ಶಿವಮೊಗ್ಗ/ಮೈಸೂರು: ತೀವ್ರ ಕುತೂಹಲ ಕೆರಳಿಸಿರುವ ಲೋಕಸಭಾ ಚುನಾವಣೆಯ ಮತಎಣಿಕೆ ಮಂಗಳವಾರ(ಜೂನ್ 04) ಬೆಳಗ್ಗೆ 8ಗಂಟೆಗೆ ಆರಂಭಗೊಂಡಿದ್ದು, ಪ್ರಾಥಮಿಕ ಹಂತದ ಫಲಿತಾಂಶದ ಪ್ರಕಾರ ಶಿವಮೊಗ್ಗದಲ್ಲಿ ಬಿಜೆಪಿಯ ಬಿ.ವೈ.ರಾಘವೇಂದ್ರ ಮುನ್ನಡೆ ಸಾಧಿಸಿದ್ದು, ಪಕ್ಷೇತರವಾಗಿ ಸ್ಪರ್ಧಿಸಿದ್ದ ಕೆಎಸ್ ಈಶ್ವರಪ್ಪ ತೃತೀಯ ಸ್ಥಾನಕ್ಕೆ ತಳ್ಳಲ್ಪಟ್ಟಿದ್ದಾರೆ.
ಇದನ್ನೂ ಓದಿ:Counting; ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಪೊಲೀಸರ ವಾಗ್ವಾದ
ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಹಿನ್ನಡೆ ಅನುಭವಿಸಿದ್ದಾರೆ. ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯ ಯದುವೀರ್ ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್ ನ ಎಂ.ಲಕ್ಷ್ಮಣ ಹಿನ್ನಡೆ ಅನುಭವಿಸಿದ್ದಾರೆ.
ಮತ್ತೊಂದೆಡೆ ತೀವ್ರ ಕುತೂಹಲ ಕೆರಳಿಸಿರುವ ಕಲಬುರಗಿಯಲ್ಲಿ ಬಿಜೆಪಿಯ ಡಾ.ಉಮೇಶ್ ಜಾಧವ್, ಮಂಡ್ಯದಲ್ಲಿ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹಾಗೂ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಡಾ.ಮಂಜುನಾಥ್ ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್ ನ ಡಿಕೆ ಸುರೇಶ್ ಹಿನ್ನಡೆ ಕಂಡಿದ್ದಾರೆ.
ಉತ್ತರ ಕನ್ನಡದಲ್ಲಿ ಬಿಜೆಪಿಯ ವಿಶ್ವೇಶ್ವರ ಹೆಗಡೆ ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್ ಪಕ್ಷದ ಅಂಜಲಿ ನಿಂಬಾಳ್ಕರ್ ಹಿನ್ನಡೆ ಕಂಡಿದ್ದಾರೆ. ಕಾಗೇರಿ ಅವರು 19,000 ಸಾವಿರ ಮತಗಳ ಮುನ್ನಡೆ ಸಾಧಿಸಿದ್ದಾರೆ.