Advertisement

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

10:17 AM Apr 26, 2024 | Team Udayavani |

ನವದೆಹಲಿ: ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನ ಶುಕ್ರವಾರ (ಏ.26) ಬೆಳಗ್ಗೆ 7ಗಂಟೆಯಿಂದ ಆರಂಭಗೊಂಡಿದ್ದು, ಏತನ್ಮಧ್ಯೆ ಎರಡನೇ ಹಂತದ ಕ್ಷೇತ್ರಗಳಲ್ಲಿ ಪ್ರತಿಯೊಬ್ಬರು ದಾಖಲೆ ಸಂಖ್ಯೆಯಲ್ಲಿ ಭಾಗವಹಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್‌ ಮೂಲಕ ಮನವಿ ಮಾಡಿಕೊಂಡಿದ್ದಾರೆ.

Advertisement

ಇದನ್ನೂ ಓದಿ:Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ಲೋಕಸಭೆಯ ಎರಡನೇ ಹಂತದ ಚುನಾವಣೆಯಲ್ಲಿ ಕರ್ನಾಟಕ, ಕೇರಳ ಸೇರಿದಂತೆ ದೇಶದ 88 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ. 9ಗಂಟೆ ಸುಮಾರಿಗೆ ಶೇ.10ರಷ್ಟು ಮತದಾನವಾಗಿರುವುದಾಗಿ ಆಯೋಗದ ಮೂಲಗಳು ತಿಳಿಸಿವೆ.

ಇಂದು ಚುನಾವಣೆ ನಡೆಯುತ್ತಿರುವ ರಾಜ್ಯಗಳ ಮತದಾರರಿಗೆ ಪ್ರಧಾನಿ ಮೋದಿ ಅವರು ಅಲ್ಲಿನ ಪ್ರಾದೇಶಿಕ ಭಾಷೆಯಲ್ಲಿ ಮತದಾನ ಮಾಡುವಂತೆ ಮನವಿ ಮಾಡಿದ್ದು, ಜತೆಗೆ ಕರ್ನಾಟಕದ ಮತದಾರರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ಕನ್ನಡದಲ್ಲಿ ಪೋಸ್ಟ್‌ ಮಾಡಿದ್ದಾರೆ.

Advertisement

“ಹೆಚ್ಚಿನ ಪ್ರಮಾಣದ ಮತದಾನವು ನಮ್ಮ ಪ್ರಜಾಪ್ರಭುತ್ವವನ್ನು ಬಲಪಡಿಸುತ್ತದೆ. ನಮ್ಮ ಯು ಮತದಾರರು ಮತ್ತು ಮಹಿಳಾ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ನಾನು ವಿಶೇಷವಾಗಿ ಕೋರುತ್ತೇನೆ. ನಿಮ್ಮ ಮತ ನಿಮ್ಮ ಧ್ವನಿ! ಎಂದು ಟ್ವೀಟ್‌ ನಲ್ಲಿ ಉಲ್ಲೇಖಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next