Advertisement
ಚುನಾವಣಾ ದಿನಾಂಕ ಪ್ರಕಟಗೊಂಡ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ಚುನಾವಣೆ ಪ್ರಜಾಪ್ರಭುತ್ವದ ಹಬ್ಬ. ಇಲ್ಲಿ ನಾವು ಹೋರಾಟ ಮಾಡಬೇಕು. ಅದನ್ನು ಸಂಭ್ರಮಿಸಿ, ಆನಂದಿಸಬೇಕು. ನಾವು ಮಾಡಿರುವ ಸಾಧನೆ ಬಗ್ಗೆ ಜನರಿಗೆ ಮನವರಿಕೆ ಮಾಡಬೇಕು. ಈ ಚುನಾವಣೆಯಲ್ಲಿ ನಾವು 20ಕ್ಕಿಂತ ಹೆಚ್ಚು ಕ್ಷೇತ್ರಗಳನ್ನು ಗೆಲ್ಲುವ ವಿಶ್ವಾಸವಿದೆ. ನಾವು ನಮ್ಮ ಅಭ್ಯರ್ಥಿಗಳನ್ನು ಬಹುತೇಕ ಅಂತಿಮಗೊಳಿಸಿದ್ದೇವೆ ಎಂದರು.
ಇದು ಕುಟುಂಬದ ನಡುವಣ ಯುದ್ಧವೋ ಅಥವಾ ಸಿದ್ಧಾಂತ ನಡುವಣ ಯುದ್ಧವೋ ಎಂಬ ಪ್ರಶ್ನೆಗೆ ಉತ್ತರಿಸಿದ ಡಿಕೆಶಿ, ನಾವು ದೇವೇಗೌಡರ ಕುಟುಂಬದ ವಿರುದ್ಧ ಅನೇಕ ಬಾರಿ ಹೋರಾಟ ಮಾಡಿದ್ದೇವೆ. ನಾನು ಕುಮಾರಸ್ವಾಮಿ, ಅನಿತಾ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ ಅವರನ್ನು ಎದುರಿಸಿ ಸೋಲಿಸಿದ್ದೇವೆ. ಈ ಹಿಂದೆ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯನ್ನು ಎದುರಿಸಿದ್ದೇವೆ ಎಂದು ತಿಳಿಸಿದರು. ಮಂಜುನಾಥ್ ಅವರು ಈ ಚುನಾವಣೆಯನ್ನು ಧರ್ಮ ಯುದ್ಧ ಎಂದು ಹೇಳಿದ್ದಾರೆ ಎಂದು ಕೇಳಿದಾಗ, ಇದೆಲ್ಲದರ ಬಗ್ಗೆ ಚುನಾವಣೆ ವೇದಿಕೆಯಲ್ಲಿ ಮಾತನಾಡೋಣ ಎಂದು ತಿಳಿಸಿದರು.
Related Articles
Advertisement