Advertisement
ಮೊದಲ ಹಂತದಲ್ಲಿ ದಕ್ಷಿಣ ಕರ್ನಾಟಕ, ಹಳೆ ಮೈಸೂರು, ಬಯಲುಸೀಮೆ ಭಾಗದ 14 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಈ ಕ್ಷೇತ್ರಗಳಿಗೆ ಎಪ್ರಿಲ್ 26ರಂದು ಮತದಾನ ನಡೆಯಲಿದೆ.
ಅಧಿಸೂಚನೆ ಪ್ರಕಟ- ಮಾರ್ಚ್ 28, 2024
ನಾಮಪತ್ರ ಸಲ್ಲಿಕೆಗೆ ಕೊನೆ ದಿನ- ಎಪ್ರಿಲ್ 4, 2024
ನಾಮಪತ್ರ ಪರಿಶೀಲನೆ- ಎಪ್ರಿಲ್ 5, 2024
ನಾಮಪತ್ರ ವಾಪಸ್‌ಗೆ ಕೊನೆ ದಿನ- ಎಪ್ರಿಲ್ 8, 2024
ಮತದಾನ- ಎಪ್ರಿಲ್ 26, 2024
ಫಲಿತಾಂಶ- ಜೂನ್ 04, 2024 ಮೊದಲ ಹಂತದ ಕ್ಷೇತ್ರಗಳು
ಉಡುಪಿ – ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ (ಎಸ್ಸಿ), ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ (ಎಸ್ಸಿ), ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ, ಕೋಲಾರ (ಎಸ್ಸಿ) ಈ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ.