Advertisement
ಶನಿವಾರ ರಾತ್ರಿ ಶಿವಮೊಗ್ಗದಲ್ಲಿ ಯಡಿಯೂರಪ್ಪ ಹಾಗೂ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾತುಕತೆ ಬಳಿಕ ಗೊಂದಲಗಳನ್ನು ಇತ್ಯರ್ಥಗೊಳಿಸಿದ ಬಳಿಕವಷ್ಟೇ ದಿಲ್ಲಿ ಸಭೆಯಲ್ಲಿ ಪಾಲ್ಗೊಳ್ಳುವುದು ಸೂಕ್ತ ಎಂಬ ನಿರ್ಧಾರ ಕೈಗೊಂಡರು. ಈ ಹಿನ್ನೆಲೆಯಲ್ಲಿ ಯಡಿಯೂರಪ್ಪ ಪ್ರವಾಸ ದಿಢೀರ್ ರದ್ದಾಯಿತು ಎಂದು ತಿಳಿದು ಬಂದಿದೆ.
Related Articles
Advertisement
ಮೈಸೂರಿಗೆ ಯದುವೀರ್ ಹೆಸರು ಪ್ರಸ್ತಾವ ಮಹತ್ವದ ಬೆಳವಣಿಗೆಯೊಂದರಲ್ಲಿ ಮೈಸೂರು-ಕೊಡಗು ಕ್ಷೇತ್ರಕ್ಕೆ ಮೈಸೂರು ರಾಜವಂಶಸ್ಥ ಯದುವೀರ್ ಒಡೆಯರ್ ಹೆಸರನ್ನು ರಾಜ್ಯ ನಾಯಕರು ಪ್ರಸ್ತಾವಿಸಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ. ಹಾಲಿ ಸಂಸದ ಪ್ರತಾಪ್ ಸಿಂಹ ಅವರಿಗೆ ಕೊಡಗು-ಮೈಸೂರು ಭಾಗದ ಮುಖಂಡರ ವಿರೋಧವಿದೆ ಎಂಬ ಕಾರಣವನ್ನು ಮುಂದಿರಿಸಿ ರಾಜ್ಯ ಬಿಜೆಪಿಯ ಇಬ್ಬರು ಪ್ರಭಾವಿಗಳು ಹಾಗೂ ಒಬ್ಬರು ಆರೆಸ್ಸೆಸ್ ನಾಯಕರು ಬದಲಾವಣೆಯ ಪ್ರಸ್ತಾವವನ್ನು ಕಳೆದ ವಾರ ದಿಲ್ಲಿಯಲ್ಲಿ ನಡೆದ ಸಭೆಯಲ್ಲಿ ಮಂಡಿಸಿದ್ದಾರೆ. ಪ್ರತಾಪ್ ಬದಲು ಯದುವೀರ್ ಹೆಸರು ಇವರು ನೀಡಿದ ಪಟ್ಟಿಯಲ್ಲಿ ಇರುವುದು ದೃಢಪಟ್ಟಿದೆ. ಆದರೆ ಪ್ರತಾಪ್ ಬದಲಾವಣೆಗೆ ಈ ಸಭೆಯಲ್ಲಿ ಮುಂದಿಟ್ಟ ಕಾರಣಗಳಿಗೆ ಅಮಿತ್ ಶಾ ಒಪ್ಪಿಗೆ ಸಿಕ್ಕಿಲ್ಲ. ಒಂದೊಮ್ಮೆ ಮೈಸೂರು ಕ್ಷೇತ್ರದ ಅಭ್ಯರ್ಥಿ ಬದಲಾಯಿಸಿದರೆ ಸಿಎಂ ಸಿದ್ದರಾಮಯ್ಯ ಪುತ್ರ ಡಾ| ಯತೀಂದ್ರ ಅವರು ಕಾಂಗ್ರೆಸ್‌ನಿಂದ ಕಣಕ್ಕೆ ಇಳಿಯುತ್ತಾರೆ. ಸದ್ಯದ ಪರಿಸ್ಥಿತಿಯಲ್ಲಿ ಪ್ರತಾಪ್ ಬಿಟ್ಟು ಬೇರೆಯವರಿಗೆ ಅವಕಾಶ ಕಲ್ಪಿಸಿದರೆ ಒಂದು ಕ್ಷೇತ್ರ ಕಳೆದುಕೊಳ್ಳಬೇಕಾಗಬಹುದು ಎಂದು ಅಮಿತ್ ಶಾ ಸ್ಪಷ್ಟವಾಗಿ ತಿಳಿಸಿದ್ದಾರೆ. ರಾಜ್ಯ ನಾಯಕರ ಮಧ್ಯೆ ಭಿನ್ನ ಅಭಿಪ್ರಾಯ ಸುಳಿದಿರುವುದರಿಂದ ಅಂತಿಮ ತೀರ್ಮಾನವನ್ನು ಪ್ರಧಾನಿ ಮೋದಿ ತೆಗೆದುಕೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ. ನಾಳೆಯೊಳಗೆ ಎಲ್ಲವೂ ಅಂತಿಮವಾಗಲಿದೆ. 22, 23, 24 ಕ್ಷೇತ್ರ ಗೆಲುವಿನ ಪ್ರಶ್ನೆ ಅಲ್ಲ. ರಾಜ್ಯದಲ್ಲಿ ಬಿಜೆಪಿ ಹೊಸ ಇತಿಹಾಸವನ್ನು ಸೃಷ್ಟಿಸಲಿದೆ. ಬಹುತೇಕ 2 ಹಂತಗಳಲ್ಲಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಆಗಲಿದೆ. ಎಲ್ಲರ ಕುತೂಹಲಕ್ಕೆ ಮೂರ್‍ನಾಲ್ಕು ದಿನದಲ್ಲಿ ಉತ್ತರ ಲಭಿಸಲಿದೆ.
