ಹಾಸನ: ನಗರದ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಹಾಸನ ಲೋಕಸಭಾ ಕ್ಷೇತ್ರಗಳ ಮತಗಳ ಎಣಿಕೆಗೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಮೇ 23 ರಂದು ಬೆಳಗ್ಗೆ 8 ಗಂಟೆಯಿಂದ ಮತಗಳ ಎಣಿಕೆ ಆರಂಭವಾಗಲಿದೆ ಎಂದು ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಹೇಳಿದರು.
ಮತಗಳ ಎಣಿಕೆಯ ಬಗ್ಗೆ ಸುದ್ದಿಗೋಷ್ಠಿಯಲ್ಲಿ ವಿವರ ನೀಡಿದ ಜಿಲ್ಲಾ ಚುನಾವಣಾಧಿಕಾರಿಯೂ ಆದ ಅವರು, ಪ್ರತಿ ವಿಧಾನಸಭಾ ಕ್ಷೇತದ ಮತಗಳ ಎಣಿಕೆ ಒಂದೊಂದು ಕೊಠಡಿಯಲ್ಲಿ ನಡೆಯಲಿದ್ದು, ಪ್ರತಿ ವಿಧಾನಸಭಾ ಕ್ಷೇತ್ರದ ಮತಗಳ ಎಣಿಕೆಗೆ 14 ಟೇಬಲ್ಗಳ ವ್ಯವಸ್ಥೆ ಮಾಡಲಾಗಿದೆ. ಒಟ್ಟು 8 ವಿಧಾನಸಭಾ ಕ್ಷೇತ್ರಗಳ ಮತಗಳ ಎಣಿಕೆಯು 112 ಟೇಬಲ್ಗಳಲ್ಲಿ ನಡೆಯಲಿದೆ.
ಅಂಚೆ ಮತಪತ್ರಗಳು ಹಾಗೂ ಸೇವಾ ಮತದಾರರ ಮತಗಳ ಎಣಿಕೆಗೆ 10 ಟೇಬಲ್ಗಳ ವ್ಯವಸ್ಥೆ ಮಾಡ ಲಾಗಿದೆ. ಪ್ರತಿ ಎಣಿಕಾ ಟೇಬಲ್ನಲ್ಲೂ 3 ಮಂದಿ ಸಿಬ್ಬಂದಿ ಎಣಿಕೆ ಕಾರ್ಯನಿರ್ವಹಿಸಲಿದ್ದು, ಒಟ್ಟು 408 ಸಿಬ್ಬಂದಿ ಎಣಿಕೆ ಕಾರ್ಯನಿರ್ವಹಿಸುವರು ಎಂದರು.
18ರಿಂದ 23 ಸುತ್ತುಗಳಲ್ಲಿ ಮತ ಎಣಿಕೆ: ಅಯಾ ವಿಧಾನಸಭಾ ಕ್ಷೇತ್ರಗಳ ಮತಗಟ್ಟೆಗಳನ್ನಾಧರಿಸಿ ಮತಗಳ ಎಣಿಕೆ 18ರಿಂದ 23 ಸುತ್ತುಗಳಲ್ಲಿ ಮುಗಿ ಯಲಿದೆ. ಕಡೂರು ವಿಧಾನಸಭಾ ಕ್ಷೇತ್ರದ ಮತಗಳ ಎಣಿಕೆ 18 ಸುತ್ತುಗಳಲ್ಲಿ ಪೂರ್ಣಗೊಂಡರೆ ಅತಿ ಹೆಚ್ಚು ಮತಗಟ್ಟೆಗಳಿರುವ ಹೊಳೆನರಸೀಪುರ ಕ್ಷೇತ್ರದ ಮತ ಗಳ ಎಣಿಕೆ 23 ಸುತ್ತುಗಳಲ್ಲಿ ಮುಗಿಯಲಿದೆ. ಎಲೆಕ್ಟ್ರಾನಿಕ್ ಮತ ಯಂತ್ರಗಳಲ್ಲಿ ದಾಖಲಾದ ಮತಗಳ ಎಣಿಕೆಯ ನಂತರ ಪ್ರತಿ ವಿಧಾನ ಸಭಾ ಕ್ಷೇತ್ರದಲ್ಲೂ 5 ಮತಗಟ್ಟೆಗಳಲ್ಲಿನ ವಿ.ವಿ.ಪ್ಯಾಟ್‌ನ ಮತ ಚೀಟಿಗಳನ್ನು ಎಣಿಕೆ ಆರಂಭವಾಗಲಿದೆ. ವಿ.ವಿ.ಪ್ಯಾಟ್‌ಗಳ ಎಣಿಕೆಗೆ ಲಾಟರಿ ಮೂಲಕ ಮತಗಟ್ಟೆಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ. ವಿವಿ ಪ್ಯಾಟ್‌ನ ಚೀಟಿ ಗಳ ಎಣಿಕೆ ಮಾಡಿದ ನಂತರ ಚುನಾವಣಾ ಫಲಿ ತಾಂಶವನ್ನು ಅಧಿಕೃತವಾಗಿ ಪ್ರಕಟಿಸಲಾಗುವುದು ಎಂದು ಜಿಲ್ಲಾ ಚುನಾವಣಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಅವರು ವಿವರ ನೀಡಿದರು.
ಏಜೆಂಟರು, ಅಭ್ಯರ್ಥಿಗಳು, ಮಾಧ್ಯಮ ಪ್ರತಿನಿಧಿ ಗಳಿಗೆ ಪ್ರವೇಶ: ಮತ ಎಣಿಕೆ ಕೇಂದ್ರಕ್ಕೆ ಮತಗಳ ಎಣಿಕೆ ಸಿಬ್ಬಂದಿ, ಅಯಾ ಅಭ್ಯರ್ಥಿಗಳಿಂದ ಸೂಚಿ ಸಿದ ಏಜೆಂಟರು, ಅಭ್ಯರ್ಥಿಗಳು, ಮಾಧ್ಯಮ ಪ್ರತಿನಿಧಿ ಗಳಿಗೆ ಮಾತ್ರ ಮತ ಎಣಿಕೆ ಕೇಂದ್ರ ಪ್ರವೇಶಕ್ಕೆ ಅನು ಮತಿ ನೀಡಿದ್ದು, ಇವರೆಲ್ಲರಿಗೂ ಗುರುತಿನ ಚೀಟಿ ನೀಡಲಾಗಿದೆ. ಗುರ್ತಿನ ಚೀಟಿ ಹೊಂದಿದವರು ಮಾತ್ರ ಎಣಿಕೆ ಕೇಂದ್ರ ಪ್ರವೇಶಿಸಲು ಅವಕಾಶ ಇರುತ್ತದೆ ಎಂದು ಹೇಳಿದರು.
ಒಣ ದಿನ ಘೋಷಣೆ: ಮತಗಳ ಎಣಿಕೆ ಕಾರ್ಯ ಸುಗಮವಾಗಿ ನಡೆಯಲು ಹಾಗೂ ಕಾನೂನು ಸುವ್ಯವಸ್ಥೆಯನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಮೇ 22ರ ಮಧ್ಯರಾತ್ರಿ 12 ಗಂಟೆಯಿಂದ ಮೇ 24ರ ಮುಂಜಾನೆವರೆಗೆ ಜಿಲ್ಲಾದ್ಯಂತ ಮದ್ಯ ಮಾರಾಟ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.