಘಟಿಸಲಾಗಿತ್ತು.