ನವದೆಹಲಿ: ದೇಶದ ಜನರು ಬಹುದಿನಗಳಿಂದ ಕಾತುರದಿಂದ ಕಾಯುತ್ತಿದ್ದ ಲೋಕ ಸಭಾ ಚುನಾವಣೆಗೆ ದಿನಾಂಕ ನಿಗದಿಗೊಳಿಸುವ ಸಮಯ ಹತ್ತಿರ ಬಂದಿದೆ.
ಹೌದು ಬಹುನಿರೀಕ್ಷಿತ ಲೋಕಸಭಾ ಚುನಾವಣೆಗೆ ನಾಳೆ( ಮಾರ್ಚ್ 16) ಮಧ್ಯಾಹ್ನ ದಿನಾಂಕ ಘೋಷಣೆ ಮಾಡಲಾಗುವುದೆಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ.
ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್, ಹೊಸದಾಗಿ ಚುನಾಯಿತ ಚುನಾವಣಾ ಆಯುಕ್ತರಾದ ಜ್ಞಾನೇಶ್ ಕುಮಾರ್ ಮತ್ತು ಸುಖಬೀರ್ ಸಿಂಗ್ ಸಂಧು ಅವರೊಂದಿಗೆ ನಾಳೆ ಮಧ್ಯಾಹ್ನ 3 ಗಂಟೆಗೆ ಪತ್ರಿಕಾಗೋಷ್ಠಿ ನಡೆಸಿ ಲೋಕಸಭೆ ಚುನಾವಣೆಯ ವೇಳಾಪಟ್ಟಿಯನ್ನು ಬಿಡುಗಡೆಮಾಡಲಿದ್ದಾರೆ ಎನ್ನಲಾಗಿದೆ. ಇದೆ ವೇಳೆ ಒಡಿಶಾ, ಸಿಕ್ಕಿಂ, ಅರುಣಾಚಲ ಪ್ರದೇಶ ಮತ್ತು ಆಂಧ್ರಪ್ರದೇಶದಲ್ಲಿ ನಿಗದಿಯಾಗಿರುವ ವಿಧಾನಸಭಾ ಚುನಾವಣೆಯ ದಿನಾಂಕಗಳನ್ನೂ ಪ್ರಕಟಿಸಲಿದೆ.
ಇದನ್ನೂ ಓದಿ: Jammu-Kashmir: ಅಂದು-ಇಂದು- ಸಮೃದ್ಧಿಯ ನಾಡು- ನೆಮ್ಮದಿಯ ಬೀಡು
ಈಗಾಗಲೇ ಚುನಾವಣಾ ತಯಾರಿಯಲ್ಲಿರುವ ಪಕ್ಷಗಳು ತಮ್ಮ ತಮ್ಮ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ಇನ್ನು ಕೆಲವು ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುವುದು ಬಾಕಿಯಿದೆ. ಇದರ ಜೊತೆಗೆ ಚುನಾವಣಾ ರಾಲಿಗಳನ್ನು ಬಿಡುವಿಲ್ಲದೆ ನಡೆಸುತ್ತಿವೆ,