Advertisement

Lok Sabha Elections; ಸೋಲಿನ ಭೀತಿಯಿಂದ ಸ್ಪರ್ಧೆ ಮಾಡದ ಖರ್ಗೆ: ಅಗರವಾಲ್‌

07:47 PM Apr 12, 2024 | Team Udayavani |

ಕಲಬುರಗಿ: ಲೋಕಸಭೆ ಚುನಾವಣೆಯಲ್ಲಿ ಸೋಲುವ ಭಯದಿಂದ ಎಐಸಿಸಿ ಅಧ್ಯಕ್ಷ ಡಾ|ಮಲ್ಲಿಕಾರ್ಜುನ ಖರ್ಗೆ, ಸಿಎಂ ಪುತ್ರ ಡಾ|ಯತೀಂದ್ರ ಹಾಗೂ ಸಚಿವರ್ಯಾರೂ ಸ್ಪರ್ಧಿಸುತ್ತಿಲ್ಲ. ಹೀಗಾಗಿ ಅವರ ಮಕ್ಕಳು ಹಾಗೂ ಮೊಮ್ಮಕ್ಕಳನ್ನು ನಿಲ್ಲಿಸಿದ್ದಾರೆ ಎಂದು ಬಿಜೆಪಿ ಉಸ್ತುವಾರಿ ರಾಧಾ ಮೋಹನ್‌ ಅಗರವಾಲ್‌ ಹೇಳಿದರು.

Advertisement

ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮಲ್ಲಿಕಾರ್ಜುನ ಖರ್ಗೆ 9 ಸಲ ಶಾಸಕರು ಹಾಗೂ 2ಬಾರಿ ಸಂಸದರಾಗಿದ್ದರೂ ಕಲಬುರಗಿ ಭಾಗ ಏಕೆ ಹಿಂದುಳಿಯಿತು ಎಂಬುದು ಮತದಾರರಿಗೆ ಮನವರಿಕೆಯಾಗಿದೆ. ಕರ್ನಾಟಕದಲ್ಲಿ ಬರಗಾಲವಿದ್ದರೂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಹಿಂದಿನ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಕಿಸಾನ್‌ ಸಮ್ಮಾನ್‌ ನಿಧಿ  ಯೋಜನೆಯ 4 ಸಾವಿರ ರೂ. ಪ್ರೋತ್ಸಾಹ ಧನ ನಿಲ್ಲಿಸಿದ್ದೇಕೆ. ಜೂನ್‌ ತಿಂಗಳಿನಿಂದಲೂ ಮಳೆ ಕೊರತೆಯಿದ್ದರೂ ಸಿದ್ದರಾಮಯ್ಯ ಕಿಸಾನ್‌ ಸಮ್ಮಾನ ನಿಧಿ  ಯೋಜನೆ ಬಂದ್‌ ಮಾಡಿದ್ದೇಕೆ? ಇದು ರೈತರ ಬಗ್ಗೆ ರಾಜ್ಯ ಸರ್ಕಾರಕ್ಕೆ ಕಾಳಜಿ ಇಲ್ಲ ಎನ್ನುವುದನ್ನು ನಿರೂಪಿಸುತ್ತದೆ ಎಂದರು.

 

Advertisement

Udayavani is now on Telegram. Click here to join our channel and stay updated with the latest news.

Next