Advertisement

Lok Sabha Elections: ಎಚ್‌ಡಿಕೆ ಆಯ್ಕೆಯಾದರೆ ಕಾವೇರಿ ವಿವಾದಕ್ಕೆ ಪರಿಹಾರ: ಅಶೋಕ್‌

07:26 PM Apr 12, 2024 | Team Udayavani |

ಮಂಡ್ಯ: ಕಾವೇರಿ ನೀರು ಮಂಡ್ಯ ಜಿಲ್ಲೆಯ ಜನರಿಗೆ ಸಮರ್ಪಕವಾಗಿ ದಕ್ಕಬೇಕೆಂದರೆ ಕುಮಾರಸ್ವಾಮಿ ಅವರನ್ನು ಸಂಸದರನ್ನಾಗಿ ಆಯ್ಕೆ ಮಾಡಬೇಕು. ಅವರು ಆಯ್ಕೆಯಾದರೆ ಕಾವೇರಿ ವಿವಾದಕ್ಕೆ ಕೇಂದ್ರ ಸರ್ಕಾರದಲ್ಲಿ ಪರಿಹಾರ ಸಿಗಲಿದೆ. ಈ ನಿಟ್ಟಿನಲ್ಲಿ ಮಂಡ್ಯ ಜನ ಎನ್‌ಡಿಎಗೆ ಮತ ಕೊಡಬೇಕು ಎಂದು ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ಹೇಳಿದರು.

Advertisement

ಪ್ರಚಾರ ಸಭೆ ಉದ್ಘಾಟಿಸಿ ಮಾತನಾಡಿ, ಎಚ್‌.ಡಿ.ಕುಮಾರಸ್ವಾಮಿ ಅವರು ಮಂಡ್ಯವನ್ನು ಆಯ್ಕೆ ಮಾಡಿಕೊಂಡದ್ದಲ್ಲ. ಬೆಂಬಲಿಗರ ಒತ್ತಾಯದಿಂದ ಇಲ್ಲಿ ಸ್ಪಧಿ ìಸಿದ್ದಾರೆ. ಅವರಿಗೆ ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲೂ ಸ್ಪ ರ್ಧಿಸುವಂತೆ ಒತ್ತಡ ಇತ್ತು ಎಂದು ಹೇಳಿದರು. ಆದಿಚುಂಚನಗಿರಿ ಮಠ ಕೇವಲ ಜಾತಿಗೆ ಸೀಮಿತವಾಗಿಲ್ಲ. ಅಂತಹ ಮಠದ ವಿರುದ್ಧ ಕಾಂಗ್ರೆಸ್ಸಿಗರು ಲಘುವಾಗಿ ಮಾತನಾಡುತ್ತಾರೆ. ಇದಕ್ಕೆ ಮತದಾರರೇ ತಕ್ಕಪಾಠ ಕಲಿಸುತ್ತಾರೆ ಎಂದು ಹೇಳಿದರು.

ಮಂಡ್ಯಕ್ಕೆ ಕುಮಾರಸ್ವಾಮಿ, ದೇಶಕ್ಕೆ ಮೋದಿ ಅನಿವಾರ್ಯ: ಅಶೋಕ್‌
ಮಂಡ್ಯ: ದೇಶದಲ್ಲಿ ವಿಷಬೀಜ ಬಿತ್ತುತ್ತಿರುವ ಕಾಂಗ್ರೆಸ್‌ ಪಕ್ಷ ಮಾರಕವಾಗಿದ್ದು, ಬುಡ ಸಮೇತ ಕಿತ್ತೂಗೆಯಬೇಕು. ಕಾಂಗ್ರೆಸ್‌ ನಾಯಕರೆಲ್ಲ ಜಾಮೀನಿನ ಮೇಲೆ ಹೊರಗಿದ್ದಾರೆ.

ಕಾಂಗ್ರೆಸ್‌ನಿಂದ ದೇಶದ ಅಭಿವೃದ್ಧಿ ಸಾಧ್ಯವಿಲ್ಲ. ಆದ್ದರಿಂದ ಮಂಡ್ಯಕ್ಕೆ ಕುಮಾರಸ್ವಾಮಿ, ದೇಶಕ್ಕೆ ಮೋದಿ ಆಯ್ಕೆ ಅನಿವಾರ್ಯ ಎಂದು ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ಹೇಳಿದರು.

