Advertisement

ಬಿಹಾರ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲು ಮುಂದಾದ ಎಲ್ ಜೆಪಿ: NDAಗೆ ಆಘಾತ !

06:31 PM Oct 07, 2020 | Mithun PG |

ಬಿಹಾರ: ಲೋಕ ಜನಶಕ್ತಿ ಪಕ್ಷವು (LJP) ಬಿಹಾರದಲ್ಲಿ ಮುಂಬರುವ ಮೂರು ಹಂತದ ವಿಧಾನಸಭಾ ಚುನಾವಣೆಗೆ ಏಕಾಂಗಿಯಾಗಿ  ಸ್ಪರ್ಧಿಸಲು ನಿರ್ಧರಿಸಿದೆ.  ಭಾನುವಾರ ನಡೆದ ಪಕ್ಷದ ಸಂಸದೀಯ ಮಂಡಳಿ ಸಭೆಯಲ್ಲಿ ಎನ್‌ಡಿಎ ಮೈತ್ರಿಕೂಟದಿಂದ ದೂರವಾಗುವ ನಿರ್ಧಾರ ತೆಗೆದುಕೊಳ್ಳಲಾಗಿದೆ.

Advertisement

ಒಂದೊಂದೆ ಮಿತ್ರಪಕ್ಷಗಳನ್ನು ಕಳೆದುಕೊಳ್ಳುತ್ತಿರುವ ಎನ್ ಡಿಎಗೆ ಈ ನಿರ್ಧಾರ ಆಘಾತ ನೀಡಿದೆ.   ಸ್ಥಾನ ಹಂಚಿಕೆಯ ವಿಷಯವಾಗಿ ಅಸಮಾಧಾನ ಹೊಂದಿದ್ದ ಎಲ್ ಜೆಪಿ ಹೆಚ್ಚಿನ ಸ್ಥಾನದಲ್ಲಿ ಸ್ಪರ್ಧಿಸುವ ಬೇಡಿಕೆ ಮುಂದಿಟ್ಟಿತ್ತು. ಕಳೆದ ಬಾರಿ ಮಹಾಘಟಬಂಧನ್ ನಲ್ಲಿ ಗುರುತಿಸಿಕೊಂಡಿದ್ದ ಜೆಡಿಯು ಈ ಬಾರಿ ಎನ್ ಡಿಎ ಮೈತ್ರಿಕೂಟದಲ್ಲಿ ಗುರುತಿಸಿಕೊಂಡಿರುವುದು ಎಲ್ ಜೆಪಿ-ಬಿಜೆಪಿ-ಜೆಡಿಯು ನಡುವಿನ ಸ್ಥಾನ ಹಂಚಿಕೆ ಬಿಕ್ಕಟ್ಟಿಗೆ ಕಾರಣವಾಗಿತ್ತು.

ಎಲ್ ಜೆಪಿ ಪಕ್ಷದ ಮುಖ್ಯಸ್ಥ ಚಿರಾಗ್ ಪಾಸ್ವಾನ್ ನೇತೃತ್ವದಲ್ಲಿ ಪಕ್ಷದ ಸಂಸದೀಯ ಮಂಡಳಿ ಸಭೆ ನಡೆದಿದೆ. ಆ ಮೂಲಕ 143 ವಿಧಾನಸಭಾ ಕ್ಷೇತ್ರಗಳಲ್ಲಿ ಎಲ್ ಜೆಪಿ ಸ್ವತಂತ್ರವಾಗಿ ಸ್ಪರ್ಧಿಸಲಿದೆ ಎಂದು ತಿಳಿದುಬಂದಿದೆ. ಏಕಾಂಗಿಯಾಗಿ ಸ್ಪರ್ಧಿಸುವುದನ್ನು ಪಕ್ಷದ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಖಾಲಿದ್ ಸ್ಪಷ್ಟಪಡಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next