Advertisement

Politics: ಲೋಕಸಭೆ ಚುನಾವಣೆ ಸಿದ್ಧತೆ: ನಾಳೆ ಕಾಂಗ್ರೆಸ್‌ ಮಹತ್ವದ ಸಭೆ

10:46 PM Jan 02, 2024 | Team Udayavani |

ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆ ಹಾಗೂ ಭಾರತ್‌ ನ್ಯಾಯ ಯಾತ್ರೆಗಾಗಿ ಪಕ್ಷದ ಸಿದ್ಧತೆ ಕುರಿತು ಚರ್ಚಿಸಲು ಜ.4ರಂದು ಕಾಂಗ್ರೆಸ್‌ ಮಹತ್ವದ ಸಭೆ ನಡೆಸುತ್ತಿದೆ. ನವದೆಹಲಿಯ ಎಐಸಿಸಿ ಪ್ರಧಾನ ಕಚೇರಿಯಲ್ಲಿ ನಡೆಯುವ ಈ ಸಭೆಯ ಅಧ್ಯಕ್ಷತೆಯನ್ನು ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಹಿಸಲಿದ್ದಾರೆ.

Advertisement

ಪಕ್ಷದ ಪ್ರಧಾನ ಕಾರ್ಯದರ್ಶಿಗಳು, ಪ್ರಾದೇಶಿಕ ಕಾಂಗ್ರೆಸ್‌ ಸಮಿತಿಗಳ ಅಧ್ಯಕ್ಷರು, ಸಿಎಲ್‌ಪಿ ನಾಯಕರು ಸೇರಿದಂತೆ ಪಕ್ಷದ ಮುಖಂಡರು ಈ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಇಂಫಾಲದಿಂದ ಮುಂಬೈವರೆಗೆ ನಡೆಯುವ ಭಾರತ್‌ ನ್ಯಾಯ ಯಾತ್ರೆಗೆ ಜ.14ರಂದು ಚಾಲನೆ ನೀಡಲಾಗುತ್ತಿದೆ. ಯಾತ್ರೆಯ ಸಿದ್ಧತೆ ಹಾಗೂ ಸಾರ್ವತ್ರಿಕ ಚುನಾವಣೆಗೆ ಪಕ್ಷದ ತಂತ್ರಗಾರಿಕೆ ಕುರಿತು ಚರ್ಚಿಸಲು ಈ ಸಭೆ ಆಯೋಜಿಸಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

Advertisement

Udayavani is now on Telegram. Click here to join our channel and stay updated with the latest news.

Next