Advertisement

ಕೇದಾರನಾಥ ಸನ್ನಿಧಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿಶೇಷ ಪೂಜೆ, ಧ್ಯಾನ

09:00 AM May 19, 2019 | Nagendra Trasi |

ನವದೆಹಲಿ:ಪ್ರಧಾನಿ ನರೇಂದ್ರ ಮೋದಿ ಇಂದಿನಿಂದ ಎರಡು ದಿನಗಳ ಕಾಲ ಉತ್ತರಾಖಂಡ್ ರಾಜ್ಯ ಪ್ರವಾಸದಲ್ಲಿದ್ದು, ಶನಿವಾರ ಬೆಳಗ್ಗೆ ಕೇದಾರನಾಥ್ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಭಾನುವಾರ ದೆಹಲಿಗೆ ವಾಪಸ್ ಆಗುವ ಮೊದಲು ಪ್ರಧಾನಿ ಮೋದಿ ಅವರು ಬದರಿನಾಥಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸುವ ಸಾಧ್ಯತೆ ಇದೆ ಎಂದು ವರದಿ ಹೇಳಿದೆ.

Advertisement

ಮಹಾ ಲೋಕಸಮರದ ಅಂತಿಮ ಹಾಗೂ 7ನೇ ಹಂತದ ಚುನಾವಣೆ ನಾಳೆ ನಡೆಯಲಿದ್ದು, ಇದಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ಪವಿತ್ರ ಕೇದಾರನಾಥ್ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಭಾನುವಾರ ನಡೆಯಲಿರುವ ಅಂತಿಮ ಹಂತದ ಲೋಕಸಭಾ ಕ್ಷೇತ್ರಗಳ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸ್ಪರ್ಧಿಸುತ್ತಿರುವ ವಾರಣಾಸಿ ಕೂಡಾ ಸೇರಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಕೇದಾರನಾಥನ ಸನ್ನಿಧಿಯಲ್ಲಿ ಸ್ವಲ್ಪ ಹೊತ್ತು ಧ್ಯಾನಸ್ಥರಾಗಿದ್ದು, ಬಳಿಕ ವಿಶೇಷ ಪೂಜೆ ಸಲ್ಲಿಸಿರುವುದಾಗಿ ವರದಿ ತಿಳಿಸಿದೆ. ಮತ್ತೊಂದೆಡೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಗುಜರಾತ್ ನಲ್ಲಿರುವ ಸೋಮನಾಥ್ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next