Advertisement
ಒಟ್ಟು ದೇಶದ 543 ಕ್ಷೇತ್ರಗಳ ಪೈಕಿ 542 ಕ್ಷೇತ್ರಗಳಿಗೆ ಚುನಾವಣೆ ನಡೆದಿದೆ. ತಮಿಳುನಾಡಿನ ವೆಲ್ಲೂರು ಲೋಕಸಭಾ ಕ್ಷೇತ್ರದ ಚುನಾವಣೆಯನ್ನು ಚುನಾವಣಾ ಆಯೋಗ ರದ್ದುಪಡಿಸಿತ್ತು. 542 ಲೋಕಸಭಾ ಚುನಾವಣೆ ಜೊತೆಗೆ ವಿಧಾನಸಭಾ ಚುನಾವಣೆಯೂ ನಡೆದಿದೆ. ಆಂಧ್ರಪ್ರದೇಶ, ಒಡಿಶಾ, ಸಿಕ್ಕಿಂ ಹಾಗೂ ಅರುಣಾಚಲ ಪ್ರದೇಶ ರಾಜ್ಯಗಳ ವಿಧಾನಸಭಾ ಚುನಾವಣೆ ನಡೆದಿದೆ.
ವಿಧಾನಸಭಾ ಕ್ಷೇತ್ರದ ಫಲಿತಾಂಶವೂ ನಾಳೆ ಬಹಿರಂಗವಾಗಲಿದೆ. 2019ರ ಲೋಕಸಭಾ ಚುನಾವಣೆಯಲ್ಲಿ ಸರಾಸರಿ ಶೇ.67.11ರಷ್ಟು ಮತದಾನವಾಗಿತ್ತು. 2014ರ ಲೋಕಸಭಾ ಚುನಾವಣೆಯಲ್ಲಿ ಶೇ.65.95ರಷ್ಟು ಮತದಾನವಾಗಿತ್ತು. ಜಮ್ಮು ಕಾಶ್ಮೀರದಲ್ಲಿ ಕಡಿಮೆ ಪ್ರಮಾಣದ (ಶೇ.29.39) ಮತದಾನವಾಗಿದೆ. 2014ಕ್ಕೆ ಹೋಲಿಸಿದಲ್ಲಿ ಬಿಹಾರ ಮತ್ತು ಉತ್ತರಪ್ರದೇಶದಲ್ಲಿ ಮತದಾನ ಪ್ರಮಾಣ ಹೆಚ್ಚಳವಾಗಿದೆ ಎಂದು ವರದಿ ತಿಳಿಸಿದೆ. ಇವಿಎಂ ಇಟ್ಟ ಭದ್ರತಾ ಕೊಠಡಿಯ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.ಕರ್ನಾಟಕದ ಕುಂದಗೋಳ ಮತ್ತು ಚಿಂಚೋಳಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಫಲಿತಾಂಶ ಕೂಡಾ ಗುರುವಾರ ಹೊರಬೀಳಲಿದೆ.
Related Articles
Advertisement