Advertisement
ಪ್ರಕರಣಗಳನ್ನು ರಾಜಿ ಮಾಡಿಸಲು ಶಿವಮೊಗ್ಗದಲ್ಲಿ 15, ಭದ್ರಾವತಿಯಲ್ಲಿ 7, ಸಾಗರ, ಶಿಕಾರಿಪುರ, ತೀರ್ಥಹಳ್ಳಿಯಲ್ಲಿ ತಲಾ 4, ಸೊರಬದಲ್ಲಿ 3 ಹಾಗೂ ಹೊಸನಗರದಲ್ಲಿ 2 ಪೀಠ ರಚಿಸಲಾಗಿತ್ತು. ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎಸ್.ಎ. ಮುಸ್ತಫಾ ಹುಸೇನ್ ಅವರ ಮಾರ್ಗದರ್ಶನದಲ್ಲಿ ರಾಜಿ ಸಂಧಾನ ಪ್ರಕ್ರಿಯೆಗಳು ನಡೆದವು.
Related Articles
Advertisement
ಲೋಕ ಅದಾಲತ್ ಮೂಲಕ ಜನ ಸಾಮಾನ್ಯರ ಸಿವಿಲ್, ವ್ಯಾಜ್ಯ ಪೂರ್ವ ಮತ್ತು ಇತರೆ ಪ್ರಕರಣಗಳನ್ನು ಗುರುತಿಸಿ ರಾಜೀ ಸಂಧಾನದ ಮೂಲಕ ಶೀಘ್ರ ಮತ್ತು ಸುಲಭವಾಗಿ ಇತ್ಯರ್ಥ ಪಡಿಸಲಾಗುವುದು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎಸ್.ಎ. ಮುಸ್ತಫಾ ಹುಸೇನ್ ತಿಳಿಸಿದರು.
ಜಿಲ್ಲಾ ನ್ಯಾಯಾಲಯದಲ್ಲಿ ರಾಷ್ಟ್ರೀಯ ಲೋಕ ಅದಾಲತ್ ಉದ್ಘಾಟಿಸಿ ಮಾತನಾಡಿದ ಅವರು ಲೋಕ್ ಅದಾಲತ್ ಮೂಲಕ ಜನ ಸಾಮಾನ್ಯರ ಪ್ರಕರಣಗಳನ್ನು ಬಗೆಹರಿಸಿ ಸೂಕ್ತ ಪರಿಹಾರ ನೀಡಲು ಸರಕಾರ 818 ಕೋಟಿ ರೂ. ಬಿಡುಗಡೆ ಮಾಡಿದೆ. ರಾಜೀ ಆಗಬಹುದಾದಂತಹ ವ್ಯಾಜ್ಯಗಳನ್ನು ಶೀಘ್ರ ಪರಿಹರಿಸಲು ವಕೀಲರು ಗಮನ ಹರಿಸಬೇಕು ಎಂದರು.
ವಕೀಲರ ಸಂಘದ ಅಧ್ಯಕ್ಷ ದೇವೆಂದ್ರಪ್ಪ, ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ.ಎನ್. ಸರಸ್ವತಿ, ಹಿರಿಯ ನ್ಯಾಯಾ ಧೀಶರು, ಕಿರಿಯ ನ್ಯಾಯಾಧೀಶರು, ವಕೀಲರು ಇದ್ದರು.