– ಬಿ.ವೈ. ವಿಜಯೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ ಮೈಸೂರಿನಲ್ಲಿ ಯಾವ ಜನಪ್ರತಿನಿಧಿಯೂ ಮಾಡಿರದಷ್ಟು ಅಭಿವೃದ್ಧಿ ಕೆಲಸಗಳನ್ನು ನಾನು ಮಾಡಿದ್ದೇನೆ. ಜನ ಖುಷಿಯಾಗಿದ್ದರೆ ಮೇಲಿನ ವರೂ ಅದೇ ನಿರ್ಧಾರ ಮಾಡು ತ್ತಾರೆ. ನನ್ನ ಕೆಲಸವೇ ನನಗೆ ಶ್ರೀರಕ್ಷೆ. ತಾಯಿ ಚಾಮುಂಡಿ ನನ್ನ ಕೈ ಬಿಡುವು ದಿಲ್ಲ.
-ಪ್ರತಾಪ್ ಸಿಂಹ, ಮೈಸೂರು-ಕೊಡಗು ಕ್ಷೇತ್ರದ ಸಂಸದ ನಾಳೆ ಬಿಜೆಪಿ ವರಿಷ್ಠರ ಜತೆ ಎಚ್‌ಡಿಕೆ ಸಭೆ
ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಸೋಮವಾರ ಬೆಳಗ್ಗೆ ದಿಲ್ಲಿಗೆ ತೆರಳಲಿದ್ದು, ಬಿಜೆಪಿ ವರಿಷ್ಠರ ಜತೆ ಮಾತುಕತೆ ನಡೆಸಲಿದ್ದಾರೆ. ಜೆಡಿಎಸ್‌ಗೆ ಬಿಟ್ಟುಕೊಡಬೇಕಾದ ಕ್ಷೇತ್ರ ಗಳಿಗೆ ಸಂಬಂಧಪಟ್ಟಂತೆ ಬಿಜೆಪಿ ವರಿಷ್ಠರು ಜೆಡಿಎಸ್ ನಾಯಕರ ಜತೆ ಪ್ರತ್ಯೇಕ ಚರ್ಚೆ ನಡೆಸಲಿದ್ದಾರೆ. ಆ ಬಳಿಕವೇ ರಾಜ್ಯದ ಪಟ್ಟಿ ಅಂತಿಮಗೊಳ್ಳಲಿದೆ ಎನ್ನಲಾಗಿದೆ. ಇಂದು ಬಿಜೆಪಿ 150 mಕ್ಷೇತ್ರಗಳ 2ನೇ ಪಟ್ಟಿ ?
ಹೊಸದಿಲ್ಲಿ: ಇತ್ತೀಚೆಗೆ ಲೋಕಸಭೆ ಚುನಾವಣೆಯ 195 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದ ಬಿಜೆಪಿಯು ರವಿವಾರ 150 ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆಗೆ ಸಿದ್ಧತೆ ನಡೆಸಿದೆ. ಈ ಪಟ್ಟಿಯಲ್ಲಿ ಮಹಾರಾಷ್ಟ್ರ, ಬಿಹಾರದ ಹೆಚ್ಚಿನ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸುವ ಸಾಧ್ಯತೆ ಇದೆ. ಜತೆಗೆ ಕರ್ನಾಟಕ, ಆಂಧ್ರ, ತ.ನಾಡು, ರಾಜಸ್ಥಾನ, ಹಿಮಾಚಲ, ಹರಿಯಾಣ, ಒಡಿಶಾ ಅಭ್ಯರ್ಥಿಗಳ ಹೆಸರೂ ಪ್ರಕಟ ವಾಗಬಹುದು ಎನ್ನಲಾಗಿದೆ.