Advertisement
ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಭ್ಯರ್ಥಿ ಆಯ್ಕೆ ವೇಳೆ ಆಕಾಂಕ್ಷಿಗಳ ಹೆಸರು ಚರ್ಚೆ ಆಗಲಿದೆ. ವಿಧಾನಸಭೆ ಚುನಾವಣೆಯಲ್ಲಿ ಸೋತವರು ಸ್ಪರ್ಧಿಸಬಹುದು. ಜನವರಿಯೊಳಗೆ ಅಭ್ಯರ್ಥಿಗಳ ಆಯ್ಕೆಯಾದರೆ ಒಳ್ಳೆಯದು.
Related Articles
Advertisement
ಸಿದ್ದರಾಮಯ್ಯ ಡೂಪ್ಲಿಕೇಟ್ ಮುಖ್ಯಮಂತ್ರಿ ಎಂಬ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಕುಮಾರಸ್ವಾಮಿ ವಿರೋಧ ಪಕ್ಷದಲ್ಲಿ ಇದ್ದು, ಅವರಿಗೆ ಎಲ್ಲ ಮಾತನಾಡಲು ಹಕ್ಕಿದೆ, ಮಾತನಾಡುತ್ತಾರೆ. ಈ ತರಹ ಮಾತನಾಡದಂತೆ ಹೇಳಲು ಆಗಲ್ಲ ಎಂದರು.
ಜಾತಿ ಗಣತಿ ವರದಿ ಏನಿದೆ ಎಂಬುದು ನಮಗೆ ಗೊತ್ತಿಲ್ಲ. ನಮಗೆ ಗೊತ್ತಿಲ್ಲದೇ ಇರುವಾಗ ವಿರೋಧ ಮಾಡುವುದು ಸರಿಯಲ್ಲ. ಜಾರಿಗೂ ಮೊದಲು ವರದಿ ಬಗ್ಗೆ ಚರ್ಚೆ ಆಗಬೇಕಿದೆ. ಕ್ಯಾಬಿನೆಟ್ ಮುಂದೆ ಈ ವಿಚಾರ ಬಂದಿಲ್ಲ. ಬೆಳಗಾವಿ ಅಧಿವೇಶನದಲ್ಲಿ ಈ ವಿಚಾರ ಚರ್ಚೆಗೆ ಬರಲ್ಲ ಎಂದು ಅವರು ಹೇಳಿದರು.
ಮುಂದೆ ನೋಡೋಣ..2028ರಲ್ಲಿ ಮುಖ್ಯಮಂತ್ರಿ ಗಾದಿಗೆ ಕ್ಲೇಮ್ ಮಾಡುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವ ಸತೀಶ ಜಾರಕಿಹೊಳಿ, ಈಗ ಇದರ ಬಗ್ಗೆ ಯಾವುದೇ ಚರ್ಚೆ ಇಲ್ಲ. ಮುಂದಿನ ಚುನಾವಣೆಯಲ್ಲಿ ಪಕ್ಷ ಅಧಿ ಕಾರಕ್ಕೆ ಬರಲಿ. ಯಾರು ಒನ್, ಟು, ಥ್ರಿ ಇರುತ್ತಾರೋ ಅದರ ಮೇಲೆ 2028ರ ಚುನಾವಣೆ ಗುರಿ ಇರಲಿದೆ. ಡಿಕೆಶಿ ಅವರೇ ಕೆಪಿಸಿಸಿ ಅಧ್ಯಕ್ಷರಾಗಿ ಇರುತ್ತಾರೆ. ಏನೇಯಾದರೂ ಲೋಕಸಭೆ ಚುನಾವಣೆ ನಂತರ ನೋಡೋಣ. ಈಗಂತೂ ಅಂತಹ ಯಾವುದೇ ಪ್ರಸ್ತಾವನೆ ಇಲ್ಲ ಎಂದರು.