ಏ.14ರಂದು ಮೈಸೂರಿಗೆ ಮೋದಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ನಗರದ ಖಾಸಗಿ ಹೋಟೆಲ್‌ನಲ್ಲಿ ಶುಕ್ರವಾರ ಪೂರ್ವಭಾವಿ ಸಭೆ ಹಾಗೂ ಎನ್‌ಡಿಎ ಅಭ್ಯರ್ಥಿ ಎಚ್‌.ಡಿ.ಕುಮಾರಸ್ವಾಮಿ ಪರ ಪ್ರಚಾರ ಸಭೆ ಉದ್ಘಾಟಿಸಿ ಮಾತನಾಡಿದರು. ದೇಶದಲ್ಲಿ ಅ ಧಿಕಾರಕ್ಕಾಗಿ ಮೋದಿ ಮತ್ತು ರಾಹುಲ್‌ ನಡುವೆ ಪೈಪೋಟಿ ನಡೆಯುತ್ತಿದೆ. ಜನರು ಮೋದಿ ಎಂದು ಕೂಗುತ್ತಿದ್ದರೆ, ಕಾಂಗ್ರೆಸ್ಸಿಗರು ಮಾತ್ರ ರಾಹುಲ್‌ ಎಂದು ಅಂಜಿಕೆ ಪಡುತ್ತಿದ್ದಾರೆ. ಇದು ಕಾಂಗ್ರೆಸ್‌ನ ದಯನೀಯ ಸ್ಥಿತಿಗೆ ಹಿಡಿದ ಕೈಗನ್ನಡಿ ಎಂದು ಲೇವಡಿ ಮಾಡಿದರು.

Advertisement

“ಸಮ್ಮಿಶ್ರ ಸರ್ಕಾರ ಬೀಳಿಸಲು ಶಾಸಕರನ್ನು ಕಳುಹಿಸಿದ್ದೇ ಸಿದ್ದು’
ಮಂಡ್ಯ: ಕಳೆದ ಚುನಾವಣೆಯಲ್ಲಿ ನಿಖೀಲ್‌ ಕುಮಾರಸ್ವಾಮಿ ಅವರ ಸೋಲಿಗೆ ಕಾರಣ ಯಾರೆಂಬುದು ಇಡೀ ಜಗತ್ತಿಗೆ ಗೊತ್ತಿದೆ. ಸಮ್ಮಿಶ್ರ ಸರ್ಕಾರವನ್ನು ಬೀಳಿಸಿದ್ದು ಬಿಜೆಪಿ ಅಲ್ಲ. ನಾವು ನಮ್ಮ ಪಾಡಿಗೆ ಮನೆಯಲ್ಲಿಯೇ ಇದ್ದೆವು. ನಮ್ಮ ಬಳಿಗೆ ಶಾಸಕರನ್ನು ಕಳುಹಿಸಿದ್ದೇ ಸಿದ್ದರಾಮಯ್ಯ ಎಂದು ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ಕಿಡಿಕಾರಿದರು.

ಮೈಸೂರಿಗೆ ಮೋದಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ನಗರದ ಖಾಸಗಿ ಹೋಟೆಲ್‌ನಲ್ಲಿ ಶುಕ್ರವಾರ ಪೂರ್ವಭಾವಿ ಸಭೆ ಹಾಗೂ ಎನ್‌ಡಿಎ ಅಭ್ಯರ್ಥಿ ಎಚ್‌.ಡಿ.ಕುಮಾರಸ್ವಾಮಿ ಪರ ಪ್ರಚಾರ ಸಭೆ ಉದ್ಘಾಟಿಸಿ ಮಾತನಾಡಿ, ಬಿಜೆಪಿ-ಜೆಡಿಎಸ್‌ ಮೈತ್ರಿ ಹಾಲು ಜೇನು ಇದ್ದಂತೆ. ಆದರೆ, ಈ ಹಿಂದೆ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿಯಲ್ಲಿ ಕಾಂಗ್ರೆಸ್ಸಿಗರೇ ಹುಳಿ ಹಿಂಡಿದರು ಎಂದರು.

 

Advertisement

Udayavani is now on Telegram. Click here to join our channel and stay updated with the latest news.

Next