Advertisement
ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸೋಮವಾರ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
Related Articles
Advertisement
ಈ ಚುನಾವಣೆಯಲ್ಲಿ ಬಿಜೆಪಿಯವರು ಕೇವಲ ಪ್ರಧಾನಿ ನರೇಂದ್ರ ಮೋದಿ ಹೆಸರು ಹೇಳುತ್ತಿದ್ದಾರೆ ಎಂಬ ಪ್ರತಿಪಕ್ಷಗಳ ಆರೋಪಕ್ಕೆ ತಿರುಗೇಟು ನೀಡಿದ ಅವರು, ಇದು ಲೋಕಸಭಾ ಚುನಾವಣೆ, ರಾಷ್ಟ್ರದ ಚುನಾವಣೆ. ಮೋದಿಯವರ ಹೆಸರು ಹೇಳಲೇಬೇಕು, ಹೇಳುತ್ತೇವೆ. ಅದರ ಜೊತೆಗೆ ನಾವು ಮಾಡಿದ ಅಭಿವೃದ್ಧಿ ಕಾರ್ಯಗಳನ್ನು ಸೇರಿಸಿ ಮತ ಕೇಳುತ್ತೇವೆ ಎಂದರು.
ಇದೇ ವೇಳೆ, ಪ್ರಧಾನಿ ಮೋದಿ ಪ್ರಚಾರದ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಎ. 25 ಅಥವಾ 26ರ ನಂತರ ಉತ್ತರ ಕರ್ನಾಟಕ ಭಾಗದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಪ್ರವಾಸ ಮಾಡಲಿದ್ದು, ಎರಡು ಅಥವಾ ಮೂರು ಲೋಕಸಭೆಗೆ ಒಂದು ಕ್ಲಸ್ಟರ್ ಮಾಡಿದ್ದಾರೆ ಎಂದರು.
ನಟ ಪ್ರಕಾಶ್ ರೈ ಪ್ರಧಾನಿ ಮೋದಿ ಕುರಿತು ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಪ್ರಕಾಶ ರೈ ಯಾವಾಗ ಫೇಸ್ ರೀಡರ್ ಆದರು. ಮೋದಿಯವರು ವಿಶ್ವದ ನಾಯಕ ಅವರು ನೋಡುವ ದೃಷ್ಟಿಕೋನ ಹಾಗಿದೆ ಎಂದು ಹೇಳಿದರು.
ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಮಾಜಿ ಸಚಿವ ಬಿ.ಸಿ.ಪಾಟೀಲ್, ಶಾಸಕ ಡಾ. ಚಂದ್ರು ಲಮಾಣಿ, ಮಾಜಿ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ, ಅರುಣ್ ಕುಮಾರ್ ಪೂಜಾರಿ, ಶಿವರಾಜ ಸಜ್ಜನ್ ಹಾಗೂ ಬಿಜೆಪಿ ಮುಖಂಡ ಶಂಕರಣ್ಣ ಮಾಂತನವರ ಇದ್ದರು.
ತಂದೆ ತಾಯಿ ಸಮಾಧಿಗೆ ನಮನ
ಬಸವರಾಜ ಬೊಮ್ಮಾಯಿಯವರು ಇಂದು ನಾಮಪತ್ರ ಸಲ್ಲಿಕೆಗೂ ಮೊದಲು ಹುಬ್ಬಳ್ಳಿಯ ರಾಯಾಪುರ ಬಳಿ ಇರುವ ಅವರ ತಂದೆ ತಾಯಿಯ ಗದ್ದುಗೆಗೆ ತೆರಳಿ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದುಕೊಂಡರು. ಇದೇ ಸಮಯದಲ್ಲಿ ತಮ್ಮ ಮೊಮ್ಮಗನ ಜೊತೆಗೆ ವಿಡಿಯೊ ಕಾಲ್ ಮೂಲಕ ಮಾತನಾಡಿ, ನಂತರ ನಾಮಪತ್ರ ಸಲ್ಲಿಸಲು ತೆರಳಿದರು.