Advertisement

Lok Sabha Elections ಗ್ಯಾರಂಟಿ ಕಾರ್ಡ್‌ ವಿತರಣೆ: ಆಯೋಗಕ್ಕೆ ಜೆಡಿಎಸ್‌ ದೂರು

11:19 PM Apr 22, 2024 | Team Udayavani |

ಬೆಂಗಳೂರು: ವಾಮಮರ್ಗದಲ್ಲಿ ಲೋಕಸಭೆ ಚುನಾವಣೆ ಗೆಲ್ಲಲು ಕಾಂಗ್ರೆಸ್‌ ಅಕ್ರಮಗಳನ್ನು ಎಸಗುತ್ತಿದೆ ಎಂದು ಜೆಡಿಎಸ್‌ ಚುನಾವಣ ಆಯೋಗಕ್ಕೆ ದೂರು ನೀಡಿದೆ.

Advertisement

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್‌ ಗಾಂಧಿಯವರು ಸಹಿ ಮಾಡಿರುವ ಗ್ಯಾರಂಟಿ ಕಾರ್ಡ್‌ಗಳನ್ನು ಮತದಾರರಿಗೆ ಹಂಚಲಾಗುತ್ತಿದೆ. ಈ ಮೂಲಕ ಮುಗ್ಧ ಮತದಾರರಿಗೆ ಆಮಿಷ ಒಡ್ಡಿ ಅವರನ್ನು ವಂಚಿಸಲಾಗುತ್ತಿದೆ ಎಂದು ಜೆಡಿಎಸ್‌ ಆರೋಪಿಸಿದೆ.

ಮಾಜಿ ಸಚಿವ ವೆಂಕಟರಾವ್‌ ನಾಡಗೌಡ, ಪರಿಷತ್‌ ಸದಸ್ಯ ಕೆ.ಎ.ತಿಪ್ಪೇಸ್ವಾಮಿ ಮುಂತಾದವರ ನಿಯೋಗ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಮೂಲಕ ಕೇಂದ್ರ ಚುನಾವಣ ಆಯೋಗಕ್ಕೆ ಸೋಮವಾರ ದೂರು ನೀಡಿದೆ.

 

Advertisement

Udayavani is now on Telegram. Click here to join our channel and stay updated with the latest news.

Next