Advertisement
ಬೆಳಗಾವಿ, ಉತ್ತರ ಕನ್ನಡ, ರಾಯಚೂರು, ಚಿತ್ರದುರ್ಗ, ಚಿಕ್ಕಬಳ್ಳಾಪುರ ಕ್ಷೇತ್ರಗಳ ಜತೆಗೆ ಜೆಡಿಎಸ್‌ಗೆ ಬಿಟ್ಟುಕೊಡಬೇಕಾದ 3 ಕ್ಷೇತ್ರಗಳ ಬಗ್ಗೆ ಈ ಸಭೆಯಲ್ಲಿ ಚರ್ಚೆಯಾಗಿದ್ದು, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಸಚಿವ ಅಮಿತ್ ಶಾ ಅವರಿಗೆ ಎಲ್ಲ ಕ್ಷೇತ್ರಗಳ ಸ್ಥಿತಿಗತಿ ಬಗ್ಗೆ ಬಿ.ಎಸ್. ಯಡಿಯೂರಪ್ಪ, ವಿಜಯೇಂದ್ರ ಹಾಗೂ ಆರ್.ಅಶೋಕ ಮನದಟ್ಟು ಮಾಡಿಕೊಟ್ಟಿದ್ದಾರೆ.
Related Articles
ಮಂಗಳವಾರ ನಡೆದ ಸಭೆಯ ಬಳಿಕ ಉತ್ತರ ಕನ್ನಡ ಜಿಲ್ಲೆಯ ಹಾಲಿ ಸಂಸದ ಅನಂತಕುಮಾರ್ ಹೆಗಡೆಯವರಿಗೆ ಈ ಬಾರಿ ಟಿಕೆಟ್ ತಪ್ಪುವುದು ಬಹುತೇಕ ದೃಢವಾಗುತ್ತಿದೆ. ಹೆಗಡೆ ಬಗ್ಗೆ ರಾಷ್ಟ್ರ ನಾಯಕರ ಅಸಮಾ ಧಾನ ಹಿನ್ನೆಲೆಯಲ್ಲಿ ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಯವರಿಗೆ ಈ ಬಾರಿ ಕೆನರಾ ಲೋಕಸಭಾ ಕ್ಷೇತ್ರದ ಟಿಕೆಟ್ ನೀಡಲು ವರಿಷ್ಠರು ತೀರ್ಮಾನಿಸಿದ್ದಾರೆ ಎಂದು ಬಿಜೆಪಿ ಮೂಲಗಳು ಖಚಿತಪಡಿಸಿವೆ.
Advertisement
ಅದೇ ರೀತಿ ರಾಯಚೂರಿನಿಂದ ಬಿ.ವಿ. ನಾಯಕ್, ಚಿತ್ರದುರ್ಗದಿಂದ ಗೋವಿಂದ ಕಾರಜೋಳ, ಚಿಕ್ಕಬಳ್ಳಾಪುರದಿಂದ ಡಾ| ಕೆ.ಸುಧಾಕರ್ ಹೆಸರು ಬಹುತೇಕ ಅಂತಿಮ ಗೊಂಡಿದೆ. ಆದರೆ ಬೆಳಗಾವಿ ವಿಚಾರದಲ್ಲಿ ಮಾತ್ರ ಇನ್ನೂ ಗೊಂದಲಗಳಿವೆ ಎಂದು ಹೇಳಲಾಗುತ್ತಿದೆ.
ಸಂಭಾವ್ಯ ಅಭ್ಯರ್ಥಿಗಳುಉತ್ತರ ಕನ್ನಡ:
ವಿಶ್ವೇಶ್ವರ ಹೆಗಡೆ ಕಾಗೇರಿ
ರಾಯಚೂರು: ಬಿ.ವಿ.ನಾಯಕ್
ಚಿತ್ರದುರ್ಗ:
ಗೋವಿಂದ ಕಾರಜೋಳ
ಚಿಕ್ಕಬಳ್ಳಾಪುರ: ಡಾ|ಕೆ.ಸುಧಾಕರ್
ಬೆಳಗಾವಿ: ಅಭ್ಯರ್ಥಿ ಆಯ್ಕೆ ಗೊಂದಲ