Advertisement

ಮತ ಯಾರಿಗೆ ಚಲಾಯಿಸಿದ್ದೇವೆ?: ವಿವಿಪ್ಯಾಟ್‌ ಪ್ರಾತ್ಯಕ್ಷಿಕೆ

12:52 AM Mar 29, 2019 | Sriram |

ಮಡಿಕೇರಿ:ಲೋಕಸಭಾ ಚುನಾವಣೆ ಹಿನ್ನೆಲೆ ಮತದಾರರ ಶಿಕ್ಷಣ ಮತ್ತು ಸಹಭಾಗಿತ್ವ ಸಮಿತಿ ವತಿಯಿಂದ ಸೋಮವಾರಪೇಟೆ ಮತ್ತು ವಿರಾಜಪೇಟೆಯಲ್ಲಿ ಆಶಾ ಕಾರ್ಯಕರ್ತೆಯರು ಹಾಗೂ ಎಎನ್‌ಎಂಗಳಿಗೆ ಇವಿಎಂ ಮತ್ತು ವಿವಿಪ್ಯಾಟ್‌ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮವು ಬುಧವಾರ ನಡೆಯಿತು.

Advertisement

ಮತದಾರರು ತಾವು ಮತವನ್ನು ಯಾರಿಗೆ ಚಲಾಯಿಸಿದ್ದೇವೆ ಎಂಬುದನ್ನು ಖಾತರಿ ಪಡಿಸಿಕೊಳ್ಳಲು ವಿವಿಪ್ಯಾಟ್‌ ಸಹಕಾರಿಯಾಗಿದ್ದು, ಆ ನಿಟ್ಟಿನಲ್ಲಿ ಜಿಲ್ಲೆಯ ನಾನಾ ಮತಗಟ್ಟೆಗಳ ವ್ಯಾಪ್ತಿಗೆ ನಿಯೋಜಿಸಿರುವ ಸೆಕ್ಟರ್‌ ಅಧಿಕಾರಿಗಳು ವಿವಿಪ್ಯಾಟ್‌ ಬಗ್ಗೆ ಮಾಹಿತಿ ನೀಡುತ್ತಿದ್ದಾರೆ. ಗ್ರಾಮೀಣ, ಪಟ್ಟಣ ಮತ್ತು ನಗರ ಪ್ರದೇಶಗಳಲ್ಲಿ ವಿವಿಪ್ಯಾಟ್‌ ಬಗ್ಗೆ ಪ್ರಾತ್ಯಕ್ಷಿಕೆ ನೀಡಿ ಅರಿವು ಮೂಡಿಸುತ್ತಿರುವುದು ವಿಶೇಷವಾಗಿದೆ.

ಮತ ಖಾತ್ರಿಗೆ ವಿವಿಪ್ಯಾಟ್‌: ಚುನಾವಣಾ ಪ್ರಕ್ರಿಯೆ ಕುರಿತಂತೆ ಮತದಾರರಲ್ಲಿ ಜಾಗೃತಿ ಮತ್ತು ಅರಿವು ಮೂಡಿಸುವ ನಿಟ್ಟಿನಲ್ಲಿ ಚುನಾವಣಾ ಆಯೋಗ ಮತದಾರರ ವ್ಯವಸ್ಥಿತ ಶಿಕ್ಷಣ ಮತ್ತು ಸಹಭಾಗಿತ್ವ ಜಾಗೃತಿ ಸಮಿತಿ(ಸ್ವೀಪ್‌) ವತಿಯಿಂದ ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಇವಿಎಂ, ವಿವಿಪ್ಯಾಟ್‌ ಬಳಕೆ ಕುರಿತು ಪ್ರಾತ್ಯಕ್ಷಿಕೆಗಳು ನಡೆಯುತ್ತಿವೆ.

