Advertisement

ವರ್ಷಾಂತ್ಯಕ್ಕೆಲೋಕಸಭೆ ಚುನಾವಣೆ?

10:32 AM Feb 03, 2018 | Team Udayavani |

ಬೆಂಗಳೂರು: ರಾಜಸ್ಥಾನ ಹಾಗೂ ಮಧ್ಯಪ್ರದೇಶ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿಯೇ ಲೋಕಸಭೆಗೂ ಚುನಾವಣೆ ನಡೆಯುವ ಸಾಧ್ಯತೆ ಇದೆ ಎಂದು ಕೇಂದ್ರದ ಮಾಜಿ ಸಚಿವ ಪಿ. ಚಿದಂಬರಂ ಹೇಳಿದ್ದಾರೆ.

Advertisement

ಶುಕ್ರವಾರ ಕೆಪಿಸಿಸಿ ಕಚೇರಿಗೆ ಆಗಮಿಸಿ ಬೂತ್‌ಮಟ್ಟದ ಸದಸ್ಯತ್ವ ನೇಮಕ ಪ್ರಕ್ರಿಯೆ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಈ ವರ್ಷಾಂತ್ಯದಲ್ಲಿ ರಾಜಸ್ಥಾನ ಹಾಗೂ ಮಧ್ಯಪ್ರದೇಶಗಳಿಗೆ ಚುನಾವಣೆ ನಡೆಯಲಿದೆ. ಅದೇ ಸಮಯದಲ್ಲಿ ಲೋಕಸಭೆಗೆ ಚುನಾವಣೆ ನಡೆಸಲು ಕೇಂದ್ರದ ಆಡಳಿತಾರೂಢ ಬಿಜೆಪಿ ಸಿದ್ಧತೆ ನಡೆಸಿದೆ. ಹೀಗಾಗಿ, ನಾವು ಲೋಕಸಭೆ ಚುನಾವಣೆ ಎದುರಿಸಲು ಸಜ್ಜಾಗಬೇಕು ಎಂದು ತಿಳಿಸಿದರು. ಕರ್ನಾಟಕದಲ್ಲಿ ಮೇನಲ್ಲಿ ನಡೆಯುವ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರಬೇಕು. ಪಕ್ಷ ಅಧಿಕಾರದಲ್ಲಿದ್ದರೆ ಲೋಕಸಭೆ ಚುನಾವಣೆಗೆ ಹೆಚ್ಚಿನ ಸ್ಥಾನ ಗೆಲ್ಲಲು ಅನುಕೂಲವಾಗಲಿದೆ ಎಂದು ಇದಕ್ಕೂ ಮುನ್ನ ನಡೆದ ಸಭೆಯಲ್ಲಿ ಹೇಳಿದರು. ದೇಶದಲ್ಲೆ ಮೊದಲ ಬಾರಿಗೆ ರಾಜ್ಯದಲ್ಲಿ ಬೂತ್‌ ಮಟ್ಟದ ಸಮಿತಿ ರಚನೆ ಮಾಡಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು ಎಂದು ಹೇಳಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next