Advertisement
ಕರ್ನಾಟಕದಲ್ಲಿ ನಾವು ಈ ರೀತಿಯ ಫಲಿತಾಂಶ ನಿರೀಕ್ಷೆ ಮಾಡಿರಲಿಲ್ಲ. ಇದು ನಮಗೆ ತುಂಬ ನಿರಾಸೆ ಉಂಟುಮಾಡಿದೆ. ಚುನಾವಣೆಗೆ ಮುನ್ನ ನೀವು ಕಟ್ಟಿಕೊಟ್ಟ ಚಿತ್ರಣವೇ ಬೇರೆ ಆಗಿತ್ತು. ಅದರಂತೆಯೇ ಲೆಕ್ಕ ಹಾಕಿದರೂ ಕನಿಷ್ಠ 17ರಿಂದ 18 ಸ್ಥಾನಗಳನ್ನು ಗೆದ್ದು ತರಬಹುದು ಅಂದುಕೊಂಡಿದ್ದೆವು. ಆದರೆ ಚುನಾವಣೆ ಅನಂತರ ಚಿತ್ರಣ ಸಂಪೂರ್ಣ ತಿರುವುಮುರುವು ಆಗಿದೆ. ಹೊಣೆಗಾರಿಕೆ ಇರಬೇಕು ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
Related Articles
Advertisement
ಸೋತ ಸಚಿವರಿಗೆ ರಾಹುಲ್ ಪಾಠಸೋತ ಕ್ಷೇತ್ರಗಳ ಸಚಿವರನ್ನು ಭೇಟಿ ಮಾಡಿದ ರಾಹುಲ್, ರಾಜ್ಯದಲ್ಲಿ ಇನ್ನೂ 5-6 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆ ಇತ್ತು. ಎಲ್ಲರಿಗೂ ಹೊಣೆಗಾರಿಕೆ ಇರಬೇಕು. ಹಿನ್ನಡೆಯಾದಲ್ಲಿ ಸರಿಪಡಿಸಿಕೊಳ್ಳಬೇಕು ಎಂದರು. ಜತೆಗೆ ಎಲ್ಲ ನಾಯಕರೊಂದಿಗೆ ಚರ್ಚಿಸಿ, ಕಾರ್ಯಸೂಚಿ ಸಿದ್ಧಪಡಿಸಿ ಸಲ್ಲಿಸುವಂತೆ ಸಿಎಂ-ಡಿಸಿಎಂಗೆ ನಿರ್ದೇಶನ ನೀಡಿದರು ಎನ್ನಲಾಗಿದೆ. ಸಂಸತ್ತಿನಲ್ಲಿ ನಿಮ್ಮ ಕ್ಷೇತ್ರಗಳ ಸಹಿತ ಗಂಭೀರ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲಬೇಕು. ಪ್ರಮುಖ ಚರ್ಚೆಗಳಲ್ಲಿ ಭಾಗವಹಿಸಬೇಕು. ಭವಿಷ್ಯದ ದೃಷ್ಟಿಯಿಂದ ಜನರ ಮಧ್ಯೆ ಇದ್ದು ಕೆಲಸ ಮಾಡಬೇಕು. ಪಕ್ಷದ ಚೌಕಟ್ಟಿನಲ್ಲಿ ಹೇಳಿಕೆಗಳನ್ನು ನೀಡಬೇಕು. ನಿಮ್ಮ ವೈಯಕ್ತಿಕ ನೆಲೆಗಟ್ಟಿನಲ್ಲಿ ಹೇಳಿಕೆಗಳನ್ನು ನೀಡಬಾರದು. ಉತ್ತಮವಾಗಿ ಕಾರ್ಯನಿರ್ವ ಹಿಸುವ ಮೂಲಕ ಜನಮನ್ನಣೆ ಪಡೆಯಬೇಕು.
-ರಾಹುಲ್ ಗಾಂಧಿ, ಕಾಂಗ್ರೆಸ್ ನಾಯಕ