Advertisement

Lok Sabha Election 2024:ಸಂಜಯ್ ಗಾಂಧಿ ಜಯ ಸಾಧಿಸಿದ್ದ ಅಮೇಠಿಯಿಂದ ವರುಣ್‌ ಗಾಂಧಿ ಕಣಕ್ಕೆ?

01:38 PM Feb 26, 2024 | Team Udayavani |

ಅಮೇಠಿ: ಕಾಂಗ್ರೆಸ್‌ ಪಕ್ಷದ ಸಾಂಪ್ರದಾಯಿಕ ಭದ್ರಕೋಟೆ ಎಂದು ಪರಿಗಣಿಸಲ್ಪಟ್ಟಿರುವ ಅಮೇಠಿಯಲ್ಲಿ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ವರುಣ್‌ ಗಾಂಧಿ ಚಿತ್ತ ಹರಿಸಿರುವುದಾಗಿ ಐಎಎನ್‌ ಎಸ್‌ ನ್ಯೂಸ್‌ ಏಜೆನ್ಸಿ ವರದಿ ಮಾಡಿದೆ.

Advertisement

ಇದನ್ನೂ ಓದಿ:Child Marriage: ನಾನು ಬದುಕಿರುವವರೆಗೂ ಬಾಲ್ಯ ವಿವಾಹಕ್ಕೆ ಅವಕಾಶ ನೀಡಲ್ಲ…: ಅಸ್ಸಾಂ ಸಿಎಂ

ಈ ಬೆಳವಣಿಗೆ ಬಗ್ಗೆ ಕಾಂಗ್ರೆಸ್‌ ಸಂಸದ ರಾಹುಲ್‌ ಗಾಂಧಿ ಈವರೆಗೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಅಮೇಠಿಯಲ್ಲಿ ರಾಹುಲ್‌ ಗಾಂಧಿ ಮತ್ತೆ ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರೋ ಇಲ್ಲವೋ ಎಂಬುದು ಸ್ಪಷ್ಟವಾಗಿಲ್ಲ.

2019ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ರಾಹುಲ್‌ ಗಾಂಧಿ ತಮ್ಮ ಪ್ರತಿಸ್ಪರ್ಧಿ ಬಿಜೆಪಿಯ ಸ್ಮೃತಿ ಇರಾನಿ ವಿರುದ್ಧ ಪರಾಜಯಗೊಂಡಿದ್ದು, ಈ ಮೂಲಕ ಅಮೇಠಿ ಗಾಂಧಿ ಕುಟುಂಬದ ಕೈತಪ್ಪಿದಂತಾಗಿತ್ತು.

ರಾಹುಲ್‌ ಗಾಂಧಿ ಈಗ ಕೇರಳದ ವಯನಾಡ್‌ ಸಂಸದ. ಒಂದು ವೇಳೆ ವರದಿಯ ಮಾಹಿತಿಯ ಆಧಾರದ ಮೇಲೆ ಹೇಳುವುದಾದರೆ, ರಾಹುಲ್‌ ಗಾಂಧಿ ವಯನಾಡ್‌ ನಿಂದಲೇ ಸ್ಪರ್ಧಿಸಲು ಹೆಚ್ಚು ಒಲವು ಹೊಂದಿದ್ದಾರೆನ್ನಲಾಗಿದೆ. ಮತ್ತೊಂದೆಡೆ ಪ್ರಿಯಾಂಕಾ ಗಾಂಧಿ ಕೂಡಾ ಅಮೇಠಿ ಬದಲು ರಾಯ್‌ ಬರೇಲಿಯಲ್ಲಿ ಸ್ಪರ್ಧಿಸುವ ಸಾಧ್ಯತೆ ಇದೆ ಎಂದು ವರದಿ ತಿಳಿಸಿದೆ.

Advertisement

ರಾಯ್‌ ಬರೇಲಿ ಲೋಕಸಭಾ ಕ್ಷೇತ್ರದಿಂದ ಸತತವಾಗಿ ಸ್ಪರ್ಧಿಸುತ್ತಿದ್ದ ಸೋನಿಯಾ ಗಾಂಧಿ ಇತ್ತೀಚೆಗಷ್ಟೇ ಅನಾರೋಗ್ಯದ ಕಾರಣದಿಂದ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ ಎಂದು ಕ್ಷೇತ್ರದ ಜನರಿಗೆ ಬಹಿರಂಗಪತ್ರ ಬರೆದಿದ್ದರು. ನೀವು ನನ್ನ ಮತ್ತು ನನ್ನ ಕುಟುಂಬದ ಬೆಂಬಲಕ್ಕೆ ನಿಂತಿದ್ದೀರಿ ಎಂಬುದು ಗೊತ್ತು ಎಂಬುದಾಗಿ ಸೋನಿಯಾ ಪತ್ರದಲ್ಲಿ ತಿಳಿಸಿದ್ದರು.

ಅಮೇಠಿ ಲೋಕಸಭಾ ಕ್ಷೇತ್ರದಲ್ಲಿ ಗಾಂಧಿ ಕುಟುಂಬದ ರಾಜಕೀಯ ಜೀವನ ಆರಂಭವಾಗಿರುವ ಕುರಿತು ಹಿರಿಯ ಕಾಂಗ್ರೆಸ್‌ ಮುಖಂಡ ರಾಮ್‌ ಕರಣ್‌ ಸಿಂಗ್‌ ಮಾತನಾಡಿ, 1980ರಲ್ಲಿ ಸಂಜಯ್‌ ಗಾಂಧಿ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸುವ ಮೂಲಕ ಅಮೇಠಿ ಮತ್ತು ಗಾಂಧಿ ಕುಟುಂಬದ ನಡುವೆ ಸಂಬಂಧ ಬೆಳೆದಿತ್ತು ಎಂದು ತಿಳಿಸಿದರು.

ಒಂದು ವೇಳೆ ರಾಹುಲ್‌ ಗಾಂಧಿ ಅಮೇಠಿಯಿಂದ ಸ್ಪರ್ಧಿಸಲು ನಿರಾಕರಿಸಿದರೆ, ವರುಣ್‌ ಗಾಂಧಿ ಅಮೇಠಿಯಿಂದ ಸ್ಪರ್ಧಿಸುವ ಸಾಧ್ಯತೆ ಇದ್ದಿರುವುದಾಗಿ ಸಿಂಗ್‌ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next