Advertisement

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

11:01 AM Apr 26, 2024 | Team Udayavani |

ಬಂಟ್ವಾಳ: ಬಂಟ್ವಾಳ ತಾಲೂಕು ವೀರಕಂಬ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಜಿ ಇಲ್ಲಿನ ಮತ ಕೇಂದ್ರ ಸಂಖ್ಯೆ 203 ರಲ್ಲಿ ವೀರಕಂಬ ಗ್ರಾಮದ ಗಣೇಶ್ ನಿಲಯ ಕಮಲಾಕ್ಷ ಪೂಜಾರಿಯವರ ದ್ವಿತೀಯ ಪುತ್ರಿ ವಿನುತಾ ಇಂದು ತನ್ನ ವಿವಾಹ ಸುಮೂರ್ತದ ಮೊದಲು ಮತಗಟ್ಟೆಗೆ ಆಗಮಿಸಿ ಮತದಾನ ಮಾಡಿದರು.

Advertisement

ವಿರಕಂಬ ಮಜಿ ಶಾಲೆಯಲ್ಲಿ ಎರಡು ಮತ ಕೇಂದ್ರಗಳಿದ್ದು ಮಧ್ಯಾಹ್ನ ವಿಪರೀತ ಬಿಸಿಲು ಸೆಕೆ, ಹಾಗೂ ಇವತ್ತು ಬಹಳಷ್ಟು ಶುಭ ಕಾರ್ಯಕ್ರಮಗಳಿದ್ದು ಬೆಳಗ್ಗಿನಿಂದಲೇ ಎರಡು ಮತ ಕೇಂದ್ರಗಳಲ್ಲಿ ಮತದಾರರು ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸುತ್ತಿದ್ದರು.

ಮತದಾನ ಕೇಂದ್ರದಲ್ಲಿ ಶುದ್ಧ ಕುಡಿಯುವ ನೀರು ಹಾಗೂ ಬೆಲ್ಲದ ವ್ಯವಸ್ಥೆ ಮಾಡಲಾಗಿದೆ.

ಇದನ್ನೂ ಓದಿ: Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Advertisement

Udayavani is now on Telegram. Click here to join our channel and stay updated with the latest news.

Next