Advertisement

ವ್ಯಾಜ್ಯ ಇತ್ಯರ್ಥಕ್ಕೆ ಲೋಕ ಅದಾಲತ್‌ ಉತ್ತಮ ವೇದಿಕೆ

05:05 PM Dec 20, 2020 | Suhan S |

ಚಿಕ್ಕಮಗಳೂರು: ರಾಷ್ಟ್ರೀಯ ಲೋಕ ಅದಾಲತ್‌ ಉತ್ತಮ ಕಾರ್ಯಕ್ರಮವಾಗಿದ್ದು, ನ್ಯಾಯಾಲಯದಲ್ಲಿ ಅನೇಕ ವರ್ಷಗಳಿಂದ ಇತ್ಯರ್ಥವಾಗದೆ ಉಳಿದಿದ್ದವ್ಯಾಜ್ಯಗಳನ್ನು ಲೋಕ ಅದಾಲತ್‌ ಮೂಲಕ ಇತ್ಯರ್ಥಪಡಿಸಿಕೊಳ್ಳಲು ಉತ್ತಮ ವೇದಿಕೆಯಾಗಿದೆ ಎಂದು ಹೈಕೋರ್ಟ್‌ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಹೇಳಿದರು.

Advertisement

ಶನಿವಾರ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಜಿಲ್ಲಾ ವಕೀಲರ ಸಂಘದ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ನ್ಯಾಯಾಲಯದ ಎಡಿಆರ್‌ ಸಭಾಂಗಣದಲ್ಲಿನಡೆದ ರಾಷ್ಟ್ರೀಯ ಲೋಕ ಅದಾಲತ್‌ ಉದ್ಘಾಟಿಸಿ ಮಾತನಾಡಿದರು.

ನ್ಯಾಯಾಲಯದಲ್ಲಿ ಇಲ್ಲಿಯವರಿಗೂ ಇತ್ಯರ್ಥವಾಗದ ವ್ಯಾಜ್ಯಗಳು ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಇತ್ಯರ್ಥಗೊಳ್ಳುತ್ತಿವೆ. ವಕೀಲರು ತಮ್ಮ  ಕಕ್ಷಿದಾರರ ಪ್ರಕರಣಗಳನ್ನು ಬಗೆಹರಿಸಿಕೊಡಲು ಪ್ರಾಮಾಣಿಕ ಪ್ರಯತ್ನ ಮಾಡಬೇಕೆಂದು ತಿಳಿಸಿದರು.

ಉತ್ಛ ನ್ಯಾಯಾಲಯದ ನ್ಯಾಯಮೂರ್ತಿ ಹಾಗೂ ಚಿಕ್ಕಮಗಳೂರಿನ ಆಡಳಿತಾತ್ಮಕ ನ್ಯಾಯಮೂರ್ತಿ ಆರ್‌.ದೇವದಾಸ್‌ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಾರ್ವಜನಿಕರು ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಭಾಗವಹಿಸುವ ಮೂಲಕ ತಮ್ಮ ಸಮಸ್ಯೆಗಳನ್ನು ಇತ್ಯರ್ಥಪಡಿಸಿಕೊಳ್ಳಲು ಮುಂದಾಗಬೇಕೆಂದು ತಿಳಿಸಿದರು. ಇಂದಿನ ಸಮಾಜದಲ್ಲಿ ಜನರು ಸಣ್ಣ ಪುಟ್ಟ ಸಮಸ್ಯೆಗಳಿಗೆ ನ್ಯಾಯಾಲಯದಲ್ಲಿ ದಾವೆ ಹೂಡುವ ಮೂಲಕ ಸಮಯ, ಹಣ, ಮನಃಶಾಂತಿಯನ್ನು ಕಳೆದುಕೊಳ್ಳುತ್ತಿದ್ದು, ಇದರಿಂದ ಹೊರಬರಲು ಸಾರ್ವಜನಿಕರು ರಾಷ್ಟ್ರೀಯ ಲೋಕ ಅದಾಲತ್‌ನ ಸದುಪಯೋಗಪಡಿಸಿಕೊಳ್ಳಬೇಕು ಎಂದರು. ರಾಜ್ಯ ವಕೀಲ ಪರಿಷತ್‌ ಸದಸ್ಯ ಎಸ್‌. ಎಲ್‌.ಭೋಜೇಗೌಡ ಮಾತನಾಡಿ, ಹಿಂದಿನ ಕಾಲದಲ್ಲಿ ಹಿರಿಯರು ಅವರಿಗಿದ್ದ ಬುದ್ದಿಶಕ್ತಿಯಿಂದಅನೇಕ ಸಮಸ್ಯೆಗಳನ್ನು ಗ್ರಾಮೀಣ ಪ್ರದೇಶದಲ್ಲಿ ಬಗೆಹರಿಸಿಕೊಳ್ಳುತ್ತಿದ್ದರು. ಆದರೆ ಇಂದಿನ ಜನರು ಚಿಕ್ಕ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲಾಗದೆ. ನ್ಯಾಯಾಲಯಕ್ಕೆ ಧಾವಿಸುತ್ತಿರುವುದರಿಂದ ವ್ಯಾಜ್ಯ ಪ್ರಕರಣಗಳು ಹೆಚ್ಚುತ್ತಿವೆ ಎಂದು ಹೇಳಿದರು.

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾ ಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾ ಧಿಕಾರದ ಅಧ್ಯಕ್ಷೆ ಶುಭ ಗೌಡರ್‌ ಮಾತನಾಡಿ, ಜಿಲ್ಲೆಯಲ್ಲಿ 22 ಘಟಕಗಳು ಮತ್ತು ಚಿಕ್ಕಮಗಳೂರು ತಾಲೂಕಿನಲ್ಲಿ 9 ಘಟಕಗಳನ್ನು ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ರಾಜೀ ಸಂಧಾನಗಳ ಮೂಲಕ ವ್ಯಾಜ್ಯ ಇತ್ಯರ್ಥಪಡಿಸಲು ತೆರೆಯಲಾಗಿದೆ. ಇದಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದರು.

Advertisement

ಹಿರಿಯ ಸಿವಿಲ್‌ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾ ಧಿಕಾರದ ಸದಸ್ಯ ಕಾರ್ಯದರ್ಶಿ ಬಸವರಾಜ ಚೇಂಗಟಿ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ವಿ.ಟಿ.ಥಾಮಸ್‌, ವಕೀಲ ಡಿ.ಬಿ.ಸುಜೇಂದ್ರ ಮತ್ತಿತರರು ಉಪಸ್ಥಿತರಿದ್ದರು

Advertisement

Udayavani is now on Telegram. Click here to join our channel and stay updated with the latest news.

Next