ಮತದಾರು ತಾವು ಆರಿಸಬೇಕೆಂದಿರುವ ವ್ಯಕ್ತಿ/ ಪಕ್ಷಕ್ಕೆ ಮತ ಚಲಾವಣೆಯಾಗಿರುವುದನ್ನು ಖಾತರಿ ಪಡಿಸಿಕೊಳ್ಳಬಹುದಾಗಿದೆ. ಬ್ಯಾಲೆಟ್‌ ಚೀಟಿ ಕಾಣಿಸದಿದ್ದರೆ ಹಾಗೂ ಬೀಪ್‌ ಶಬ್ದ ಕೇಳಿಸದಿದ್ದರೆ ಮತದಾರನು ಮತಗಟ್ಟೆಯ ಅಧ್ಯûಾಧಿಕಾರಿಯನ್ನು ಸಂಪರ್ಕಿಸಬಹುದು. ಇವಿಎಂ ಯಂತ್ರ ಸುರಕ್ಷಿತವಾಗಿವೆ. ಈ ಯಂತ್ರದಲ್ಲಿ ಮೈಕ್ರೋ ಕಂಟ್ರೋಲರ್‌ ಚಿಪ್‌ ಅಳವಡಿಸ ಲಾಗಿದ್ದು, ವಿದ್ಯುನ್ಮಾನ ಮತಯಂತ್ರವನ್ನು ಒಮ್ಮೆ ಮಾತ್ರ ಪೊ›ಗ್ರಾಂ ಮಾಡಲು ಸಾಧ್ಯ. ಚಿಪ್‌ನಲ್ಲಿರುವ ಸಾಫ್ಟ್ವೇರ್‌ ಕೋಡ್‌ ರೀಡ್‌ ಅಥವಾ ರೀರೈಟ್‌ ಮಾಡಲು ಸಾಧ್ಯವಿಲ್ಲ. ಈ ತಂತ್ರಾಂಶವನ್ನು ಬಿಇಎಲ್‌ ಮತ್ತು ಇಸಿಐಇಲ್‌ ವತಿಯಿಂದ ಅಭಿವೃದ್ಧಿಪಡಿಸಲಾಗಿದೆ. ಇವಿಎಂ ಯಂತ್ರ ಗಳನ್ನು ಅಂತರ್ಜಾಲ ಅಥವಾ ನೆಟ್‌ವರ್ಕ್‌ ಸಂಪರ್ಕದಿಂದ ನಿಯಂತ್ರಿಸಲು ಸಾಧ್ಯವಿಲ್ಲ. ಯಂತ್ರದಲ್ಲಿ ಆಪರೇಟಿಂಗ್‌ ಸಿಸ್ಟಮ್‌ ಬಳಕೆ ಮಾಡದಿರುವುದರಿಂದ ವೈರಸ್‌ ದಾಳಿ ಉಂಟಾಗುವ ಭಯವೂ ಇಲ್ಲ.

ಚುನಾವಣಾ ಸಂದೇಶ
ಚುನಾವಣಾಧಿಕಾರಿಗಳ ಕಚೇರಿ ಹಾಗೂ ಮತದಾರರ ವ್ಯವಸ್ಥಿತ ಶಿಕ್ಷಣ ಮತ್ತು ಸಹಭಾಗಿತ್ವ ಸಮಿತಿ ಜೊತೆಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಕೈಜೋಡಿಸಿದ್ದು, ವಿವಿಧ ಮಾಧ್ಯಮಗಳ ಮೂಲಕ ಚುನಾವಣಾ ಸಂದೇಶಗಳನ್ನು ಜನರಿಗೆ ತಲುಪಿಸಲಾಗುತ್ತಿದೆ. ಗ್ರಾಮೀಣಾ ಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ನಗರಸಭೆ ಮತ್ತು ನಗರ ಸ್ಥಳೀಯ ಸಂಸ್ಥೆಗಳು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ, ಸಾರ್ವಜನಿಕ ಶಿಕ್ಷಣ, ಕೃಷಿ, ತೋಟಗಾರಿಕೆ ಹಾಗೂ ಇನ್ನಿತರ ಪ್ರಮುಖ ಇಲಾಖೆಗಳು ಒಗ್ಗೂಡಿ ನಗರ, ಜಿಲ್ಲೆ, ತಾಲ್ಲೂಕು ಹಾಗೂ ಗ್ರಾ.ಪಂ. ಪಂಚಾಯತಿ ಮಟ್ಟದಲ್ಲಿ ಜಾಗೃತಿ ಮೂಡಿಸುತ್ತಿವೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next