Advertisement

ಮಾ. 27ಕ್ಕೆ ಮೆಗಾ ಲೋಕ ಅದಾಲತ್‌

05:38 PM Feb 26, 2021 | Team Udayavani |

ಶಿವಮೊಗ್ಗ: ಈ ವರ್ಷದ ಪ್ರಥಮ ಮೆಗಾ ಲೋಕ ಅದಾಲತ್‌ ಮಾ.27ರಂದು ನಡೆಯಲಿದ್ದು, ಕಳೆದ ಡಿಸೆಂಬರ್‌ನಲ್ಲಿ ನಡೆದ ಮೆಗಾ ಲೋಕ ಅದಾಲತ್‌ನಲ್ಲಿ 7551 ಪ್ರಕರಣಗಳನ್ನು ವಿಲೇವಾರಿ ಮಾಡಲಾಗಿದೆ ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ಮುಸ್ತಫಾ ಹುಸೇನ್‌ ಎಸ್‌.ಎ. ತಿಳಿಸಿದರು.

Advertisement

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲೋಕ ಅದಾಲತ್‌ ನಲ್ಲಿ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಇತ್ಯರ್ಥಕ್ಕಾಗಿ ಬಾಕಿ ಇರುವ ಸಿವಿಲ್‌, ವೈವಾಹಿಕ, ಮೋಟಾರು ಪರಿಹಾರ ಪ್ರಕರಣಗಳು, ಹಿಂದೂ ವಾರಸು ಕಾಯ್ದೆಗೆ ಸಂಬಂಧಿ ಸಿದ ಪ್ರಕರಣಗಳು, ವಿಭಜನಾ ಪ್ರಕರಣಗಳು ಹಾಗೂ ಇನ್ನಿತರ ಪ್ರಕರಣಗಳನ್ನು ಗುರುತಿಸಿ, ಉಭಯ ಕಕ್ಷಿದಾರರನ್ನು ಕರೆಸಿಕೊಂಡು ಅವರ ಒಪ್ಪಿಗೆಯ ಪ್ರಕಾರ ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಲು ಪ್ರಯತ್ನಿಸಲಾಗುವುದು ಎಂದರು.

ಇದಲ್ಲದೆ ಬ್ಯಾಂಕುಗಳಿಗೆ ಸಂಬಂಧಿ ಸಿದ ಸಾಲದ ಹಣದ ವಸೂಲಾತಿ ಪ್ರಕರಣಗಳು, ವಿದ್ಯುತ್ಛಕ್ತಿ, ಜಲಮಂಡಳಿ ಹಾಗೂ ಇತರ ಯಾವುದೇ ನ್ಯಾಯಾಲಯಕ್ಕೆ ಬರಬಹುದಾದ ಪ್ರಕರಣಗಳನ್ನು ಪೂರ್ವ ವ್ಯಾಜ್ಯ ಪ್ರಕರಣಗಳೆಂದು ಪರಿಗಣಿಸಲಾಗುವುದು. ಈ ಪ್ರಕರಣಗಳಲ್ಲಿ ಸಹ ಉಭಯ ಕಕ್ಷಿದಾರರನ್ನು ಕರೆಸಿ ರಾಜಿ ಸಂಧಾನ ಮಾಡಲು ಪ್ರಯತ್ನಿಸಲಾಗುವುದು.

ಇಂತಹ ಅಹವಾಲುಗಳನ್ನು ಸಂಬಂಧಿ ಸಿದ ಸಿವಿಲ್‌ ನ್ಯಾಯಾಲಯಗಳಲ್ಲಿ ಅಮಲ್‌ ಬಜಾವಣೆ ಮಾಡಲು ಕಾನೂನಿನಲ್ಲಿ ಅವಕಾಶವಿದೆ. ಇದರಿಂದ ಕಕ್ಷಿದಾರರಿಗೆ ನ್ಯಾಯಾಲಯದ ಖರ್ಚು ಮತ್ತು ಅವರ ಸಮಯ ಉಳಿಯಲಿದೆ ಎಂದು ಅವರು ಹೇಳಿದರು.

ಜಿಲ್ಲೆಯ ನ್ಯಾಯಾಲಯಗಳಲ್ಲಿ ಒಟ್ಟು 50204 ಪ್ರಕರಣಗಳು ಬಾಕಿ ಇದ್ದು, ಅವುಗಳ ಪೈಕಿ 26078  ಪ್ರಕರಣಗಳು ರಾಜಿಯಾಗಬಹುದಾದ ಪ್ರಕರಣಗಳಾಗಿವೆ. ಇದುವರೆಗೆ 2730 ಪ್ರಕರಣಗಳನ್ನು ಮೆಗಾ ಲೋಕ  ಅದಾಲತ್‌ ಆಗಿ ಗುರುತಿಸಲಾಗಿದ್ದು, ಇನ್ನಷ್ಟು ಪ್ರಕರಣಗಳನ್ನು ಗುರುತಿಸುವ ಪ್ರಕ್ರಿಯೆ ನಡೆಯುತ್ತಿದೆ. ಕಳೆದ ಡಿಸೆಂಬರ್‌ನಲ್ಲಿ ನಡೆದ ಮೆಗಾ ಲೋಕ ಅದಾಲತ್‌ಗಾಗಿ 13138 ಪ್ರಕರಣಗಳನ್ನು ಗುರುತಿಸಲಾಗಿತ್ತು ಎಂದರು.

Advertisement

ಸಂತ್ರಸ್ತರಿಗೆ ಪರಿಹಾರ ಯೋಜನೆ: ಜಿಲ್ಲಾ ಕಾನೂನು ಸೇವಾ ಪ್ರಾಧಿ ಕಾರದಿಂದ ಕರ್ನಾಟಕ ಸಂತ್ರಸ್ತ ಯೋಜನೆ ಅಡಿ, ಮತ್ತೂಬ್ಬರ ಅಪರಾ ಧ ಕೃತ್ಯದಿಂದಾಗಿ ಮರಣ, ಅತ್ಯಾಚಾರ, ಆ್ಯಸಿಡ್‌ ದಾಳಿ ಅಥವಾ ಇನ್ನಿತರ ಯಾವುದೇ ರೀತಿಯಿಂದ ಗಾಯಗೊಂಡ ನೊಂದ ವ್ಯಕ್ತಿಗಳಿಗೆ ಪರಿಹಾರ ನೀಡಲು ವಿಚಾರಣೆ ನಡೆಸಲಾಗುತ್ತದೆ. ಜಿಲ್ಲೆಯಲ್ಲಿ 2014ರಿಂದ ಇಲ್ಲಿಯವರೆಗೆ 292 ಪ್ರಕರಣಗಳು ದಾಖಲಾಗಿದ್ದು, 288 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ. 170 ಪ್ರಕರಣಗಳಲ್ಲಿ 4.24 ಕೋಟಿ ರೂ. ಪರಿಹಾರ ಒದಗಿಸಲಾಗಿದೆ. ನೊಂದ ವ್ಯಕ್ತಿಗಳು ಅರ್ಜಿ ಸಲ್ಲಿಸಿ ಸೂಕ್ತ ಪರಿಹಾರ ಪಡೆಯಬಹುದಾಗಿದೆ ಎಂದು ಅವರು ಹೇಳಿದರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸರಸ್ವತಿ ಕೆ.ಎನ್‌., ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ದೇವೇಂದ್ರಪ್ಪ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next