Advertisement

Lok Sabha Election 3ನೇ ಹಂತ: ಬಹಿರಂಗ ಪ್ರಚಾರ ಇಂದು ಅಂತ್ಯ

01:56 AM May 05, 2024 | Team Udayavani |

ಹೊಸದಿಲ್ಲಿ: ಮೇ 7ರಂದು ನಡೆಯಲಿರುವ 3ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರವು ಭಾನುವಾರ ಅಂತ್ಯವಾಗಲಿದೆ. 12 ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಒಟ್ಟು 94 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ.

Advertisement

3ನೇ ಹಂತದಲ್ಲಿ ಗುಜರಾತ್‌ನ 26 ಲೋಕಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಕರ್ನಾಟಕದ 14, ಅಸ್ಸಾಮ್‌ 4, ಬಿಹಾರ 5, ಛತ್ತೀಸ್‌ಗಢ 7, ಗೋವಾ 2, ಮಧ್ಯ ಪ್ರದೇಶ 8, ಮಹಾರಾಷ್ಟ್ರ 11, ಉತ್ತರ ಪ್ರದೇಶ 10, ಪಶ್ಚಿಮ ಬಂಗಾಲ 4, ದಾದ್ರಾ ಮತ್ತು ನಗರ ಹವೇಲಿ ಹಾಗೂ ದಮನ್‌ ಮತ್ತು ದಿಯು 2 ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಬಿಜೆಪಿ, ಕಾಂಗ್ರೆಸ್‌ ಸೇರಿದಂತೆ ಪ್ರಮುಖ ಪಕ್ಷಗಳು ತಮ್ಮ ಅಭ್ಯರ್ಥಿಗಳ ಪರವಾಗಿ ಭರ್ಚರಿ ಪ್ರಚಾರ ನಡೆಸಿವೆ.

Advertisement

Udayavani is now on Telegram. Click here to join our channel and stay updated with the latest news.

Next